ಕನ್ನಡ ಸುದ್ದಿ  /  ಕರ್ನಾಟಕ  /   ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ.

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ (ಫೋಟೋ-ಸಂಗ್ರಹ)
ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ (ಫೋಟೋ-ಸಂಗ್ರಹ)

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 3064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತೆದ. ಇದರಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಸಾಮಾನ್ಯ ಪುರುಷ) (ಸಿಎಆರ್ /ಡಿಎಆರ್) 2996 ಹುದ್ದೆಗಳು ಹಾಗೂ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ತೃತೀಯ ಲಿಂಗ) ನ 68 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಮಯ 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ನಿಯಮಾವಳಿ 1977 ಹಾಗೂ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸುತ್ತಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್ https://ksp.karnataka.gov.in/ ಅಥವಾ https://ksp-recruitment.in/ ನಲ್ಲಿ ಆನ್-ಲೈನ್ (ಎಲೆಕ್ಟ್ರಾನಿಕ್ ಮಾರ್ಗ)

ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿಗಳನ್ನು ಖುದ್ಧಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶ ಇರುವುದಿಲ್ಲ. ವಿಶೇಷ ಸೂಚನೆಗಳ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವು ಮುಕ್ತಾಯವಾದ ನಂತರ 10 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಸದರಿ ದಿನಾಂಕದೊಳಗಾಗಿ ಅಭ್ಯರ್ಥಿಯು ತಾನು ಸಲ್ಲಿಸಿರುವ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ ಹಾಗೂ ಇತರೆ ಯಾವುದೇ ಅಂಶಗಳ ಬದಲಾವಣೆ ಮಾಡಬೇಕಾದಲ್ಲಿ ಖುುದ್ದಾಗಿ ಇಲ್ಲವೇ ಅಂಚೆ ಮೂಲಕ ಸಂಬಂಧಪಟ್ಟ ದೃಢೀಕೃತ ದಾಖಲೆಗಳೊಂದಿಗೆ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ , ನೇಮಕಾತಿ, ಕಾರ್ಲಟನ್ ಭವನ, ಅರಮನೆ ರಸ್ತೆ, ಬೆಂಗಳೂರು ರವರ ಕಚೇರಿಗೆ ಸಲ್ಲಿಸತಕ್ಕದ್ದು.

ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಹ ಅಭ್ಯರ್ಥಿಗಳು ಖಾಲಿ ಹುದ್ದೆಗಳ ವರ್ಗೀಕರಣವನ್ನು ನೋಡಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಶುಲ್ಕ:

ಸಾಮಾನ್ಯ ಅರ್ಹತೆ, ಪ್ರವರ್ಗ 2 (ಎ), 2 (ಬಿ), 3 (ಎ), 3(ಬಿ),ಗೆ ಸೇರಿದಂತೆ ಅಭ್ಯರ್ಥಿಗಳಿಗೆ 400 ರೂಪಾಯಿ ಶುಲ್ಕ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂಪಾಯಿ ಶುಲ್ಕ

ನಿಗದಿತ ಅರ್ಜಿ ಶುಲ್ಕವನ್ನು ಆನ್ ಲೈನ್ ಮುಖಾಂತರ ಪಾವತಿಸಬಹುದು ಹಾಗೂ ಚಲನ್ ಡೌನ್ ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಮತ್ತು ಸ್ಥಳೀಯ ಅಂಚೆ ಕಚೇರಿ ಗಳಲ್ಲಿ ಪಾವತಿಸಬಹುದು. ಆನ್ ಲೈನ್, ಬ್ಯಾಯಂಕ್ ಅಥವಾ ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕದೊಂದಿಗೆ ಸೇವಾ ಶುಲ್ಕವನ್ನು ಅಭ್ಯರ್ಥಿಗಳೇ ಭರಿಸಬೇಕು.

ಟಿಪ್ಪಣಿ: ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಅದನ್ನು ನೇಮಕಾತಿ ಸಮಿಯು ನಡೆಸುವು ಇತರೆ ಯಾವುದೇ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ.

ಮೇಲಿನ ಕಾಲಂಗಳಲ್ಲಿ ನಮೂದಿಸಿದಂತೆ ಅಭರ್ಥಿಗಳಿಗೆ ಅನ್ವಯಿಸುವ ಅರ್ಜಿ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕವನ್ನು ಆನ್ ಲೈನ್ ಮುಖಾಂತರ ಇಲ್ಲವೇ ನಗದು ರೂಪದಲ್ಲಿ ಮಾತ್ರ ಮೇಲೆ ಮೇಲೆ ನಮೂದಿಸಿದ ಅಧಿಕೃತ ಬ್ಯಾಂಕಿನ ಶಾಖೆಗಳಲ್ಲಿ ಅಥವಾ ಅಂಚೆ ಕಚೇರಿಗಳಲ್ಲಿ ಪಾವತಿಸತಕ್ಕದು. (ಪಾವತಿಸುವ ವಿವರಗಳನ್ನು ಈ ಕೆಳಗಿನ ಪ್ಯಾರಾದಲ್ಲಿ ನೀಡಲಾಗಿದೆ.) ಡಿಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ವಿಧಾನ:

