ಕನ್ನಡ ಸುದ್ದಿ  /  ಕರ್ನಾಟಕ  /  Bangalore Rains: ಬೆಂಗಳೂರಿನಲ್ಲಿ ನಿಲ್ಲದ ಮಳೆ, ಇನ್ನೂ ಎರಡು ದಿನ ಮಳೆ ಮುನ್ಸೂಚನೆ

Bangalore rains: ಬೆಂಗಳೂರಿನಲ್ಲಿ ನಿಲ್ಲದ ಮಳೆ, ಇನ್ನೂ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರಿನಲ್ಲಿ ( Bangalore Rains) ಸೋಮವಾರ ರಾತ್ರಿಯೂ ಉತ್ತಮ ಮಳೆ ಸುರಿದಿದೆ. ಮಧ್ಯರಾತ್ರಿಯಲ್ಲೂ ಮಳೆ ಬರುತ್ತಲೇ ಇತ್ತು

ಬೆಂಗಳೂರು ಪೂರ್ವ ಭಾಗದಲ್ಲಿ ಸೋಮವಾರ ರಾತ್ರಿ ಎಡಬಿಡದೇ ಸುರಿಯುತ್ತಿರುವ ಮಳೆ
ಬೆಂಗಳೂರು ಪೂರ್ವ ಭಾಗದಲ್ಲಿ ಸೋಮವಾರ ರಾತ್ರಿ ಎಡಬಿಡದೇ ಸುರಿಯುತ್ತಿರುವ ಮಳೆ

ಬೆಂಗಳೂರು: ಬೆಂಗಳೂರಿನಲ್ಲಿ ಬೇಸಿಗೆ ಬವಣೆಯಿಂದ ಬಳಲಿದ್ದ ಜನರಿಗೆ ಮಳೆ ( Bangalore Rains) ತಂಪು ಉಂಟು ಮಾಡಿದೆ. ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆ ಸೋಮವಾರ ಸಂಜೆಯೂ ಮುಂದುವರಿದಿದೆ. ಬೆಂಗಳೂರಿನ ಪ್ರಮುಖ ಪ್ರದೇಶದಲ್ಲಿಯೇ ರಾತ್ರಿವರೆಗೂ ಮಳೆಯಾಗುತ್ತಲೇ ಇದೆ. ಮೆಜೆಸ್ಟಿಕ್‌ ಭಾಗದಲ್ಲಿಯೂ ಒಂದು ಗಂಟೆಗೂ ಅಧಿಕ ಕಾಲ ಮಳೆ ಸುರಿದಿದೆ. ಕೆಲವು ಭಾಗದಲ್ಲಿ ಭಾರೀ ಗಾಳಿಯೂ ಇತ್ತು. ಗುಡುಗು, ಸಿಡಿಲು ಮಿಶ್ರಿತ ಮಳೆಯೂ ಅಲ್ಲಲ್ಲಿ ಆದ ವರದಿಯಾಗಿದೆ. ಬೆಂಗಳೂರು ಹಾಗೂ ನೆಲಮಂಗಲ, ದೊಡ್ಡಬಳ್ಳಾಪುರ. ಆನೆಕಲ್‌, ಹೊಸಕೋಟೆ ಸೇರಿದಂತೆ ಸುತ್ತಮುತ್ತಲಿನ ಇನ್ನೂ ಎರಡು ದಿನ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ( IMD) ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಎಲ್ಲೆಲ್ಲಿ ಮಳೆಯಾಗಿದೆ

ಬೆಂಗಳೂರಿನಲ್ಲಿ ಸೋಮವಾರ ಸಂಜೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆ ನಂತರ ಗಾಳಿಯೂ ಸೇರಿಕೊಂಡು ಮಳೆಯೂ ಶುರುವಾಯಿತು. ರಾತ್ರಿ ಬಹು ಹೊತ್ತಿವರೆಗೂ ಮಳೆ ಬರುತ್ತಲೇ ಇತ್ತು. ಹಲವಾರು ಬಡಾವಣೆಗಳಲ್ಲಿ ಮಳೆಯಾಗಿದ್ದು ಇಳೆಯನ್ನಂತೂ ತಂಪು ಮಾಡಿದೆ.ಬಿಟಿಎಂ ಬಡಾವಣೆ, ಹೂಡಿ, ವೈಟ್‌ ಫೀಲ್ಡ್‌,ಬಿಬಿಎಂಪಿ ಸಮೀಪವೂ ಭಾರೀ ಮಳೆಯಾಗಿದೆ.ಯಲಹಂಕ, ಕೊಡಿಗೇಹಳ್ಳಿ, ಕೋಗಿಲು. ಹೇಸರಘಟ್ಟ, ಸಹಕಾರ ನಗರದಲ್ಲೂ ಮಳೆ ಸುರಿಯುತ್ತಿದೆ.

