Bangalore News: ಬೆಂಗಳೂರು ಐಪಿಎಲ್‌ ಪಂದ್ಯಗಳಿಗೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದ ಬಿಎಂಟಿಸಿ; ಯಾವ ಮಾರ್ಗದಲ್ಲಿ ಬಸ್‌ ಸಂಚಾರ
ಕನ್ನಡ ಸುದ್ದಿ  /  ಕರ್ನಾಟಕ  /  Bangalore News: ಬೆಂಗಳೂರು ಐಪಿಎಲ್‌ ಪಂದ್ಯಗಳಿಗೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದ ಬಿಎಂಟಿಸಿ; ಯಾವ ಮಾರ್ಗದಲ್ಲಿ ಬಸ್‌ ಸಂಚಾರ

Bangalore News: ಬೆಂಗಳೂರು ಐಪಿಎಲ್‌ ಪಂದ್ಯಗಳಿಗೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದ ಬಿಎಂಟಿಸಿ; ಯಾವ ಮಾರ್ಗದಲ್ಲಿ ಬಸ್‌ ಸಂಚಾರ

IPL 2024 ಐಪಿಎಲ್‌ 2024 ಬೆಂಗಳೂರು ಪಂದ್ಯಾವಳಿಗಳ ದಿನ ಬಿಎಂಟಿಸಿ ಕೂಡ ವಿಶೇಷ ಬಸ್‌ ಸೇವೆ ನೀಡಲಿದೆ.ವರದಿ: ಎಚ್.‌ಮಾರುತಿ, ಬೆಂಗಳೂರು

ಐಪಿಎಪ್‌ ಪಂದ್ಯಾವಳಿ ದಿನ ಬಿಎಂಟಿಸಿ ವಿಶೇಷ ಬಸ್‌ ಸೇವೆ ಒದಗಿಸಲಿದೆ.
ಐಪಿಎಪ್‌ ಪಂದ್ಯಾವಳಿ ದಿನ ಬಿಎಂಟಿಸಿ ವಿಶೇಷ ಬಸ್‌ ಸೇವೆ ಒದಗಿಸಲಿದೆ.

ಬೆಂಗಳೂರು: ಐಪಿಎಲ್‌ ಪಂದ್ಯಗಳು ನಡೆಯುವ ದಿನಗಳಂದು ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಿಸಿದ ಬೆನ್ನಲ್ಲೇ ಬಿಎಂಟಿಸಿ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್‌ 15, ಮೇ 4, 12 ಮತ್ತು ಮೇ 18 ರಂದು ಐಪಿಎಲ್ ಕ್ರಿಕೆಟ್‌ ಪಂದ್ಯಗಳು ನಡೆಯಲಿವೆ. ಈ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್‌ಗಳ ಸಂಚಾರ ವ್ಯವಸ್ಥೆ ಮಾಡಲು ಬಿಎಂಟಿಸಿ ನಿರ್ಧರಿಸಿದೆ.

ಪಂದ್ಯಗಳು ನಡೆಯುವ ದಿನಗಳಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್‌ಎಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್‌ ನಿಲ್ದಾಣಕ್ಕೆ, ಹೂಡಿ ರಸ್ತೆ ಮೂಲಕ ಕಾಡುಗೋಡಿ ಬಸ್‌ ನಿಲ್ದಾಣಕ್ಕೆ, ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್‌ ಸಿಟಿಗೆ ಬಿಎಂಟಿಸಿ ಬಸ್ ಗಳು ಸಂಚಾರ ನಡೆಸಲಿವೆ.

