ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್‌ಗೆ ಹಿನ್ನಡೆ; ಕಾಂಗ್ರೆಸ್‌ನ ಮನ್ಸೂರ್ ಅಲಿ ಖಾನ್‌ ಮುನ್ನಡೆ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್‌ಗೆ ಹಿನ್ನಡೆ; ಕಾಂಗ್ರೆಸ್‌ನ ಮನ್ಸೂರ್ ಅಲಿ ಖಾನ್‌ ಮುನ್ನಡೆ

ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್‌ಗೆ ಹಿನ್ನಡೆ; ಕಾಂಗ್ರೆಸ್‌ನ ಮನ್ಸೂರ್ ಅಲಿ ಖಾನ್‌ ಮುನ್ನಡೆ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಕಾನ್ ಮುನ್ನಡೆ ಸಾಧಿಸಿದ್ದಾರೆ. ವಿವರ ಇಲ್ಲಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್‌ಗೆ ಹಿನ್ನಡೆ; ಕಾಂಗ್ರೆಸ್‌ನ ಮನ್ಸೂರ್ ಅಲಿ ಖಾನ್‌ ಮುನ್ನಡೆ ಸಾಧಿಸಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್‌ಗೆ ಹಿನ್ನಡೆ; ಕಾಂಗ್ರೆಸ್‌ನ ಮನ್ಸೂರ್ ಅಲಿ ಖಾನ್‌ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು: 4ನೇ ಬಾರಿಗೆ ಲೋಕಸಭೆಗೆ ಪ್ರವೇಶಿಸುವ ನಿರೀಕ್ಷೆಯಲ್ಲಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ (Bangalore Central Lok Sabha Constituency) ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ (PC Mohan) ಹಿನ್ನೆಡೆಯಲ್ಲಿದ್ದಾರೆ. ಇವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ (Mansoor Ali Khan) 40,219 ಮತಗಳ ಅಂತರವನ್ನು ಕಾಯ್ದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿರುವ ಕಾರಣ ಆಡಳಿತಾರೂಢ ಕಾಂಗ್ರೆಸ್‌ಗೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿದೆ. ಪಂಚ ಗ್ಯಾರಂಟಿಗಳ ಪರಿಣಾಮದಿಂದ ಇಲ್ಲಿ ತಮ್ಮ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರದ್ದಾಗಿದೆ.

ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಈ ಪೈಕಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಇದರಲ್ಲಿ ನಾಲ್ವರು ಸಿಎಂ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದಾರೆ.

Whats_app_banner