ಕರ್ನಾಟಕದ ಹಲವು ಭಾಗಗಳಲ್ಲಿ ಭಾನುವಾರ ರಾತ್ರಿ ಹಾಗೂ ಸೋಮವಾರ ಉತ್ತಮ ಮಳೆಯಾಗಿದೆ. ಬೆಂಗಳೂರು ನಗರದಲ್ಲಿಯೇ 2 ಸೆ.ಮೀಗೂ ಅಧಿಕ ಮಳೆ ಸುರಿದಿದೆ. ದೊಡ್ಡನೆಕ್ಕುಂದಿ ಭಾಗದಲ್ಲಿ ಉತ್ತಮ ಮಳೆಯಾಗಿದ್ದು 74 ಮಿ.ಮೀ ಮಳೆ ದಾಖಲಾಗಿದೆ.

ಮಳೆ ಮುನ್ಸೂಚನೆ

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಮೇ 14ರ ಮಂಗಳವಾರವೂ ಭಾರೀ ಮಳೆಯಾಗಲಿದೆ. ಬಿರುಗಾಳಿಯೊಂದಿಗೆ ಸಾಧಾರಣ ಮಳೆ, ಗುಡುಗು ಸಹಿತ ಇರಲಿದೆ. ಅದೇ ರೀತಿ ಮೇ15ರ ಬುಧವಾರವೂ ಕೂಡ ಸಂಜೆ ನಂತರ ಬೆಂಗಳೂರಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ.ಕೆಲವು ಪ್ರದೇಶಗಳಲ್ಲಿ ಸಂಜೆ ಇಲ್ಲವೇ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಸುರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 24 ಡಿಗ್ರಿ ಸೆಲ್ಸಿಯಸ್‌ ದಾಖಲಾಗಬಹುದು. ಅದೇ ರೀತಿ ಮುಂದಿನ 48 ಗಂಟೆಗಳಲ್ಲೂ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶದಲ್ಲಿ ವ್ಯತ್ಯಾಸವೇನೂ ಇರುವುದಿಲ್ಲ ಎಂದು ಹವಾಮಾನ ಇಲಾಖೆ ದೈನಂದಿನ ವರದಿಯಲ್ಲಿ ತಿಳಿಸಿದೆ.

ಉಷ್ಣಾಂಶದಲ್ಲೂ ಗಣನೀಯ ಇಳಿಕೆ

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣದಿಂದಾಗಿ ದಾಖಲೆ ಪ್ರಮಾಣದಲ್ಲಿ ಏರಿದ್ದ ಉಷ್ಣಾಂಶ ಕಡಿಮೆಯಾಗಿದೆ. 40 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿದ್ದ ಉಷ್ಣಾಂಶವು 33 ಡಿಗ್ರಿಗೆ ಕುಸಿದಿದೆ. ಅಂದರೆ ಮಳೆಯಿಂದಗಿ 7 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇಳಿಕೆಯಾಗಿ ಸಹಜ ಸ್ಥಿತಿಗೆ ಬಂದಿದೆ.

ಸೋಮವಾರದಂದು ಬೆಂಗಳೂರು ನಗರದಲ್ಲಿ33.6 ಡಿಗ್ರಿ, ಬೆಂಗಳೂರು ಎಚ್‌ಎಎಲ್‌ ವಿಮಾನ ನಿಲ್ದಾಣ ಪ್ರದೇಶದಲ್ಲಿ 33.7 ಡಿಗ್ರಿ, ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ಆವರಣದಲ್ಲಿ 33.5 ಡಿಗ್ರಿ ಹಾಗೂ ಜಿಕೆವಿಕೆ ಆವರಣದಲ್ಲಿ 34. ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point