Tumakuru News: ಅನ್ನಭಾಗ್ಯ ಯೋಜನೆ, ಪಡಿತರದಾರರ ಖಾತೆಗೆ ಹಣ ವರ್ಗಾವಣೆ; ಬ್ಯಾಂಕ್ ಖಾತೆ ಲಿಂಕ್ ಮಾಡದವರು ಕೂಡಲೇ ಮಾಡಿಸಿ: ಜಿಲ್ಲಾಧಿಕಾರಿ
ಕನ್ನಡ ಸುದ್ದಿ  /  ಕರ್ನಾಟಕ  /  Tumakuru News: ಅನ್ನಭಾಗ್ಯ ಯೋಜನೆ, ಪಡಿತರದಾರರ ಖಾತೆಗೆ ಹಣ ವರ್ಗಾವಣೆ; ಬ್ಯಾಂಕ್ ಖಾತೆ ಲಿಂಕ್ ಮಾಡದವರು ಕೂಡಲೇ ಮಾಡಿಸಿ: ಜಿಲ್ಲಾಧಿಕಾರಿ

Tumakuru News: ಅನ್ನಭಾಗ್ಯ ಯೋಜನೆ, ಪಡಿತರದಾರರ ಖಾತೆಗೆ ಹಣ ವರ್ಗಾವಣೆ; ಬ್ಯಾಂಕ್ ಖಾತೆ ಲಿಂಕ್ ಮಾಡದವರು ಕೂಡಲೇ ಮಾಡಿಸಿ: ಜಿಲ್ಲಾಧಿಕಾರಿ

Anna Bhagya Yojane: ಅನ್ನಭಾಗ್ಯ ಯೋಜನೆಯಡಿಯಲ್ಲಿ ತುಮಕೂರು ಜಿಲ್ಲೆಯ 5,29,331 ಪಡಿತರದಾರರ ಖಾತೆಗೆ 30,42,17,210 ಕೋಟಿ ರೂಪಾಯಿ ನಗದು ವರ್ಗಾವಣೆ ಮೂಲಕ ವರ್ಗಾಯಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

 ಅನ್ನಭಾಗ್ಯ ಯೋಜನೆ, ಪಡಿತರದಾರರ ಖಾತೆಗೆ ಹಣ ವರ್ಗಾವಣೆ; ಬ್ಯಾಂಕ್ ಖಾತೆ ಲಿಂಕ್ ಮಾಡದವರು ಕೂಡಲೇ ಮಾಡಿಸಿ ತುಮಕೂರು ಜಿಲ್ಲಾಧಿಕಾರಿ ಸೂಚನೆ.
ಅನ್ನಭಾಗ್ಯ ಯೋಜನೆ, ಪಡಿತರದಾರರ ಖಾತೆಗೆ ಹಣ ವರ್ಗಾವಣೆ; ಬ್ಯಾಂಕ್ ಖಾತೆ ಲಿಂಕ್ ಮಾಡದವರು ಕೂಡಲೇ ಮಾಡಿಸಿ ತುಮಕೂರು ಜಿಲ್ಲಾಧಿಕಾರಿ ಸೂಚನೆ.

