ಕನ್ನಡ ಸುದ್ದಿ  /  Karnataka  /  Anti-encroachment Drive: Jcb Roars Early In Jp Nagar 9th Round; Bda Recovered Property Of 30 Crore Rupee Value

Anti-encroachment drive: ಜೆಪಿ ನಗರ 9 ನೇ ಹಂತದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ; 30 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ಮರುವಶ

Anti-encroachment drive: ಒತ್ತುವರಿ ಕಾರ್ಯಾಚರಣೆಯನ್ನು ಮುಂದುವರಿಸಿರುವ ಬಿಡಿಎ, ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿಯಲ್ಲಿ 22 ಗುಂಟೆ ಜಾಗವನ್ನು ಮಂಗಳವಾರ ಮರುವಶಪಡಿಸಿಕೊಂಡಿದೆ.

ಒತ್ತುವರಿ ಕಾರ್ಯಾಚರಣೆಯನ್ನು ಮುಂದುವರಿಸಿರುವ ಬಿಡಿಎ ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿ ಸರ್ವೆ ಸಂಖ್ಯೆ 4/1 ರಲ್ಲಿ 22 ಗುಂಟೆ ಜಾಗವನ್ನು ವಶಕ್ಕೆ ತೆಗೆದುಕೊಂಡಿತು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಾದ ನಂಜುಂಡೇಗೌಡ, ರವಿಕುಮಾರ್, ಶ್ರೀನಿವಾಸ್ ಮತ್ತು ಎಂಜಿನಿಯರ್ ಅಶೋಕ್ ಇದ್ದರು.
ಒತ್ತುವರಿ ಕಾರ್ಯಾಚರಣೆಯನ್ನು ಮುಂದುವರಿಸಿರುವ ಬಿಡಿಎ ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿ ಸರ್ವೆ ಸಂಖ್ಯೆ 4/1 ರಲ್ಲಿ 22 ಗುಂಟೆ ಜಾಗವನ್ನು ವಶಕ್ಕೆ ತೆಗೆದುಕೊಂಡಿತು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಾದ ನಂಜುಂಡೇಗೌಡ, ರವಿಕುಮಾರ್, ಶ್ರೀನಿವಾಸ್ ಮತ್ತು ಎಂಜಿನಿಯರ್ ಅಶೋಕ್ ಇದ್ದರು.

ಬೆಂಗಳೂರು: ಭೂಒತ್ತುವರಿದಾರರ ವಿರುದ್ಧದ ದಾಳಿ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮಂಗಳವಾರ ಸುಮಾರು 30 ಕೋಟಿ ರೂಪಾಯಿ ಮೌಲ್ಯದ 22 ಗುಂಟೆ ಜಾಗವನ್ನು ಮರುವಶಪಡಿಸಿದೆ.

ಜೆಪಿ ನಗರ 9 ನೇ ಹಂತದ 1 ನೇ ಬ್ಲಾಕ್ ನಲ್ಲಿನ ಆಲಹಳ್ಳಿ ಸರ್ವೆ ಸಂಖ್ಯೆ 4/1 ರಲ್ಲಿ 22 ಗುಂಟೆ ಜಾಗ ಬಿಡಿಎಗೆ ಸೇರಿದ್ದಾಗಿತ್ತು. ಆದರೆ, ಸದರಿ ಜಾಗದಲ್ಲಿ ಕಳೆದ ಹತ್ತು ವರ್ಷಗಳಿಂದ ಕೆಲವು ಅತಿಕ್ರಮಣದಾರರು ತಾತ್ಕಾಲಿಕ್ ಶೆಡ್ ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು.

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸದರಿ ಜಾಗ ಸೇರಿ ಇನ್ನಿತರೆ ಒತ್ತುವರಿ ಮತ್ತು ಬಿಡಿಎ ಜಾಗವನ್ನು ಕಬ್ಜ ಮಾಡಿಕೊಂಡಿರುವ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿ, ಕೂಡಲೇ ಇಂತಹ ಜಾಗಗಳನ್ನು ಮರುವಶಕ್ಕೆ ಪಡೆದುಕೊಳ್ಳಬೇಕೆಂದು ಬಿಡಿಎ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳಿಗೆ ಸೂಚನೆ ನೀಡಿದ್ದರು.

