Bangalore News: ಬೆಂಗಳೂರು ನಗರದ ನೀರಿನ ಕೊರತೆ ಆಲಿಸಲು ಸಹಾಯವಾಣಿ ಜತೆಗೆ ಕಾರ್ಯಪಡೆಗೂ ಹೊಣೆ
Water crisis ಬೆಂಗಳೂರಿನಲ್ಲಿ ತಲೆ ದೋರಿರುವ ನೀರಿನ ಸಮಸ್ಯೆಯನ್ನು ಬೇಸಿಗೆ ಮುಗಿಯುವವರೆಗೂ ನಿಭಾಯಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ ಈ ಬಾರಿ ಬೇಸಿಗೆ ಆರಂಭದಲ್ಲಿಯೇ ಬರೋಬ್ಬರಿ 6900 ಬೋರ್‌ವೆಲ್‌ಗಳು ಬತ್ತಿ ಹೋಗಿವೆ. ನಿತ್ಯ 500 ಎಂ.ಎಲ್ ಡಿ ನೀರಿನ ಕೊರತೆ ಎದುರಾಗಿದೆ. ಹೀಗಿದ್ದರೂ ಬೇಸಿಗೆ ಮುಗಿಯುವವರೆಗೂ ಬೆಂಗಳೂರು ನಗರಕ್ಕೆ ನೀರಿನ ಸಮಸ್ಯೆಯಾಗದಂತೆ ಗಮನ ಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನಷ್ಟು ಕಾರ್ಯಪಡೆಗಳನ್ನು ಹೆಚ್ಚಿಸಿ ಸಮಸ್ಯೆ ಇರುವ ಕಡೆಗಳಲ್ಲಿ ಪರಿಹಾರ ನೀಡುವಂತೆಯೂ ತಿಳಿಸಲಾಗಿದೆ. ಸಹಾಯವಾಣಿಯನ್ನು ಬಲಪಡಿಸಿ ಜನರ ಸಮಸ್ಯೆಗೆ ಕಿವಿಯಾಗುವಂತೆಯೂ ಕಟ್ಟು ನಿಟ್ಟಾಗಿ ತಿಳಿಸಲಾಗಿದೆ.
ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸೋಮವಾರ ಅಧಿಕಾರಿಗಳಿಂದ ಸುದೀರ್ಘವಾಗಿ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಮಾಹಿತಿಯನ್ನೂ ಒದಗಿಸಿದರು.
- 14000 ಸರ್ಕಾರಿ ಬೋರ್ ವೆಲ್ ಗಳಲ್ಲಿ 6900 ಬತ್ತಿವೆ. ಹೀಗಾಗಿ ಸಮಸ್ಯೆ ಆಗಿದೆ. 110 ಹಳ್ಳಿಗಳಲ್ಲಿ 55 ಹಳ್ಳಿಗಳಿಗೆ ಸಮಸ್ಯೆ ಆಗಿದೆ. ಕುಡಿಯಲು ಮತ್ತು ಕೈಗಾರಿಕೆಗಳಿಗೆ ಒಟ್ಟು 2600 ಎಂ.ಎಲ್. ಡಿ. ನೀರು ಅಗತ್ಯವಿದೆ. ಇದರಲ್ಲಿ 1450 ಎಂ.ಎಲ್. ಡಿ. ನೀರು ಕಾವೇರಿ ನದಿಯಿಂದ ದೊರೆಯುತ್ತಿದೆ. 650 ಎಂ ಎಲ್ ಡಿ ನೀರು ಕೊಳವೆ ಬಾವಿಯಿಂದ ದೊರೆಯುತ್ತಿದ್ದು, 500 ಎಂ.ಎಲ್ ಡಿ ನೀರಿನ ಕೊರತೆ ಇದೆ. ಜೂನ್ ಅಂತ್ಯಕ್ಕೆ ಕಾವೇರಿ 5 ನೇ ಹಂತದ ಕಾಮಗಾರಿ ಮುಕ್ತಾಯವಾಗಿ 775 MLD ಹೆಚ್ಚುವರಿ ನೀರು ಸಿಗತ್ತೆ. ಇದು 110 ಹಳ್ಳಿಗಳಿಗೆ ಸರಬರಾಜು ಆಗಲಿದೆ.
- ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. KRS ನಲ್ಲಿ 11.02, ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ.
- 313 ಸ್ಥಳಗಳಲ್ಲಿ ಹೊಸದಾಗಿ ಬೋರ್ ವೆಲ್ ಕೊರೆಸುತ್ತಿದ್ದೇವೆ. 1200 ನಿಷ್ಕ್ರಿಯ ಬೋರ್ ಗಳಿಗೆ ಮರುಜೀವ ನೀಡಲಾಗುವುದು. ಬೋರ್ ವೆಲ್ ಗಳ ಮೇಲೆ ಅವಲಂಬಿತ ಜನರಿಗೆ ನೀರಿನ ತೊಂದರೆ ಆಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ.
- ಕೊಳೆಗೇರಿ, ಎತ್ತರದ ಪ್ರದೇಶದಲ್ಲಿ ಹಾಗೂ ಬೋರ್ ವೆಲ್ ಮೇಲೆ ಅವಲಂಬಿತ ಪ್ರದೇಶಗಳಲ್ಲಿ ಕೆಎಂಎಫ್ ಸೇರಿ ಎಲ್ಲಾ ಖಾಸಗಿ ಟ್ಯಾಂಕರ್ ಗಳನ್ನು ಬಳಸಲು ತಿಳಿಸಲಾಗಿದೆ. 1700 ನೀರಿನ ಟ್ಯಾಂಕರ್ ನೋಂದಣಿ ಆಗಿವೆ. ಮಾಲ್ ಗಳು ಸೇರಿ ಖಾಸಗಿಯಾಗಿ ಇರುವ ಬೋರ್ ವೆಲ್ ಗಳಿಂದ ಟ್ಯಾಂಕರ್ ತುಂಬಿಸಿ ನೀರು ಸರಬರಾಜು ಮಾಡಲಾಗುತ್ತಿದೆ.
