ಕನ್ನಡ ಸುದ್ದಿ  /  ಕರ್ನಾಟಕ  /  Hassan Scandal: ಸಂತ್ರಸ್ತ ಮಹಿಳೆ ಅಪಹರಣ, ಎಚ್‌ಡಿ ರೇವಣ್ಣ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್‌

Hassan Scandal: ಸಂತ್ರಸ್ತ ಮಹಿಳೆ ಅಪಹರಣ, ಎಚ್‌ಡಿ ರೇವಣ್ಣ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್‌

ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

ಮಾಜಿ ಸಚಿವ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆದಿದೆ.
ಮಾಜಿ ಸಚಿವ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆದಿದೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನಲ್ಲಿ ಸೋಮವಾರ ನಡೆದಿದೆ. ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ವಿವಾದವನ್ನು ನ್ಯಾಯಾಧೀಶರು ಆಲಿಸಿದರು. ಆದರೆ ಜಾಮೀನು ನೀಡುವ ಕುರಿತು ತೀರ್ಪನ್ನು ಕಾಯ್ದಿರಿಸಿದ್ದಾರೆ. ಸೋಮವಾರ ಸಂಜೆಯೇ ತೀರ್ಪು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಟ್ರೆಂಡಿಂಗ್​ ಸುದ್ದಿ

ಕೆಆರ್‌ನಗರ ತಾಲ್ಲೂಕಿನ ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣ ಪಾತ್ರ ಇದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಎಸ್‌ಐಟಿ ಪೊಲೀಸರು ರೇವಣ್ಣ ಅವರನ್ನು ಕಳೆದ ವಾರವೇ ಬಂಧಿಸಿದ್ದರು. ಆನಂತರ ಅವರ ಜಾಮೀನು ಅರ್ಜಿ ವಜಾ ಆಗಿ ನಾಲ್ಕು ದಿನದಿಂದ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ಧಾರೆ. ಈಗಾಗಲೇ ರೇವಣ್ಣ ಅವರಿಗೆ ಜಾಮೀನು ನೀಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದ್ದು. ಸೋಮವಾರ ವಿಚಾರಣೆ ನಡೆದಿದೆ. ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್‌ ಅವರು ವಾದ ಮಂಡಿಸಿದ್ದಾರೆ. ಇಡೀ ಪ್ರಕರಣದಲ್ಲಿ ರೇವಣ್ಣ ಪಾತ್ರವಿಲ್ಲ. ಅಲ್ಲದೇ ಪೊಲೀಸರು ಹಾಕಿರುವ ಪ್ರಕರಣಕ್ಕೂ ರೇವಣ್ಣ ಅವರಿಗೂ ಸಂಬಂಧವೇ ಇಲ್ಲ. ಇದು ಜಾಮೀನು ನೀಡುವ ಪ್ರಕರಣವಾಗಿರುವುದರಿಂದ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಪಬ್ಲಿಕ್‌ ಪ್ರಾಸಿಕೂಟರ್‌ ಜಯನ್‌ ಕೊಠಾರಿ, ರೇವಣ್ಣ ಅವರೇ ಅಪಹರಣಕ್ಕೆ ಪ್ರೇರಣೆ ನೀಡುವ ಕುರಿತು ಈಗಾಗಲೇ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಈ ಕುರಿತು ಸಾಕ್ಷ್ಯಗಳಿಗೆ. ರೇವಣ್ಣ ಅವರು ಪ್ರಭಾವಿಯಾಗಿರುವುದರಿಂದ ಸಾಕ್ಷಿ ನಾಶದ ಸಾಧ್ಯತೆಯೂ ಇದೆ, ಇದರಿಂದ ಜಾಮೀನು ಮಂಜೂರು ಮಾಡಬಾರದು ಎಂದು ಕೋರಿಕೊಂಡರು.

ಪ್ರಕರಣದ ಕುರಿತು ಎರಡು ಕಡೆಯವರ ವಾದವನ್ನು ಆಲಿಸಿದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ಜಾಮೀನು ಅರ್ಜಿಯನ್ನು ಕಾಯ್ದಿರಿಸಿದ್ದಾರೆ.

ಜಾಮೀನು ಮಂಜೂರಾಗಬಹುದು ಎನ್ನುವ ಕಾರಣದಿಂದ ಈಗಾಗಲೇ ರೇವಣ್ಣ ಅವರ ಕುಟುಂಬದ ಸದಸ್ಯರು ಕೂಡ ನ್ಯಾಯಾಲಯ ಆವರಣದಲ್ಲಿ ಜಮಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point