ಬೆಂಗಳೂರು ನಗರದ ಪ್ರಮುಖ ಭಾಗಗಳಲ್ಲಿ ನಾಳೆ ವಿದ್ಯುತ್‌ ಸರಬರಾಜು ಇರೋಲ್ಲ, ಬೆಸ್ಕಾಂನಿಂದ ಎಲ್ಲೆಲ್ಲಿ ವಿದ್ಯುತ್‌ ಕಡಿತ
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ನಗರದ ಪ್ರಮುಖ ಭಾಗಗಳಲ್ಲಿ ನಾಳೆ ವಿದ್ಯುತ್‌ ಸರಬರಾಜು ಇರೋಲ್ಲ, ಬೆಸ್ಕಾಂನಿಂದ ಎಲ್ಲೆಲ್ಲಿ ವಿದ್ಯುತ್‌ ಕಡಿತ

ಬೆಂಗಳೂರು ನಗರದ ಪ್ರಮುಖ ಭಾಗಗಳಲ್ಲಿ ನಾಳೆ ವಿದ್ಯುತ್‌ ಸರಬರಾಜು ಇರೋಲ್ಲ, ಬೆಸ್ಕಾಂನಿಂದ ಎಲ್ಲೆಲ್ಲಿ ವಿದ್ಯುತ್‌ ಕಡಿತ

ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಜೂನ್‌ 5ರ ಗುರುವಾರದಂದು ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ತಿಳಿಸಿದೆ.ವರದಿ: ಎಚ್‌.ಮಾರುತಿ. ಬೆಂಗಳೂರು

ಬೆಂಗಳೂರಿನ ಹಲವು ಭಾಗಗಳಲ್ಲಿ ಗುರುವಾರ ವಿದ್ಯುತ್‌ ವ್ಯತ್ಯಯ ಆಗಲಿದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ಗುರುವಾರ ವಿದ್ಯುತ್‌ ವ್ಯತ್ಯಯ ಆಗಲಿದೆ.

ಬೆಂಗಳೂರು: ನಾಳೆ ಗುರುವಾರ (ದಿ 05.06.2025)ದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 66ಕೆ.ವಿ ಬಾಣಸವಾಡಿ ಹೆಚ್.ಬಿ.ಆರ್ ಲೈನ್ ಮತ್ತು 66ಕೆ.ವಿ ಬಾಣಸವಾಡಿ-ಐಟಿಐ ಲೈನ್‌ ಗಳಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ಕೆಳಕಂಡ ಬಡಾವಣೆಗಳ ನಿವಾಸಿಗಳು ಸಹಕರಿಸಬೇಕು ಎಂದೂ ಕೋರಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳ ವಿವರ ಹೀಗಿದೆ.

ಹೊರಮಾವು ಪಿ&ಟಿ ಲೇ ಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ,ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ ಗ್ರೋವ್, ದೇವಮಾತಾ ಶಾಲೆ, ಅಮರ್‌ ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್: 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂ.ಎಸ್. ಎಸ್.ಬಿ ವಾಟರ್‌ ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ಲೇ ಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ ಕ್ಲೇವ್, ಪ್ರಕೃತಿ ಲೇ ಔಟ್ ಹೊಯ್ಸಳನಗರ,ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ,ಎನ್.ಆರ್.ಐ ಲೇಔಟ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್,ಸಮದ್ ಲೇಔಟ್, ಯಾಸಿನ್‌ ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ ಕುಮಾರ್ ಪಾರ್ಕ್, ಸಂಗೊಳ್ಳಿರಾಯಣ್ಣ ರಸ್ತೆ, ನೆಹರು ರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆಯಲ್ಲಿ ಗುರುವಾರ ಕರೆಂಟ್‌ ಇರೋಲ್ಲ.

ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ,ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣ ರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್, ಫ್ಲವರ್‌ ಗಾರ್ಡನ್,ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ ಶಿಪ್, ಮಲ್ಲಪ್ಪ ಲೇಔಟ್,ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್‌ನಲ್ಲೂ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನೆಗೌಡ ರಸ್ತೆ,ಸತ್ಯಮೂರ್ತಿ ರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್, ಬೆಥೆಲ್‌ ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಗುರುವಾರ ವಿದ್ಯುತ್‌ ಕಡಿತ ಆಗಲಿದೆ ಎಂದು ತಿಳಿಸಲಾಗಿದೆ.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.