ಕನ್ನಡ ಸುದ್ದಿ  /  ಕರ್ನಾಟಕ  /  Bangalore Crime News: ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ತಾಯಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ

Bangalore Crime News: ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ತಾಯಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ

ಉಸಿರುಗಟ್ಟಿಸಿ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಜೈಲು ಸೇರಿದ್ದ ಆರೋಪಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.

ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ಆರೋಪಿ ತಾಯಿ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ಆರೋಪಿ ತಾಯಿ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನು ಅಮಾನವೀಯವಾಗಿ ಕೊಂದು ಜೈಲು ಸೇರಿದ್ದ ಆರೋಪಿ ತಾಯಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗಂಗಾದೇವಿ ಎಂಬುವರೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಮೂಲಗಳ ಪ್ರಕಾರ, ಏಪ್ರಿಲ್ 9ರ ಮಂಗಳವಾರ ರಾತ್ರಿ ಜಾಲಹಳ್ಳಿಯಲ್ಲಿ ಆಂಧ್ರಪ್ರದೇಶ ಮೂಲದ ಗಂಗಾದೇವಿ ತನ್ನ 7 ವರ್ಷದ ಮಗಳು ಮತ್ತು 9 ವರ್ಷದ ಮಗನನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಂದಿದ್ದಾಳೆ ಎಂದು ವರದಿಯಾಗಿದೆ. ಪೊಲೀಸರಿಗೆ ಶರಣಾದ ಆರೋಪಿ ಮಹಿಳೆಯನ್ನು ಗುರುವಾರ (ಏಪ್ರಿಲ್ 11) ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಅದೇ ದಿನ ರಾತ್ರಿ ಗಂಗಾದೇವಿ ಶೌಚಾಲಯಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಟ್ರೆಂಡಿಂಗ್​ ಸುದ್ದಿ

"ಆರೋಪಿತ ಮಹಿಳೆಯನ್ನು ಜೈಲಿಗೆ ಕರೆದೊಯ್ದ ಕೆಲವೇ ಗಂಟೆಗಳ ನಂತರ, ಮಹಿಳೆ ಆತ್ಮಹತ್ಯೆ ಮಾಡಿಕೊಂಡಳು. ಕೈದಿಗಳು ಆಕೆಯ ಮೃತ ದೇಹವನ್ನು ನೋಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸಂಬಂಧಿಕರಿಗೆ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಗಂಗಾದೇವಿ ಕೆಲವು ದಿನಗಳಿಂದ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದರು. ತನ್ನ ಸ್ವಂತ ಮಕ್ಕಳನ್ನು ಕೊಲ್ಲುವ ನಿರ್ಧಾರಕ್ಕೆ ಬಂದಿದ್ದರು ಎಂದು ವರದಿ ಹೇಳಿದೆ. ಜಾಲಹಳ್ಳಿ ಪ್ರದೇಶದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು. ಗಂಗಾದೇವಿಯ ಪತಿಯನ್ನು ತನ್ನ ಸ್ವಂತ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಈಗಾಗಲೇ ಬಂಧಿಸಲಾಗಿದೆ. ಆತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

IPL_Entry_Point