ಕನ್ನಡ ಸುದ್ದಿ  /  ಕರ್ನಾಟಕ  /  Bangalore Mysore Expressway: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಮೊಬೈಲ್ ನಲ್ಲಿ ಮಾತಾಡಿಕೊಂಡು ಡ್ರೈವ್ ಮಾಡಿದರೆ ದಂಡ ಗ್ಯಾರಂಟಿ

Bangalore Mysore Expressway: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಮೊಬೈಲ್ ನಲ್ಲಿ ಮಾತಾಡಿಕೊಂಡು ಡ್ರೈವ್ ಮಾಡಿದರೆ ದಂಡ ಗ್ಯಾರಂಟಿ

ನೀವು ಮಿತಿಗಿಂತ ಹೆಚ್ಚಿನ ವೇಗದಲ್ಲಿ ವಾಹನ ಓಡಿಸುತ್ತಿದ್ದರೆ ದಂಡ ಬೀಳಲಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕ್ಯಾಮರಾಗಳು ಈಗಾಗಲೇ ವೇಗ ಸೆರೆ ಹಿಡಿಯುವುದನ್ನು ಆರಂಭಿಸಿವೆ.ವರದಿ: ಎಚ್.ಮಾರುತಿ.ಬೆಂಗಳೂರು

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕ್ಯಾಮರಾ ಕಣ್ಗಾವಲು
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕ್ಯಾಮರಾ ಕಣ್ಗಾವಲು

ಬೆಂಗಳೂರು: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಮೊಬೈಲ್ ನಲ್ಲಿ ಮಾತನಾಡಿಕೊಂಡು ಡ್ರೈವಿಂಗ್ ಮಾಡಿಕೊಂಡು ಹೋಗುತ್ತಿದ್ದೀರಾ? ಇನ್ನು ಮುಂದೆ ಅಂತಹ ದುಸ್ಸಾಹಸಕ್ಕೆ ಕೈ ಹಾಕಬೇಡಿ, ಇಂತಹುದೇ ವಾಹನವಾದರೂ ನೀವು ಮೊಬೈಲ್ ನಲ್ಲಿ ಮಾತನಾಡುತ್ತಿರುವ ದೃಶ್ಯವನ್ನು ಸೆರೆಹಿಡಿಯಲಿವೆ ಕ್ಯಾಮರಾಗಳು ! ಇದೇ ರೀತಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕರೊಬ್ಬರು ಮೊಬೈಲ್ ನಲ್ಲಿ ಮಾತನಾಡಿಕೊಂಡು ಬಸ್ ಚಾಲನೆ ಮಾಡುತ್ತಿದ್ದ ದೃಶ್ಯವನ್ನು ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಬಸ್ ಚಾಲಕನ ವಿರುದ್ಧ ಕ್ರಮ ಜರುಗಿಸುವಂತೆ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಎಕ್ಸ್ ನಲ್ಲಿ ಬಸ್ ಚಾಲಕ ಮಾತನಾಡುತ್ತಿರುವ ದೃಶ್ಯ ಮತ್ತು ಬಸ್ ನ ಫೋಟೊವನ್ನು ಹಂಚಿಕೊಂಡಿದ್ದಾರೆ.ಅಲೋಕ್ ಕುಮಾರ್ ಅವರು, ಮೈಸೂರು-ಬೆಂಗಳೂರು-ಎಕ್ಸ್‌ಪ್ರೆಸ್ ವೇನಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರು ರಾಜ್ಯ ಸಂಚಾರ ವಿಭಾಗದ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ನಮ್ಮ ಎಲ್ಲ ಸಿಸಿಟಿವಿಗಳು ಅವುಗಳ ಕೆಲಸವನ್ನುಅಚ್ಚುಕಟ್ಟಾಗಿ ಮಾಡುತ್ತಿವೆ. ಮೇ 11 ರಂದು ಚನ್ನಪಟ್ಟಣ ಬಳಿ ಕೆಎಸ್‌ಆರ್‌ಟಿಸಿ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದಾರೆ ಎಂದು ದಾಖಲೆ ಸಹಿತ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಪತ್ರ ಬರೆದಿದ್ದಾರೆ.

ಹೈವೇನಲ್ಲಿ ನಮ್ಮ ಪೊಲೀಸ್ ಕ್ಯಾಮೆರಾಗಳು ಸಮರ್ಥವಾಗಿ ತಮ್ಮ ಕೆಲಸ ಮಾಡುತ್ತಿವೆ. ಕೇವಲ 15 ದಿನದಲ್ಲಿ 12,192 ಸಂಚಾರ ನಿಯಮ ಉಲ್ಲಂಘನೆಗಳನ್ನು ಸೆರೆ ಹಿಡಿದಿವೆ. ಸಂಚಾರ ನಿಯಮ ಉಲ್ಲಂಘನೆಯಿಂದ ಅಪಘಾತವಾದರೆ ಅದನ್ನು ಕುಟುಂಬದವರು ಸಹಿಸಿಕೊಳ್ಳಲು ಸಾಧ್ಯವೇ? ಒಮ್ಮೆ ಯೋಚಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಚಾಲಕನ ವಿರುದ್ಧ ಸಾರಿಗೆ ಸಂಸ್ಥೆ ಕ್ರಮಕೈಗೊಳ್ಳಬೇಕು. ಜೊತೆಗೆ ದಂಡದ ಮೊತ್ತ ರೂ.1,500 ಹಣವನ್ನು ಕಟ್ಟಬೇಕು ಎಂದು ಅಲೋಕ್ ಕುಮಾರ್ ವಿವರಗಳನ್ನು ಹಂಚಿಕೊಂಡಿದ್ದಾರೆ.

ಈ ಸುದ್ದಿಯ ಜೊತೆಗೆ ಕಾರಿನಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಚಾಲನೆ ಮಾಡುತ್ತಿರುವ ಇತರರ ಫೋಟೊಗಳನ್ನೂ ಹಂಚಿಕೊಂಡಿದ್ದಾರೆ.

ಯಾವುದೇ ಸಂಚಾರ ಉಲ್ಲಂಘನೆಗಳನ್ನು ನಾವು ಸಹಿಸುವುದಿಲ್ಲ ಎಂದು ಈ ಮೂಲಕ ಅಲೋಕ್ ಕುಮಾರ್ ಅವರು ವಾಹನ ಸವಾರರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಮುಂದಿನ ಬಾರಿ ಈ ರಸ್ತೆಯಲ್ಲಿ ಪ್ರಯಾಣಿಸುವಾಗ ಅಪಿತಪ್ಪಿಯೂ ಮೊಬೈಲ್ ನಲ್ಲಿ ಮಾತನಾಡಲು ಪ್ರಯತ್ನಿಸಬೇಡಿ. ಅಲೋಕ್ ಕುಮಾರ್ ಅವರು ನಿಮ್ಮನ್ನು ಸೆರೆ ಹಿಡಿದು ದಂಡ ವಸೂಲಿ ಮಾಡದೆ ಬಿಡುವುದಿಲ್ಲ ಎನ್ನುವ ಮಾತಂತೂ ನಿಜವೂ ಹೌದು.

(ವರದಿ: ಎಚ್. ಮಾರುತಿ, ಬೆಂಗಳೂರು)

ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.

ಟಿ20 ವರ್ಲ್ಡ್‌ಕಪ್ 2024