ASHA and Anganwadi workers: ಕರ್ನಾಟಕ ಬಜೆಟ್‌ನಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೇನು ಸಿಕ್ಕಿತು?
ಕನ್ನಡ ಸುದ್ದಿ  /  ಕರ್ನಾಟಕ  /  Asha And Anganwadi Workers: ಕರ್ನಾಟಕ ಬಜೆಟ್‌ನಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೇನು ಸಿಕ್ಕಿತು?

ASHA and Anganwadi workers: ಕರ್ನಾಟಕ ಬಜೆಟ್‌ನಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೇನು ಸಿಕ್ಕಿತು?

ASHA and Anganwadi workers: ಚುನಾವಣಾ ಪೂರ್ವ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಏನು ಕೊಡುಗೆ ಕೊಟ್ಟಿದ್ಧಾರೆ? ತಳಮಟ್ಟದಲ್ಲಿ ಜನರ ನಡುವೆ ಕೆಲಸ ಮಾಡುವ ಈ ಕಾರ್ಯಕರ್ತೆಯರ ಬಹು ನಿರೀಕ್ಷೆಯ ಬೇಡಿಕೆಗಳಿಗೆ ಮುಖ್ಯಮಂತ್ರಿ ಹೇಗೆ ಸ್ಪಂದಿಸಿದರು. ಇಲ್ಲಿದೆ ಬಜೆಟ್‌ನಲ್ಲಿ ಘೋಷಿಸಿರುವ ವಿವರ.

ರಾಜ್ಯ ಬಜೆಟ್‌ ಮಂಡಿಸಿದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯ ಬಜೆಟ್‌ ಮಂಡಿಸಿದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚುನಾವಣಾ ಪೂರ್ವ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲರನ್ನೂ ಓಲೈಸುವ ಕೆಲಸ ಮಾಡಿದ್ದಾರೆ. ಸಮಾಜದ ತಳಮಟ್ಟದಲ್ಲಿ ಜನರ ನಡುವೆ ಕೆಲಸ ಮಾಡುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಏನು ಕೊಡುಗೆ ಕೊಟ್ಟಿದ್ಧಾರೆ? ಈ ಕಾರ್ಯಕರ್ತೆಯರ ಬಹು ನಿರೀಕ್ಷೆಯ ಬೇಡಿಕೆಗಳಿಗೆ ಮುಖ್ಯಮಂತ್ರಿ ಹೇಗೆ ಸ್ಪಂದಿಸಿದರು. ಇಲ್ಲಿದೆ ಬಜೆಟ್‌ ಘೋಷಣೆಯ ವಿವರಗಳು.

ಪ್ರಸಕ್ತ ಹಣಕಾಸು ವರ್ಷದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಬಿಸಿಯೂಟ ತಯಾರಕರು, ಬಿಸಿಯೂಟ ಸಹಾಯಕರು, ಅತಿಥಿ ಉಪನ್ಯಾಸಕರು, ಅತಿಥಿ ಶಿಕ್ಷಕರು, ಗ್ರಾಮ ಸಹಾಯಕರು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳ ಗೌರವಧನ ಹೆಚ್ಚಿಸಲಾಗಿದೆ. ಇದರಿಂದ 4.45 ಲಕ್ಷ ಜನರಿಗೆ ಫಲ ದೊರೆತಿದೆ. ಒಟ್ಟು 775 ಕೋಟಿ ರೂ. ಗಳನ್ನು ಪ್ರಸಕ್ತ ವರ್ಷದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಸಮಾಜದ ಏಳಿಗೆಗೆ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ಹೆಚ್ಚಿಸುವ ಪ್ರಯತ್ನದ ಭಾಗವಾಗಿ ಶಿಕ್ಷಣ, ಆರೋಗ್ಯ ಹಾಗೂ ಪೌಷ್ಟಿಕತೆ ವಲಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರು ಹಾಗೂ ಸಹಾಯಕರು ಮತ್ತು ಗ್ರಂಥಪಾಲಕರ ಸೇವೆಯನ್ನು ಗುರುತಿಸಿ, ಅವರಿಗೆ ನೀಡುವ ಮಾಸಿಕ ಗೌರವಧನವನ್ನು 1,000 ರೂಪಾಯಿಯಂತೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಖುಷಿ ಸುದ್ದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಗುರುತಿಸಿರುವ ರಾಜ್ಯ ಸರ್ಕಾರವು 2023-24ನೇ ಸಾಲಿನಿಂದ ಅವರಿಗೆ ಉಪಧನವನ್ನು (Gratuity) ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 40 ಕೋಟಿ ರೂ. ಗಳ ಅನುದಾನ ಮೀಸಲಿಡಲಾಗಿದೆ ಎಂದೂ ಅವರು ಇದೇ ವೇಳೆ ಹೇಳಿದರು.

ಇನ್ನು, 25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂಪಾಯಿ ಹಾಗೂ ಅಂಗನವಾಡಿ ಸಹಾಯಕಿಯರಿಗೆ 30,000 ರೂಪಾಯಿ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂಗಡಪತ್ರದಲ್ಲಿ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ವಿಭಜಿಸಿ ಮಕ್ಕಳ ಪೌಷ್ಟಿಕತೆ ಕುರಿತು ಒಂದು ಪ್ರತ್ಯೇಕ ಇಲಾಖೆ ಮತ್ತು ಮಹಿಳಾ ಸಬಲೀಕರಣ ಇಲಾಖೆಯನ್ನು ರೂಪಿಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಅವರು ಸದನಕ್ಕೆ ತಿಳಿಸಿದರು.

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮಹಿಳೆಯರು ದುಡಿಮೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮ ಶಿಶುಪಾಲನಾ ಸೌಲಭ್ಯಗಳು ಅಗತ್ಯವಾಗಿದೆ. ಇದಕ್ಕಾಗಿ 2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪಿಸಿದ್ದ ಕಾರ್ಯಕ್ರಮವನ್ನು ವಿಸ್ತರಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗಾಗಿ ನಗರ ಪ್ರದೇಶದಲ್ಲಿ 4,000 ಶಿಶುಪಾಲನಾ ಕೇಂದ್ರಗಳು ಮತ್ತು ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯ ಒಗ್ಗೂಡಿಸುವಿಕೆಯ ಮೂಲಕ 500 ಶಿಶುವಿಹಾರಗಳನ್ನು ಪ್ರಾರಂಭಿಸಲಾಗುವುದು ಎಂದು ಅವರು ಘೋಷಿಸಿದರು.

Whats_app_banner