ನಾಗವಾರ–ಟ್ಯಾನರಿ ರಸ್ತೆ ಮೂಲಕ ಆರ್‌.ಕೆ. ಹೆಗಡೆ ನಗರಕ್ಕೆ, ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್‌ಶಿಪ್‌ಗೆ, ಎಂಟಿಸಿಟಿ–ನಾಯಂಡಹಳ್ಳಿ ಮೂಲಕ ಕೆಂಗೇರಿ ಕೆಎಚ್‌ಬಿ ಕ್ವಾರ್ಟರ್ಸ್‌ ಕಡೆಗೆ, ಹೆಣ್ಣೂರು ರಸ್ತೆ ಮೂಲಕ ಬಾಗಲೂರಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ನೆಲಮಂಗಲ, ಯಲಹಂಕ 5ನೇ ಹಂತ, ಹೊಸಕೋಟೆ ಪಟ್ಟಣಕ್ಕೂ ಹೆಚ್ಚುವರಿ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಕ್ರಿಕೆಟ್ ಪ್ರೇಮಿಗಳು ಇದರ ಪ್ರಯೋಜನ ಪಡೆಯಬಹುದು ಎಂದು ಬಿಎಂಟಿಸಿ ಸಾರ್ವಜನಿಕ ಅಧಿಕಾರಿ ತಿಳಿಸಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಕ್ರಿಕೆಟ್ ಪ್ರೇಮಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ಬಿಎಂಟಿಸಿ ಐಪಿಎಲ್‌ ಸಹಿತ ಹಲವು ಕ್ರಿಕೆಟ್‌ ಪಂದ್ಯಾವಳಿ ವೇಳೆ ರಾತ್ರಿ ಪಂದ್ಯ ಮುಗಿಸಿಕೊಂಡು ಹೋಗಲು ಸಹಾಯಕವಾಗುವಂತೆ ಬಸ್‌ ಸೇವೆ ಒದಗಿಸಿತ್ತು. ಇದರಿಂದ ಬೆಂಗಳೂರಿನ ನಾನಾ ಭಾಗಗಳಿಗೆ ಹೋಗಲು ಇದು ಸಹಕಾರಿಯಾಗಿತ್ತು. ಈಗಲೂ ಬೆಂಗಳೂರು ಪಂದ್ಯಾವಳಿ ದಿನ ರಾತ್ರಿ ಬಸ್‌ ಸೇವೆ ಕ್ರಿಕೆಟ್‌ ಪ್ರೇಮಿಗಳಿಗೆ ಸಹಾಯಕವಾಗಲಿದೆ.

ನಮ್ಮ ಮೆಟ್ರೋ

ಬೆಂಗಳೂರಿನಲ್ಲಿ ನಡೆಯಲಿರುವ ಟಾಟಾ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗೆ ಅನುಕೂಲವಾಗಲು ನಮ್ಮ ಮೆಟ್ರೊ ಸಂಚಾರ ಸೇವೆಯ ಅವಧಿಯನ್ನು ಏಪ್ರಿಲ್ 15, ಮೇ 4,12 ಮತ್ತು ಮೇ 18ರಂದು ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಈ ಪಂದ್ಯ ದಿನಗಳಲ್ಲಿ ಎಲ್ಲಾ ಮೆಟ್ರೊ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ವಾಪಾಸ್‌ ಬರುವುದಕ್ಕೂ ಪೇಪರ್ ಟಿಕೆಟ್ ಗಳು 50 ರೂಪಾಯಿಗೆ ಮಾರಾಟಕ್ಕೆ ಸಿಗಲಿವೆ. ಕಬ್ಬನ್ ಪಾರ್ಕ್ ಮತ್ತು ಎಂ ಜಿ ರಸ್ತೆ ಮೆಟ್ರೊ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೊ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನಗಳಲ್ಲಿ ರಾತ್ರಿ 8ರಿಂದ ದಿನದ ಸೇವೆ ಕೊನೆಗೊಳ್ಳುವವರೆಗೆ ಮಾನ್ಯವಾಗಿರಲಿದೆ. ಆದರೆ ಈ ನಿಲ್ದಾಣಗಳಲ್ಲಿ ಟೋಕನ್ ವ್ಯವಸ್ಥೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಕ್ಯುಆರ್ ಕೋಡ್ ಟಿಕೆಟ್ ಗಳು, ಸ್ಮಾರ್ಟ್ ಕಾರ್ಡುಗಳು, ಎನ್ ಸಿಎಂಸಿ ಕಾರ್ಡುಗಳನ್ನು ಬಳಸಬಹುದು. ವಾಟ್ಸಾಪ್, ನಮ್ಮ ಮೆಟ್ರೊ ಆಪ್/ ಪೆಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ ಕ್ಯುಆರ್ ಟಿಕೆಟ್ ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

(ವರದಿ: ಎಚ್‌. ಮಾರುತಿ, ಬೆಂಗಳೂರು)

Whats_app_banner