ಕನ್ನಡ ಸುದ್ದಿ  /  Karnataka  /  Another Accused Arrested In Praveen Nettaru Murder Case

Praveen Nettaru murder case: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಇದೀಗ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಪ್ರವೀಣ್ ನೆಟ್ಟಾರು
ಪ್ರವೀಣ್ ನೆಟ್ಟಾರು

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಇದೀಗ ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ನಿನ್ನೆ (ಮಾರ್ಚ್​ 4) ರಾತ್ರಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ತೌಫಿಲ್​ ಎಂಬಾತನನ್ನು ಬಂಧಿಸಲಾಗಿದೆ. ಈತನನ್ನು ಹುಡುಕಿಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ನಾಯಕ ಪ್ರವೀಣ್​ ನೆಟ್ಟಾರು ಹತ್ಯೆಯಾಗಿತ್ತು. ಬೆಳ್ಳಾರೆಯಿಂದ ಪೆರುವಾಜೆಗೆ ಹೋಗುವ ಕ್ರಾಸ್‌ ಬಳಿ ಕೋಳಿ ಮಾಂಸದಂಗಡಿ ಹೊಂದಿರುವ ಪ್ರವೀಣ್‌ ನೆಟ್ಟಾರು ಅವರು 2022ರ ಜುಲೈ 26ರ ರಾತ್ರಿ ಅಂಗಡಿಗೆ ಬಾಗಿಲು ಹಾಕುತ್ತಿರುವಾಗ ಬೈಕೊಂದರಲ್ಲಿ ಮೂವರು ದುಷ್ಕರ್ಮಿಗಳು ಬಂದು ಮಾರಾಕಾಸ್ತ್ರಗಳಿಂದ ಏಕಾಏಕೆ ದಾಳಿ ಮಾಡಿ ಹತ್ಯೆ ಮಾಡಿದ್ದರು.

ಪ್ರಕರಣ ಸಂಬಂಧ ಈವರೆಗೆ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಬಲೆ ಬೀಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ 1,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

ಆರೋಪಿಗಳಿಗೆ ಪಿಎಫ್‌ಐ ಜತೆ ನಂಟು ಇರುವ ಕುರಿತು ಮಾಹಿತಿ ಲಭಿಸಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿದ್ದರು. ಭಯೋತ್ಪಾದನೆ ಉದ್ದೇಶದಿಂದ ಪ್ರವೀಣ್‌ ನೆಟ್ಟಾರು ಹತ್ಯೆ ಮಾಡಲಾಗಿದೆ ಎಂದು ಎನ್ಐಎ ಹೇಳಿದೆ.

ಶಿವಮೊಗ್ಗದಲ್ಲಿ ಬಜರಂಗ ದಳ ಕಾರ್ಯಕರ್ತ ಹರ್ಷನ ಕೊಲೆ ಬಳಿಕ ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿದ್ದನ್ನು ತೀವ್ರವಾಗಿ ಖಂಡಿಸಿದ್ದ ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ತಾಲೂಕು ಶಾಸಕರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಎಸ್. ಅಂಗಾರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಬಿಜೆಪಿಯ ಅನೇಕ ಯುವ ಮೋರ್ಚಾ ಸದಸ್ಯರು, ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮೃತ ಪ್ರವೀಣ್​ ಕುಟುಂಬಕ್ಕೆ ರಾಜ್ಯ ಬಿಜೆಪಿ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಸಚಿವ ಅಶ್ವತ್ಥ್​ ನಾರಾಯಣ ಕೂಡ ವ್ಯಯಕ್ತಿಕವಾಗಿ 10 ಲಕ್ಷ ರೂ. ನೆರವು ಘೋಷಿಸಿದ್ದಾರೆ. ಎಲ್ಲರಿಗೂ ರಕ್ಷಣೆ ನೀಡಲು ಸಾಧ್ಯವೇ? ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ತೇಜಸ್ವಿ ಸೂರ್ಯ ಕೂಡ, ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಮೃತ ಪ್ರವೀಣ್ ಕುಟುಂಬಕ್ಕೆ 15 ಲಕ್ಷ ಸಹಾಯ ಹಸ್ತ ನೀಡುವ ಭರವಸೆ ನೀಡಿದ್ದರು. ಪ್ರವೀಣ್ ನೆಟ್ಟಾರು ಮನೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೂಡ ಭೇಟಿ ನೀಡಿ, 5 ಲಕ್ಷ ರೂ. ಚೆಕ್ ವಿತರಣೆ ಮಾಡಿದ್ದರು.

IPL_Entry_Point