ಕನ್ನಡ ಸುದ್ದಿ  /  Karnataka  /  Bangalore News Bangalore Employment Fair Started In Palace Grounds Nearly 1 Lakh Students Attended First Day Kub

Bangalore Employment Fair: ಬೆಂಗಳೂರು ಉದ್ಯೋಗ ಮೇಳ ಶುರು, 580 ಕಂಪನಿಗಳು 1 ಲಕ್ಷ ಅಭ್ಯರ್ಥಿಗಳು ಭಾಗಿ

ಬೆಂಗಳೂರಿನ ಅರಮನೆ ಆವರಣದಲ್ಲಿ ಬೃಹತ್‌ ಉದ್ಯೋಗ ಮೇಳ ಆರಂಭಗೊಂಡಿದ್ದು, ಮಂಗಳವಾರವೂ ಇರಲಿದೆ.

ಬೆಂಗಳೂರಿನಲ್ಲಿ ಆರಂಭಗೊಂಡ ಉದ್ಯೋಗ ಮೇಳದಲ್ಲಿ ಭಾಗಿಯಾದ ವಿದ್ಯಾರ್ಥಿ ಜತೆಗೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌, ಪ್ರಿಯಾಂಕ್‌ ಖರ್ಗೆ ಮಾತನಾಡಿದರು.
ಬೆಂಗಳೂರಿನಲ್ಲಿ ಆರಂಭಗೊಂಡ ಉದ್ಯೋಗ ಮೇಳದಲ್ಲಿ ಭಾಗಿಯಾದ ವಿದ್ಯಾರ್ಥಿ ಜತೆಗೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌, ಪ್ರಿಯಾಂಕ್‌ ಖರ್ಗೆ ಮಾತನಾಡಿದರು.

ಬೆಂಗಳೂರು: ಬೆಂಗಳೂರು ಅರಮನೆ ಮೈದಾನ ವಸ್ತುಪ್ರದರ್ಶನ, ಮದುವೆಗಳಿಂದಾಗಿ ಜನರಿಂದ ತುಂಬಿ ತುಳುಕುತ್ತದೆ. ಸೋಮವಾರ ಅಲ್ಲಿ ಬಂದಿದ್ದವರು ಬರೀ ಯುವಕರು, ಯುವತಿಯರು. ಅವರ ಕಂಗಳದಲ್ಲಿ ಬದುಕು ಕಟ್ಟಿಕೊಳ್ಳುವ ಮಹಾಕನಸು. ಅದಕ್ಕೆ ವೇದಿಕೆಯಾಗಿದ್ದು ಕರ್ನಾಟಕ ಸರ್ಕಾರ ಆಯೋಜಿಸಿರುವ ಎರಡು ದಿನಗಳ ಬೃಹತ್‌ ಯುವ ಸಮೃದ್ಧಿ ಸಮ್ಮೇಳನ ಮತ್ತುಉದ್ಯೋಗ ಮೇಳ.

ಬೆಂಗಳೂರು ಮಾತ್ರವಲ್ಲದೇ ಕರ್ನಾಟಕದ ನಾನಾ ಭಾಗಗಳಿಂದಲೂ ವಿದ್ಯಾರ್ಥಿಗಳು. ಅಭ್ಯಥಿಗಳು ಬಂದಿದ್ದರು. ತಮ್ಮ ಶಿಕ್ಷಣ, ಕೌಶಲಗಳಿಗೆ ಪೂರಕವಾಗಿ ಉದ್ಯೋಗ ಸಿಗುತ್ತದೆಯೇ ಎನ್ನುವುದನ್ನು ಖಚಿತಪಡಿಸಿಕೊಂಡರು. ಕೆಲವರಿಗೆ ಉದ್ಯೋಗ ಸಿಕ್ಕರೆ, ಇನ್ನು ಕೆಲವರಿಗೆ ಉದ್ಯೋಗದ ಭರವಸೆಯೂ ದೊರೆಯಿತು. ಮಂಗಳವಾರವೂ ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ ಮುಂದುವರೆಯಲಿದೆ.

ರಾಜ್ಯ ಸರ್ಕಾರವು ಯುವ ಸಮೃದ್ಧಿ ಸಮ್ಮೇಳನದ – 2024 ನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಆಯೋಜಿಸಿದೆ. ಇದಕ್ಕಾಗಿ 600 ಕೌಂಟರ್ ಗಳನ್ನು ತೆರೆಯಲಾಗಿದ್ದು ಎಲ್ಲಾ ಕೌಂಟರ್ ಗಳೂ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿರುವುದು ಮೊದಲ ದಿನವೇ ಕಂಡು ಬಂದಿತು.

ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ ಪ್ರಧಾನಿ ಮೋದಿ ವಿದ್ಯಾರ್ಥಿ, ಯುವಕರ ಮತ ಗಳಿಸಿದರು. ಈ ಲೆಕ್ಕದಲ್ಲಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ ಮೋದಿಯವರು ಇರುವ ಉದ್ಯೋಗವವನ್ನೂ ಕಸಿದುಕೊಂಡ ಕಾರಣ ನಿರುದ್ಯೋಗ ಪ್ರಮಾಣ ದೇಶದಲ್ಲಿ ಶೇ8.40 ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು. ಇದಕ್ಕಾಗಿ ನಮ್ಮ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಸಿದ್ದರಾಮಯ್ಯ ಅವರು ಘೋಷಿಸಿದರು.

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀನಿ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಯದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40 ಶೇ ಏರಿಕೆಯಾಗಿದೆ ಎಂದು ಅಂಕಿ ಅಂಶಗಳ‌ ಸಮೇತ ವಿವರಿಸಿದರು.

ನಾವು ಯುವ ನಿಧಿಯನ್ನೂ ಕೊಡ್ತೀವಿ. ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರ್ಕಾರ ವಿದ್ಯಾರ್ಥಿ ಯುವಜನರಿಗೆ ಮಾಡುವ ಅಭಯ ಎಂದು ಭರವಸೆ ನೀಡಿದರು.

ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ ಜಿಟಿಟಿಸಿ ಗಳ ಜತೆಗೆ ಹೊಸದಾಗಿ ಇನ್ನಷ್ಟು ಜಿಟಿಟಿಸಿ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಮಹತ್ವದ ಘೋಷಣೆ ಮಾಡಿದರು.

ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, 1 ಲಕ್ಷ ಅಭ್ಯರ್ಥಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

IPL_Entry_Point