Bangalore Crime: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ, ಆರೋಪ ಪಟ್ಟಿಗೆ ಅಂತಿಮ ರೂಪ, ಶೀಘ್ರ ನ್ಯಾಯಾಲಯಕ್ಕೆ ಸಲ್ಲಿಕೆ-bangalore crime renuka swamy murder case bangalore police finalizing charge sheet to submit local court shortly mrt ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Bangalore Crime: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ, ಆರೋಪ ಪಟ್ಟಿಗೆ ಅಂತಿಮ ರೂಪ, ಶೀಘ್ರ ನ್ಯಾಯಾಲಯಕ್ಕೆ ಸಲ್ಲಿಕೆ

Bangalore Crime: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ, ಆರೋಪ ಪಟ್ಟಿಗೆ ಅಂತಿಮ ರೂಪ, ಶೀಘ್ರ ನ್ಯಾಯಾಲಯಕ್ಕೆ ಸಲ್ಲಿಕೆ

Darshan Pavitra Case ಹೈಪ್ರೊಫೈಲ್‌ ಪ್ರಕರಣವಾಗಿ ಮಾರ್ಪಟ್ಟಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬಂದಿದೆ.ವರದಿ: ಎಚ್‌.ಮಾರುತಿ,ಬೆಂಗಳೂರು

ದರ್ಶನ್‌ ಹಾಗೂ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ ಶೀಟ್‌ ಸಲ್ಲಿಕೆಗೆ ಸಿದ್ದತೆಗಳು ನಡೆದಿವೆ.
ದರ್ಶನ್‌ ಹಾಗೂ ಪವಿತ್ರಾ ಗೌಡ ಪ್ರಮುಖ ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ ಶೀಟ್‌ ಸಲ್ಲಿಕೆಗೆ ಸಿದ್ದತೆಗಳು ನಡೆದಿವೆ.

ಬೆಂಗಳೂರು: ನಟ ದರ್ಶನ್‌ ಹಾಗೂ ನಟಿ ಪವಿತ್ರಾಗೌಡ ಸಹಿತ ಹಲವರು ಆರೋಪಿಗಳಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಘಟ್ಟ ತಲುಪಿದ್ದು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗಲಿದೆ. ಹಲವು ದಿನಗಳಿಂದ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿರುವ ಪೊಲೀಸರು ಆರೋಪ ಪಟ್ಟಿ ಸಲ್ಲಿಕೆಗೆ ಅಂತಿಮ ಹಂತದ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಪ್ರಕರಣದಲ್ಲಿ ಹಲವು ಮಂದಿಯನ್ನು ಸಾಕ್ಷೀದಾರರನ್ನಾಗಿ ಮಾಡಲಾಗಿದ್ದು, ನ್ಯಾಯಾಧೀಶರ ಎದುರು ಅವರ ಹೇಳಿಕೆ ದಾಖಲಿಸಿದ್ದಾರೆ.

ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಮೊಬೈಲ್‌ ಗಳು, ಕೃತ್ಯ ನಡೆದ ಸ್ತಳದಲ್ಲಿ ಜಪ್ತಿ ಮಾಡಲಾದ ಸಿಸಿಟಿವಿ ಕ್ಯಾಮೆರಾದ ಡಿವಿಆರ್‌ ಮತ್ತು ಅವರು ಧರಿಸಿದ್ದ ಬಟ್ಟೆಗಳನ್ನು ಬೆಂಗಳೂರು ಹಾಗೂ ಹೈದರಾಬಾದ್‌ ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಈಗಾಗಲೇ ಎಫ್‌ ಎಸ್‌ ಎಲ್ ನ ಶೇ.70ರಷ್ಟು ವರದಿಗಳು ತನಿಖಾಧಿಕಾರಿಗಳ ಕೈ ಸೇರಿವೆ. ಬಾಕಿ ಉಳಿದ ವರದಿಗಳು ಶೀಘ್ರದಲ್ಲೇ ಕೈ ಸೇರಲಿವೆ ಎಂದು ತಿಳಿದು ಬಂದಿದೆ.

