Bangalore: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 23 ಕೋಟಿ ರೂ ಬೆಲೆಯ ಗಾಂಜಾ ವಶ; ಕಸ್ಟಮ್ಸ್ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ
ಕನ್ನಡ ಸುದ್ದಿ  /  ಕರ್ನಾಟಕ  /  Bangalore: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 23 ಕೋಟಿ ರೂ ಬೆಲೆಯ ಗಾಂಜಾ ವಶ; ಕಸ್ಟಮ್ಸ್ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Bangalore: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 23 ಕೋಟಿ ರೂ ಬೆಲೆಯ ಗಾಂಜಾ ವಶ; ಕಸ್ಟಮ್ಸ್ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Bangalore Crime: ಬ್ಯಾಂಕಾಕ್ ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ರೂಪಾಯಿ ಮೌಲ್ಯ ಗಾಂಜಾವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬ್ಯಾಂಕಾಕ್ ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. (ಫೋಟೊ-ಸಂಗ್ರಹ)
ಬ್ಯಾಂಕಾಕ್ ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. (ಫೋಟೊ-ಸಂಗ್ರಹ)

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಚಕ್ಷಣ ದಳದ ಸಿಬ್ಬಂದಿ ಜನವರಿ 9 ರ ಕಳೆದ ಗುರುವಾರ ತಡರಾತ್ರಿ 23 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಳ್ಳಲಾದ ಗಾಂಜಾ ಒಟ್ಟು ಮೌಲ್ಯ 23 ಕೋಟಿ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಬ್ಯಾಂಕಾಕ್ ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ ಗಾಂಜಾವನ್ನು ಕಳ್ಳ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಕೂಡಲೇ ಕಸ್ಟಮ್ಸ್ ಸಿಬ್ಬಂದಿ ಈ ಮೂವರನ್ನು ಬಂಧಿಸಿ, ವಿವಿಧ ಮಾದರಿಯ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ವಿರುದ್ಧ ಮಾದಕ ವಸ್ತುಗಳ ನಿಯಂತ್ರಣ ಕಾಯಿದೆ (ಎನ್ಡಿಪಿಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ. ಹೈಡ್ರೋಫೋನಿಕ್ಸ್ ಮಾದರಿಯಲ್ಲಿ ನೀರಿನ ಮೇಲೆ ಬೆಳೆಯುವ ಗಾಂಜಾ ಬೀಜ ಮತ್ತು ಮೈರವಾನ್ ಗಾಂಜಾ ಹೂವುಗಳು ಇದರಲ್ಲಿ ಸೇರಿವೆ. ಪ್ರತಿಯೊಂದು ಮಾದರಿಯ ಗಾಂಜಾವನ್ನೂ ಪ್ರತ್ಯೇಕ ಕವರ್ ನಲ್ಲಿ ಪ್ಯಾಕ್ ಮಾಡಿಕೊಂಡು ಸಾಗಿಸುತ್ತಿದ್ದರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾರುಕಟ್ಟೆಯಲ್ಲಿ ಒಂದು ಕೆಜಿ ಗಾಂಜಾ ಬೆಲೆ ಒಂದು ಕೋಟಿ ರೂಪಾಯಿ ಇದೆ. ಅದರಲ್ಲೂ ಹೈಡ್ರೋಫೋನಿಕ್ಸ್ ಗಾಂಜಾಗೆ ಹೆಚ್ಚನ ಬೇಡಿಕೆ ಇದೆ ಎನ್ನಲಾಗಿದೆ.

ಸೋದರ ಮಾವನ ಬ್ಲಾಕ್‌ ಮೇಲ್‌ ಗೆ ಬೇಸತ್ತು ಯುವತಿ ಆತ್ಮಹತ್ಯೆ

ಸೋದರ ಮಾವನ ಕಿರುಕುಳಕ್ಕೆ ಬೇಸತ್ತು ಐಟಿ ಕಂಪನಿಯೊಂದರ ಮಹಿಳಾ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಚ್ಎಎಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತನಗೆ ಸಹಕರಿಸದಿದ್ದರೆ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಸೋದರ ಮಾವ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಇದರಿಂದ ಬೇಸತ್ತ 24 ವರ್ಷದ ಯುವತಿ ಸುಹಾಸಿ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆಯ ಸೋದರಮಾವ ಪ್ರವೀಣ್ ಸಿಂಗ್ ಎಂಬಾತನೇ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನ ಮೊಬೈಲ್ ಮತ್ತು ಪೆನ್ ಡ್ರೈವ್ ನಲ್ಲಿ ನಿನ್ನ ಖಾಸಗಿ ವಿಡಿಯೋ ಇದೆ. ನಾನು ಕರೆದಾಗ ನೀನು ಬರಬೇಕು. ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಜನವರಿ 12 ರಂದು ಕುಂದಲಹಳ್ಳಿಯ ಹೊಟೇಲ್ ನಲ್ಲಿ ರೂಂ ಬುಕ್‌ ಮಾಡಿ ಅಲ್ಲಿಗೆ ಕರೆದಿದ್ದಾನೆ. ಹೋಟೆಲ್‌ ಗೆ ಬಂದ ಸುಹಾಸಿ ಸಿಂಗ್ ಹೊಟೇಲ್ ನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ಮಾಡಿದ್ದಾರೆ. ಕೂಡಲೇ ಈಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಿಸದೆ ಸುಹಾಸಿ ಮೃತಪಟ್ಟಿದ್ದಾಳೆ.

ಯುವತಿಯ ಪೋಷಕರು ಆತ್ಮಹತ್ಯೆ ಸಂಬಂಧ ಹೆಚ್ಎಎಲ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪ್ರವೀಣ್ ಸಿಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಸಿಂಗ್ ಖಾಸಗಿ ಕಂಪನಿಯೊಂದರ ಉದ್ಯೋಗಿ. ಈತ ಸುಹಾಸಿ ಸಿಂಗ್ ತಂದೆಯ ತಂಗಿಯ ಪತಿ. ಕೆ ಆರ್ ಪುರದ ನಿವಾಸಿಯಾಗಿದ್ದ ಇವರ ಮನೆಯಲ್ಲಿ ಸುಹಾಸಿ ಸಿಂಗ್ ಕೆಲವು ದಿನಗಳ ಮಟ್ಟಿಗೆ ವಾಸವಿದ್ದರು. ಆ ಸಂದರ್ಭದಲ್ಲಿ ಪ್ರವೀಣ್ ಸಿಂಗ್‌, ಸುಹಾಸಿ ಅವರ ಖಾಸಗಿ ಪೋಟೊ ವಿಡಿಯೋ ಸಂಗ್ರಹಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಆ ವಿಡಿಯೋ ಮತ್ತು ಫೋಟೊಗಳನ್ನು ಇಟ್ಟುಕೊಂಡು ಈಕೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಎಚ್ಎಎಲ್ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.

Whats_app_banner