ಅದರಂತೆ ಮಂಗಳವಾರ ಬಿಡಿಎ ಆಯುಕ್ತರ ಆದೇಶ ಪಡೆದ ಬಿಡಿಎ ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿ ನಂಜುಂಡೇಗೌಡ ಮತ್ತು ಪೊಲೀಸ್ ಅಧಿಕಾರಿಗಳಾದ ರವಿಕುಮಾರ್, ಶ್ರೀನಿವಾಸ್ ಹಾಗೂ ಎಂಜಿನಿಯರ್ ಅಶೋಕ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ 6 ತಾತ್ಕಾಲಿಕ ಶೆಡ್ ಗಳನ್ನು ತೆರವುಗೊಳಿಸಲಾಗಿದೆ.

ನಕಲಿ ಎನ್ಒಸಿ ಇದ್ದರೆ ಕ್ರಿಮಿನಲ್ ಕೇಸ್: ವಿಶ್ವನಾಥ್ ಎಚ್ಚರಿಕೆ

ಈ ಹಿಂದೆ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಹಣದಾಸೆಗೆ ಬಿದ್ದು ಪ್ರಭಾವಿಗಳು ಮತ್ತು ಭೂಕಬಳಿಕೆದಾರರಿಗೆ ನಕಲಿ ಎನ್ಒಸಿಗಳನ್ನು ಕೊಟ್ಟು ಬಿಡಿಎ ಜಾಗವನ್ನು ಅತಿಕ್ರಮಣವಾಗುವಂತೆ ಮಾಡಿದ್ದರು. ಇದೀಗ ಇಂತಹ ನಕಲಿ ಎನ್ಒಸಿ ಪ್ರಕರಣಗಳನ್ನು ಬಯಲಿಗೆ ತರಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಯಾವುದೇ ಅಧಿಕಾರಿ ಮತ್ತು ಸಿಬ್ಬಂದಿ ತಪ್ಪೆಸಗಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಅದೇ ರೀತಿ, ನಕಲಿ ಎನ್ಒಸಿ ಬಳಸಿಕೊಂಡು ಬಿಡಿಎ ಜಾಗವನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಂಡಿರುವ ಕಬಳಿಕೆದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಎಚ್ಚರಿಕೆ ನೀಡಿದರು.

ಹೀಗೆ ನಕಲಿ ಎನ್ಒಸಿ ಅಥವಾ ನಕಲಿ ದಾಖಲೆಗಳನ್ನು ಇಟ್ಟುಕೊಂಡು ಬಿಡಿಎ ಜಾಗದ ಮೇಲೆ ಹಿಡಿತ ಸಾಧಿಸುತ್ತಿರುವವರು ಕೂಡಲೇ ಅಂತಹ ದಾಖಲೆಗಳನ್ನು ವಾಪಸ್‌ ನೀಡಿ ಬಿಡಿಎ ಜಾಗವನ್ನು ಬಿಟ್ಟುಕೊಡಬೇಕು. ಇಲ್ಲವಾದರೆ ಕಾನೂನು ರೀತಿಯಲ್ಲಿ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದೂ ವಿಶ್ವನಾಥ್ ಎಚ್ಚರಿಕೆ ನೀಡಿದರು.

ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ

ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಿಡಿಎ ಜಾಗ ಅತಿಕ್ರಮಿಸಿಕೊಂಡಿರುವವರ ಬಗ್ಗೆ ಮಾಹಿತಿ ಮತ್ತು ದಾಖಲೆಗಳಿದ್ದರೆ ಬಿಡಿಎ ಅಧ್ಯಕ್ಷರು, ಆಯುಕ್ತರು ಮತ್ತು ಜಾಗೃತ ದಳದ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತರಬೇಕೆಂದು ಮನವಿ ಮಾಡಿರುವ ವಿಶ್ವನಾಥ್, ಹೀಗೆ ಮಾಹಿತಿ ನೀಡುವ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿಟ್ಟು, ತನಿಖೆ ನಡೆಸಿ ಅಂತಹ ಜಾಗಗಳನ್ನು ವಶಕ್ಕೆ ಪಡೆದು, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

IPL_Entry_Point