ಅರ್ಜಿದಾರ ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಕೃತ ವೆಬ್ ಸೈಟ್ ನಲ್ಲಿರುವ ಮಾಹಿತಿ ಸೂಚಿ ಅಥವಾ ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಂಡು ಭರ್ತಿ ಮಾಡಬೇಕು. ಇಲಾಖೆಯ ಅಧಿಕೃತ ವೆಬ್ ಸೈಟ್ https://ksp.karnataka.gov.in/ or https://ksp-recruitment.in/ ನಲ್ಲಿ ನೀಡಲಾಗಿರುವ ಸೂಚನೆಗಳನ್ನು ಓದಿಕೊಂಡು ಇರುವ ಅರ್ಜಿಯನ್ನು ಆನ್ ಲೈನ್ ಮುಖಾಂತರ ಯಾವುದೇ ತಪ್ಪು ಮಾಹಿತಿಯನ್ನು ನೀಡದೇ ಭರ್ತಿ ಮಾಡಬೇಕು. ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ, ಸದರಿ ಅರ್ಜಿಯಲ್ಲಿನ ತಪ್ಪು ಮಾಹಿತಿಯನ್ನು ಬದಲಾವಣೆ ಮಾಡಲು ಅವಕಾಶ ಇರುವುದಿಲ್ಲ. ಹಾಗೂ ಅಂತಹವರ ವಿರುದ್ಧ ಕಾನೂನಿನ್ವಯ ನೇಮಕಾತಿ ಸಮಿತಿಯು ಸೂಕ್ತ ಕ್ರಮ ಕೈಗೊಳ್ಳುವುದು.

ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅರ್ಜಿದಾರ ಒಂದು ಬಿಳಿ ಹಾಳೆಯ ಮೇಲೆ ಪಾಸ್ ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರ, ಸಹಿ ಮತ್ತು ಅಧಿಸೂಚನೆಯ ಕ್ರಮ ಸಂಖ್ಯೆ 8(ಬಿ)ರಲ್ಲಿ ನಮೂದಿಸಲಾಗಿರುವ ಯಾವುದಾರೂ ಗುರುತಿನ ಚೀಟಿಯನ್ನು ಪ್ರತ್ಯೇಕವಾಗಿ (Soft Copy - less than 250 KB) ಸ್ಕ್ಯಾನ್ ಮಾಡಿಟ್ಟುಕೊಂಡಿರಬೇಕು. ನಂತರ ಅರ್ಜಿದಾರನ ಹೆಸರು, ಜಾತಿ, ಮೀಸಲಾತಿಗಳ ವಿವರ, ಹುಟ್ಟಿದ ದಿನಾಂಕ ಮತ್ತು ಇತ್ಯಾದಿ ವಿವರಗಳನ್ನು ಭರ್ತಿ ಮಾಡಿ ಕೊನೆಯದಾಗಿ ಸ್ಕ್ಯಾನ್ ಮಾಡಿಟ್ಟುಕೊಂಡಿರುವ ಭಾವಚಿತ್ರ, ಸಹಿ ಮತ್ತು ಗುರುತಿನ ಚೀಟಿಯನ್ನು ಕಂಪ್ಯೂಟರ್ ಮುಖೇನ ಅಪ್ ಲೋಡ್ ಮಾಡುವುದು.

ಇಲ್ಲವಾದಲ್ಲಿ ಅಂತಹ ಅರ್ಜಿದಾರರು ಆಲ್ ಲೈನ್ ನಲ್ಲಿ ಅರ್ಜಿಯನ್ನು ತುಂಬಿ ಮುಂದುರೆಯಲು ಸಾಧ್ಯವಾಗುವುದಿಲ್ಲ. ಅರ್ಜಿದಾರ ನೀಡಿರುವ ವಿವರಗಳು ಎಲ್ಲಾ ರೀತಿಯಿಂದಲೂ ಸಮರ್ಪಕವಾಗಿದ್ದಲ್ಲಿ ಮಾತ್ರ ಆಲ್ ಲೈನ್ ಮುಖಾಂತರ ಅರ್ಜಿ ಶುಲ್ಕವನ್ನು ಅಥವಾ ಚಲನ್ ಮುದ್ರಿಸಬಹುದು. ಚಲನ್ ಮುದ್ರಿಸಲು ಜನರೇಟ್ ಚಲನ್ ಬಟನ್ ಮೇಲೆ ಕ್ಲಿನ್ ಮಾಡಿದಾಗ ತ್ರಪತಿ ಬ್ಯಾಂಕ್ ಅಥವಾ ಅಂಚೆ ಕಚೇರಿ ಚಲನ್ ಸೃಜನೆಯಾಗುತ್ತದೆ. ಆ ಚಲನ್ ನಲ್ಲಿ ಅರ್ಜಿಯ ಸಂಖ್ಯೆಯೊಂದಿಗೆ ಆಯ್ಕೆ ಮಾಡಿರುವ ಘಟಕ, ನಿಮ್ಮ ಭಾವಚಿತ್ರ, ಪ್ರವರ್ಗ, ಮೀಸಲಾಗಿತಿಗಳ ವಿವರ ಮತ್ತು ಪಾವತಿಸಬೇಕಾಗಿರುವ ನಿಗದಿತ ಶುಲ್ಕಗಳ ವಿವರಗಳು ಇರುತ್ತವೆ. ಆ ಚಲನ್ ಪ್ರತಿಯನ್ನು ಮುದ್ರಿಸಿ ಅಥವಾ ಪ್ರಿಂಟ್ ಮಾಡಿಕೊಳ್ಳತಕ್ಕದ್ದು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19/ 09/ 2022 ಬೆಳಗ್ಗೆ 10 ಗಂಟೆಯಿಂದ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/ 10/ 2022 ಸಂಜೆ 6 ಗಂಟೆಯವರೆಗೆ

ಆನ್ ಲೈನ್ ನಲ್ಲಿ ಇಲ್ಲವೇ ಅಧಿಕೃತ ಬ್ಯಾಂಕ್ ಶಾಖೆಗಳ ಅಥವಾ ಅಂಚೆ ಕಚೇರಿಗಳ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 3 11 2022

ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್‌ ಮತ್ತು ಟ್ವಿಟರ್‌ ನಲ್ಲಿ ಫಾಲೋಮಾಡಿ.

IPL_Entry_Point