Breaking News:ಬೆಂಗಳೂರಲ್ಲಿ ಭೀಕರ ಅಪಘಾತ, ಮೂವರು ವಿದ್ಯಾರ್ಥಿಗಳ ದುರ್ಮರಣ-bangalore news bangalore accident hit and run case 3 students died on spot kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Breaking News:ಬೆಂಗಳೂರಲ್ಲಿ ಭೀಕರ ಅಪಘಾತ, ಮೂವರು ವಿದ್ಯಾರ್ಥಿಗಳ ದುರ್ಮರಣ

Breaking News:ಬೆಂಗಳೂರಲ್ಲಿ ಭೀಕರ ಅಪಘಾತ, ಮೂವರು ವಿದ್ಯಾರ್ಥಿಗಳ ದುರ್ಮರಣ

Bangalore Accident ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಅಪಘಾತದಲ್ಲಿ ಮೃತಪಟ್ಟವರ ದೇಹಗಳನ್ನು ಸ್ಥಳಾಂತರಿಸಲಾಯಿತು.
ಬೆಂಗಳೂರಿನಲ್ಲಿ ಅಪಘಾತದಲ್ಲಿ ಮೃತಪಟ್ಟವರ ದೇಹಗಳನ್ನು ಸ್ಥಳಾಂತರಿಸಲಾಯಿತು. (times now)

ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಅಪರಿಚಿತ ವಾಹಹ ಡಿಕ್ಕಿಯಾಗಿ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. ಬೆಂಗಳೂರು ನಗರದ ಚಿಕ್ಕಜಾಲ ಬಳಿ ಅಪರಿಚಿತ ವಾಹನ ಗುರುವಾರ ಬೆಳಗಿನ ಜಾವ ಡಿಕ್ಕಿಯಾಗಿದ್ದು. ಡಿಕ್ಕಿ ರಭಸಕ್ಕೆ ಮೂವರು ಮೃತಪಟ್ಟಿದ್ದಾರೆ.ಅದೂ ದೇಹಗಳು ಛಿದ್ರವಾಗಿ ಬಿದ್ದಿರುವ ಸನ್ನಿವೇಶ ಎಂತಹವರ ಮನವನ್ನೂ ಕಲಕುವಂತಿತ್ತು. ಮೃತ ವಿದ್ಯಾರ್ಥಿಗಳನ್ನು ರೋಹಿತ್‌, ಸುಚಿತ್‌ ಹಾಗೂ ಹರ್ಷ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದ ಮೂವರು ಬೈಕ್‌ನಲ್ಲಿ ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ವಾಹನ ಚಾಲಕ ಪರಾರಿಯಾಗಿದ್ದು, ತನಿಖೆ ನಡೆದಿದೆ. ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಗಳ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಬೆಂಗಳೂರಿನ ಏರ್‌ಪೋರ್ಟ್‌ ಮಾರ್ಗದಲ್ಲಿ ಮೂವರೂ ಲಾಂಗ್‌ ಡ್ರೈವ್‌ ಹೊರಟಿದ್ದರು. ಹೆಬ್ಬಾಳದ ಜಿಕೆವಿಕೆಯಲ್ಲಿ ಬಿಎಸ್ಸಿ ಕೃವಿ ವಿದ್ಯಾರ್ಥಿಗಳಾದ ಮೂವರು ಸ್ನೇಹಿತರಾಗಿದ್ದು ಊಟ ಮುಗಿಸಿ ವೇಗವಾಗಿ ಹೊರಟಿದ್ದರು. ಈ ವೇಳೆ ಭಾರೀ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸ ಹೇಗಿತ್ತು ಎಂದರೆ ವಾಹನ ಛಿದ್ರವಾಗಿದ್ದರೆ, ಮೂವರ ದೇಹಗಳೂ ಬೇರೆ ಬೇರೆ ದಿಕ್ಕಿನಲ್ಲಿ ಬಿದ್ದಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ವಾಹನದ ಅಪಘಾತ ಸನ್ನಿವೇಶ ನೋಡಿದರೆ ಬೈಕ್‌ ಸವಾರರು ಜೋರಾಗಿ ವಾಹನ ಓಡಿಸಿಕೊಂಡು ಬಂದಿದ್ದಾರೆ. ಈ ವೇಳೆ ಗೂಡ್ಸ್‌ ವಾಹನಕ್ಕೆ ಡಿಕ್ಕಿಯಾಗಿರುವ ಅನುಮಾನವಿದೆ. ಮತ್ತೆ ಇತರೆ ವಾಹನವೂ ಅವರ ಮೇಲೆ ಹರಿದಿರಬೇಕು. ಈ ಕುರಿತು ನಾಪತ್ತೆಯಾಗಿರುವ ಲಾರಿ ಚಾಲಕನ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ತಿಳಿಸಿದ್ದಾರೆ.

mysore-dasara_Entry_Point