Namma Metro timings: ನಾಳೆ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್- ಇಂದಿರಾನಗರ ರೈಲು ಸಂಚಾರದಲ್ಲಿ ವ್ಯತ್ಯಯ
Namma Metro timings: ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ. ನಾಳೆ (ಜನವರಿ 19) ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್- ಇಂದಿರಾನಗರ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಈ ಕುರಿತ ವಿವರ ಇಲ್ಲಿದೆ.

Namma Metro timings: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ. ನಾಳೆ (ಜನವರಿ 19) ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್- ಇಂದಿರಾನಗರ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತಿಳಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್ ಈ ಭಾನುವಾರ (ಜನವರಿ 19) ನೇರಳ ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದ್ದು, ನಮ್ಮ ಮೆಟ್ರೋ ಪ್ರಯಾಣಿಕರು ಸಹಕರಿಸಬೇಕು ಎಂದು ಕೋರಿದೆ.
ಜನವರಿ 19 ರಂದು ನಮ್ಮ ಮೆಟ್ರೋ ಮೆಜೆಸ್ಟಿಕ್- ಇಂದಿರಾನಗರ ರೈಲು ಸಂಚಾರ ವ್ಯತ್ಯಯ
ನಮ್ಮ ಮೆಟ್ರೋ ನೇರಳೆ ಮಾರ್ಗದ ಮೆಜೆಸ್ಟಿಕ್ - ಇಂದಿರಾನಗರ ರೈಲು ನಿಲ್ದಾಣಗಳ ನಡುವೆ ನಾಳೆ (ಜನವರಿ 19) ತುರ್ತು ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಕಾರಣ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ನೇರಳ ಮಾರ್ಗದ ಕಬ್ಬನ್‌ಪಾರ್ಕ್ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಈ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಜೆಸ್ಟಿಕ್- ಇಂದಿರಾನಗರ ಮೆಟ್ರೋ ಮಾರ್ಗದಲ್ಲಿ ಮೂರು ಗಂಟೆ ಕಾಲ ಅಂದರೆ ಬೆಳಗ್ಗೆ 7 ಗಂಟೆಯಿಂದ 10 ಗಂಟೆ ತನಕ ನಮ್ಮ ಮೆಟ್ರೋ ರೈಲು ಸಂಚಾರ ಇರಲ್ಲ.
ಬೆಂಗಳೂರು ಮಹಾನಗರದ ಸಂಚಾರ ದಟ್ಟಣೆ ಕಡಿಮೆ ಮಾಡುವ ನಮ್ಮ ಮೆಟ್ರೋ ನೇರಳೆ ಮಾರ್ಗದ ಇತರೆಡೆ ಅಂದರೆ ಚಲ್ಲಘಟ್ಟ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್ ಫೀಲ್ಡ್ (ಕಾಡುಗೋಡಿ) ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳು ಎಂದಿನಂತೆ ನಿಗದಿತ ವೇಳಾಪಟ್ಟಿಯ ಪ್ರಕಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುತ್ತವೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.