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಒಟ್ಟು 6,61,625 ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳು ಚಾಲ್ತಿಯಲ್ಲಿದ್ದು, ಈ ಪೈಕಿ ಸಕ್ರಿಯವಾಗಿರುವ ಮತ್ತು ಆಧಾರ್ ಸಂಖ್ಯೆಯೊಂದಿಗೆ ಬ್ಯಾಂಕ್ ಖಾತೆ ಲಿಂಕ್ ಮಾಡಿರುವ ಒಟ್ಟು 5,29,331 ಪಡಿತರ ಚೀಟಿದಾರರ ಖಾತೆಗೆ ಒಟ್ಟು 30,42,17,210 ಕೋಟಿ ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ವರ್ಗಾಯಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ಮಾಧ್ಯಮದವರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿರುವ ಅಂತ್ಯೋದಯ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಿಸಲಾಗುವ 5 ಕೆಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆಜಿಗೆ ರೂ. 34 ರಂತೆ ಪಡಿತರ ಚೀಟಿಯಲ್ಲಿನ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಬಿಪಿಎಲ್ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ ರೂ. 34 X 5= 170 ಗಳನ್ನು ನೀಡಲಾಗುವುದು. ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಹೊಂದಿರುವ ಕುಟುಂಬದಲ್ಲಿ 3 ಅಥವಾ 3ಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆಜಿ ಆಹಾರ ಧಾನ್ಯ ಪಡೆಯುತ್ತಿರುವುದರಿಂದ ಅಂತಹ ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿ ಕುಟುಂಬಗಳಿಗೆ ನಗದು ಸೌಲಭ್ಯ ನೀಡಲಾಗುವುದಿಲ್ಲ ಹಾಗೂ ಕಳೆದ ಮೂರು ತಿಂಗಳಲ್ಲಿ ಆಹಾರ ಧಾನ್ಯ ಪಡೆಯದೇ ಇರುವ ಕುಟುಂಬಗಳಿಗೆ ನಗದು ವರ್ಗಾವಣೆ ಸೌಲಭ್ಯ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಅಂತ್ಯೋದಯ ಪಡಿತರ ಚೀಟಿಯ ಕುಟುಂಬದಲ್ಲಿ 4 ಸದಸ್ಯರಿದ್ದರೆ ಸದರಿ ಕುಟುಂಬಕ್ಕೆ ರೂ. 170 (34 X 5 X 1) ಗಳನ್ನು, 5 ಸದಸ್ಯರನ್ನು ಹೊಂದಿರುವ ಕುಟುಂಬಕ್ಕೆ ರೂ.510 (34 X 5 X 3) ಗಳನ್ನು, 6 ಸದಸ್ಯರನ್ನು ಹೊಂದಿರುವ ಕುಟುಂಬಕ್ಕೆ ರೂ.850 (34 X 5 X 5) ಗಳನ್ನು ನೀಡಲಾಗುತ್ತದೆ, ಹೆಚ್ಚಿನ ಸದಸ್ಯರಿದ್ದಲ್ಲಿ ಇದೇ ರೀತಿಯ ಅನುಪಾತವು ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

ಪಡಿತರ ಚೀಟಿಯಲ್ಲಿ ಕುಟುಂಬ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿಗಳನ್ನು ನಗದು ವರ್ಗಾವಣೆ ಸೌಲಭ್ಯದಿಂದ ಹೊರಗಿಡಲಾಗಿದೆ, ಈ ಸಮಸ್ಯೆಯನ್ನು ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರ್ ಕಾರ್ಯಾಲಯಕ್ಕೆ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

70831 ಪಡಿತರ ಚೀಟಿಗಳ ಬ್ಯಾಂಕ್ ಖಾತೆ ಸಮಸ್ಯೆ ಇರುತ್ತದೆ, ಪಡಿತರ ಚೀಟಿದಾರರಿಗೆ ಹಣ ಜಮೆಯಾಗದೇ ಇರುವುದರಿಂದ ಸದರಿಯವರು ಬ್ಯಾಂಕಿಗೆ ಭೇಟಿ ನೀಡಿ ತಮ್ಮ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಈ ತಿಂಗಳಿನ 20ನೇ ತಾರೀಖಿನ ಒಳಗಾಗಿ ಲಿಂಕ್ ಮಾಡಿಸಿ, ಖಾತೆಯನ್ನು ಸಕ್ರಿಯಗೊಳಿಸಿದ್ದಲ್ಲಿ ಮಾತ್ರ ಬ್ಯಾಂಕ್ ಖಾತೆಗೆ ವರ್ಗಾಯಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

Whats_app_banner