ಕನ್ನಡ ಸುದ್ದಿ  /  Karnataka  /  Assembly Elections Rahul Gandhi Rally In Kolar On April 9

Rahul Gandhi: ಏ.9ಕ್ಕೆ ಕೋಲಾರದಲ್ಲಿ ರಾಹುಲ್ ರ‍್ಯಾಲಿ; ಮೋದಿ ಉಪನಾಮ ಹೇಳಿಕೆಯ ಸ್ಥಳದಿಂದಲೇ ಅಬ್ಬರಿಸೋಕೆ ವೇದಿಕೆ ಸಿದ್ಧತೆ

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 9 ರಂದು ಕೋಲಾರದಲ್ಲಿ ಜೈ ಭಾರತ್ ರ್ಯಾಲಿ ನಡೆಸಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಫೋಟೋ-ಫೈಲ್)
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಫೋಟೋ-ಫೈಲ್)

ಬೆಂಗಳೂರು: 2019ರಲ್ಲಿ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ರಾಹುಲ್ ಗಾಂಧಿ ತಮ್ಮ ಭಾಷಣ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮ ಹೇಳಿಕೆಗೆ ಸಂಬಂಧಿಸಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ಜಿಲ್ಲಾ ನ್ಯಾಯಾಲಯ ಅವರನ್ನು ದೋಷಿ ಎಂದು ತೀರ್ಪು ನೀಡಿ ಶಿಕ್ಷೆ ನೀಡಿತ್ತು. ಇದೀಗ ಇದೇ ಕೋಲಾರದಲ್ಲಿ ಮತ್ತೊ ಅಬ್ಬೋರಿಸೋಕೆ ರೆಡಿಯಾಗಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 9 ರಂದು ಕೋಲಾರದಲ್ಲಿ ‘ಜೈ ಭಾರತ್’ ಮೆಗಾ ರ‍್ಯಾಲಿ ನಡೆಸಲಿದ್ದಾರೆ. ಜನರ ಧ್ವನಿ, ನೀವು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ. ಈ ಧ್ವನಿ ಇನ್ನಷ್ಟು ಬಲಗೊಳ್ಳಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನಿನ್ನೆ (ಶುಕ್ರವಾರ) ಟ್ವೀಟ್ ಮಾಡಿದ್ದಾರೆ.

ವಿಶೇಷ ಎಂದರೆ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿ ನಡೆಸುತ್ತಿರುವ ಮೊದಲ ಚುನಾವಣಾ ರ‍್ಯಾಲಿಯು ಹಾಗೂ ಸಾರ್ವಜನಿಕ ಸಭೆ ಇದಾಗಿದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ರಾಜ್ಯ ವಿಧಾನಸಭೆ ಚುನಾವಣೆ ಮಹತ್ವದ್ದಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಜನ ತಿರಸ್ಕರಿಸಲಿದ್ದಾರೆ ಎಂದು ಜನತಾದಳ ನಾಯಕರು ಹೇಳುತ್ತಿದ್ದಾರೆ.

ಮಾರ್ಚ್ 29 ರಂದು ಚುನಾವಣಾ ಆಯೋಗ ರಾಜ್ಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

2019ರ ಮಾರ್ಚ್ 23 ರಂದು ಚುನಾವಣಾ ರ‍್ಯಾಲಿಯಲ್ಲಿ 'ಮೋದಿ ಉಪನಾಮ' ಹೇಳಿಕೆಗಾಗಿ 2019 ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ಸೂರತ್ ಜಿಲ್ಲಾ ನ್ಯಾಯಾಲಯವು ದೋಷಿ ಎಂದು ಘೋಷಿಸಿತ್ತು. ಅಲ್ಲದೆ, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸೂರತ್ ಪಶ್ಚಿಮದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ದಾಖಲಿಸಿದ್ದರು. ನ್ಯಾಯಾಲಯವು ದೋಷಿ ಎಂದು ಘೋಷಿಸಿದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ.

ಎರಡು ವರ್ಷಗಳ ಜೈಲು ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಲಾಗಿದ್ದು, ಅದಕ್ಕೂ ಮೊದಲು ರಾಹುಲ್ ಗಾಂಧಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬಹುದಾಗಿದೆ.

ಗೌತಮ್ ಅದಾನಿ ವಿಷಯದ ಗಮನವನ್ನ ಬೇರೆಡೆಗೆ ಸೆಳೆಯಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಇದರ ಭಾಗವಾಗಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿದೆ ಎಂದು ಕೈ ನಾಯಕರ ಆರೋಪವಾಗಿದೆ.

IPL_Entry_Point