ರಾಜರಾಜೇಶ್ವರಿ ನಗರದ ಸ್ಟೋನಿ ಬ್ರೂಕ್‌ ರಸ್ಟೋರೆಂಟ್‌ ನಲ್ಲಿ ನಡೆಸಿದ್ದ ಪಾರ್ಟಿಯಲ್ಲಿ ನಟ ದರ್ಶನ್‌ ಜೊತೆಗೆ ಮತ್ತೊಬ್ಬ ಚಿತ್ರನಟ ಯಶಸ್‌ ಸೂರ್ಯ ಅವರೂ ಭಾಗಿಯಾಗಿದ್ದರು. ಅವರಿಂದಲೂ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಖ್ಯಾತ ನಟ ದರ್ಶನ್‌ ಮತ್ತು ಅವರಸ್ನೇಹಿತೆ ಪವಿತ್ರಾ ಭಾಗಿಯಾಗಿದ್ದು ಅವರ ಕೈವಾಡ ಇರುವುದು ಮೇಲ್ನೋಟಕ್ಕೆಸಾಬೀತಾಗಿದೆ. ಈಗಾಗಲೇ ಅವರನ್ನು ಬಂಧಿಸಿ ಒಂದು 50 ದಿನಗಳು ಕಳೆದಿವೆ. ಕೊಲೆಗೀಡಾದ ರೇಣುಕಾಸ್ವಾಮಿ ವಾಟ್ಸಾಪ್‌ ಮೂಲಕ ಪವಿತ್ರಾ ಅವರಿಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿತ್ತಿದ್ದ. ಈ ವಿಷಯ ತಿಳಿದ ದರ್ಶನ್‌ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಹಲ್ಲೆ ನಡೆಸಿದ್ದರು. ಇದರಿಂದ ಅವರು ಮೃತಪಟ್ಟಿದ್ದರು. ಒಟ್ಟಾರೆ ಈ ಪ್ರಕರಣದಲ್ಲಿ 17 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ

ಪ್ರೀತಿಸಿದ ಯುವಕನ ಜೊತೆ ದೂರಾಗಿದ್ದಕ್ಕೆ ಮನನೊಂದು ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ರೈಲ್ವೇ ನಿಲ್ದಾಣದ ಸಮೀಪ ಯುವತಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಡಾರ್ಜಿಲಿಂಗ್‌ ಮೂಲದ 24 ವರ್ಷದ ಲಖಿತಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಸೋಲದೇವನಹಳ್ಳಿಯಲ್ಲಿ ನೆಲೆಸಿದ್ದ ತಮ್ಮ ಸಹೋದರಿ ಕೃತಿಕಾ ಅವರ ಮನೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಲಿಖಿತಾ ಅವರು ಬಿಹಾರ ಮೂಲದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರೂ ಪರಸ್ಪರ ದೂರವಾಗಿದ್ದರು. ಇದರಿಂದ ನೊಂದ ಲಿಖಿತಾ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದರು ಎಂದು ತಿಳಿದು ಬಂದಿದೆ. ಈ ನೋವಿನಲ್ಲಿ ತನ್ನ ತಂಗಿ ಅಪಾಯ ಮಾಡಿಕೊಳ್ಳುವ ಮುನ್ಸೂಚನೆಯನ್ನು ಅರಿತಿದ್ದ ಲಿಖಿತಾ ಅವರನ್ನು ತನ್ನ ಮನೆಗೆ ಕರೆಯಿಸಿಕೊಂಡಿದ್ದರು. ಆದರೂ ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಗೆ ಬಂದಿದ್ದ ಲಿಖಿತಾ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬ್ರಾಡ್‌ ಕಾಂ ಕಂಪನಿಗೆ ಹುಸಿ ಬಾಂಬ್‌ ಬೆದರಿಕೆ

ಜೆಪಿ ನಗರದ 4ನೇ ಹಂತದಲ್ಲಿರುವ ಬ್ರಾಡ್‌ ಕಾಂ ಎಂಬ ಕಂಪನಿಯಲ್ಲಿ ಬಾಂಬ್‌ ಇರಿಸಿರುವುದಾಗಿ ಮಂಗಳವಾರ ಇ ಮೇಲ್‌ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿತ್ತು.ಪೊಲೀಸರು ಪರಿಶೀಲನೆ ನಡೆಸಿದ ನಂತರ ಇದೊಂದು ಹುಸಿ ಬಾಂಬ್‌ ಬೆದರಿಕೆ ಎನ್ನುವುದು ಗೊತ್ತಾಗಿದೆ.

ಬೆಳಗ್ಗೆ ಕಚೇರಿಗೆ ಆಗಮಿಸಿದ ಸಿಬ್ಬಂದಿ ಇ ಮೇಲ್‌ ಕರೆ ನೋಡಿ ಪೊಲೀಸರಿಗೆ ವಿಷಯಮುಟ್ಟಿಸಿದ್ದರು. ಬಾಂಬ್‌ ನಿಷ್ಕ್ರಿಯ ದಳ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರುದಾಖಲಾಗಿದೆ. ಇದೇ ರೀತಿ ಮೇ ತಿಂಗಳಲ್ಲಿಯೂ ಮೂರು ಪಂಚತಾರಾ ಹೋಟೆಲ್‌ ಗಳಿಗೆ ಬಾಂಬ್ ಇರಿಸಿರುವುದಾಗಿ ಮೇಲ್‌ ಮೂಲಕ ಬೆದರಿಕೆ ಕರೆಗಳು ಬಂದಿದ್ದವು.

(ವರದಿ: ಎಚ್.ಮಾರುತಿ,ಬೆಂಗಳೂರು)