ಇದನ್ನೂ ಓದಿರಿ: ಮಂಡ್ಯ ಲೋಕಸಭೆ ಟಿಕೆಟ್ ಮಿಸ್ ಮಾಡಿಕೊಂಡ ಸುಮಾಲತಾಗೆ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆಯ ಆಫರ್; ವರ್ಕೌಟ್ ಆಗುತ್ತಾ ಬಿಜೆಪಿ ಹೊಸ ಪ್ಲಾನ್?
- ಕಂಟ್ರೋಲ್ ರೂಮ್ ಗಳ ಸಂಖ್ಯೆ ಹೆಚ್ವಿಸಿ ದೂರುಬಂದ ತಕ್ಷಣ ಆ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ. ಟಾಸ್ಕ್ ಫೋರ್ಸ್ ಹೆಚ್ವಿಸಿ ದೂರುಗಳಿಗೆ ತಕ್ಷಣ ಸ್ಪಂದಿಸಲು ಹೇಳಲಾಗಿದೆ. ನೀರಿನ ದುರುಪಯೋಗ ತಡೆಗಟ್ಟಲು ಸೂಚಿಸಲಾಗಿದ್ದು, ಈ ಬಗ್ಗೆ 143 ಟಾಸ್ಕ್ ಫೋರ್ಸ್ ಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪ್ರಮಾಣ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಪ್ರತಿ ದಿನ ಅಧಿಕಾರಿಗಳು ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾಯೋಜನೆ ಸಿದ್ದಪಡಿಸುತ್ತಾರೆ.
- ಪಾರ್ಕ್ ಗಳಲ್ಲಿ ಕುಡಿಯುವ ನೀರು ಬಳಸದಂತೆ, ಶುದ್ದೀಕರಿಸಿದ ನೀರು ಬಳಸುವಂತೆ ಸೂಚಿಸಲಾಗಿದೆ. ಕೆ.ಸಿ.ವ್ಯಾಲಿ ರೀತಿ ಬೆಂಗಳೂರಿನ ಕೆರೆಗಳನ್ನೂ ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಕೊಳೆಗೆರಿಗಳು, ಎತ್ತರದ ಪ್ರದೇಶಗಳು ಹಾಗೂ ಬಿಬಿಎಂಪಿ ಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ಸಮಸ್ಯೆ ಆಗದಂತೆ ಸೂಚಿಸಲಾಗಿದೆ
- ಬತ್ತಿ ಹೋಗಿರುವ ಪ್ರಮುಖ 14 ಕೆರೆಗಳನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದೆ. ಇದರಿಂದ ಅಂತರ್ಜಲ ಭರ್ತಿ ಆಗಿ ಬೋರ್ ವೆಲ್ ಗಳಿಗೆ ಮರುಜೀವ ಬರುತ್ತದೆ.
ಇದನ್ನೂ ಓದಿರಿ: Shimoga News: ಶಿವಮೊಗ್ಗಕ್ಕೆ ಪ್ರಧಾನಿ ಬಂದರೂ ಈಶ್ವರಪ್ಪ ಬರಲಿಲ್ಲ: ಮೋದಿಗೆ ತಟ್ಟಿದ ಬಿಜೆಪಿ ಬಂಡಾಯದ ಬಿಸಿ - ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ. ಬೇಕಾದಷ್ಟು ಹಣವನ್ನು ಸರ್ಕಾರ ಮತ್ತು ಬಿಬಿಎಂಪಿ ಒದಗಿಸುತ್ತಿದೆ. ಭವಿಷ್ಯದಲ್ಲಿ ಎಂಥಾದ್ದೇ ಸಂದರ್ಭದಲ್ಲೂ ನೀರಿನ ಕೊರತೆ ಆಗದಂತೆ ತಜ್ಞರ ಸಮಿತಿಯನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ
- ದೂರು ಬಂದರೆ BBMP, BWSSB ನವರು ಹೊಣೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಕೇಂದ್ರೀಯ ಸಹಾಯವಾಣಿ ಸಂಖ್ಯೆ 1916 ಹಾಗೂ ವಾಟ್ಸಾಪ್ ಮೂಲಕ ದೂರು ದಾಖಲಿಸಬಹುದು. ಈ ದೂರುಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಸೂಚಿಸಲಾಗಿದೆ
- ಎಲ್ಲೂ ನೀರಿಗೆ ತೊಂದರೆ ಆಗದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕುಡಿಯುವ ನೀರಿನ ದುಂದುವೆಚ್ಚ ಮಾಡಬಾರದು. ಗಾರ್ಡನ್ ಗಳಿಗೆ ಕುಡಿಯುವ ನೀರು ಬಳಸದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿರಿ: ತಿಂಗಳ ಬಳಿಕ ಬಹಿರಂಗವಾಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ; ನೆಟ್ಟಿಗರ ಗಮನ ಸೆಳೆದ ಡ್ಯಾಡ್ ಬರಹದ ಟಿಶರ್ಟ್
- ಮಳೆನೀರು ಕೊಯ್ಲು, ಬಳಕೆ ನೀರಿನ ಶುದ್ದೀಕರಿಸಿ ಹೆಚ್ಚಿನ ಪ್ರಮಾಣದಲ್ಲಿ ಮರು ಬಳಸಬೇಕು. ಬೆಂಗಳೂರು ನಗರದ ಪ್ರಮುಖ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಸೂಚಿಸಲಾಗಿದೆ.