ಕನ್ನಡ ಸುದ್ದಿ  /  ಕರ್ನಾಟಕ  /  ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ; ಸಂತ್ರಸ್ತನ ವಿರುದ್ಧವೇ ಕೇಸ್ ದಾಖಲು

ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ; ಸಂತ್ರಸ್ತನ ವಿರುದ್ಧವೇ ಕೇಸ್ ದಾಖಲು

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್ ಸಹೋದರ ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕಿರುಕಳ ಆರೋಪ ಕೇಳಿಬಂದಿದೆ. ಆದರೆ ಆರೋಪ ಮಾಡಿದ ಸಂತ್ರಸ್ತನ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ; ಸಂತ್ರಸ್ತನ ವಿರುದ್ಧವೇ ಕೇಸ್ ದಾಖಲು
ಪ್ರಜ್ವಲ್ ರೇವಣ್ಣ ಬೆನ್ನಲ್ಲೇ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ; ಸಂತ್ರಸ್ತನ ವಿರುದ್ಧವೇ ಕೇಸ್ ದಾಖಲು

ಹಾಸನ: ಜೆಡಿಎಸ್ ಎಂಎಲ್‌ಸಿ ಡಾ.ಸೂರಜ್ ರೇವಣ್ಣ (JDS MLC Suraj Revanna) ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆದರೆ ಆರೋಪ ಮಾಡಿದ ಸಂತ್ರಸ್ತನ ವಿರುದ್ಧವೇ ಪ್ರಕರಣ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿರೋದಾಗಿ ಸುಳ್ಳು ಹೇಳೋದಾಗಿ ಬೆದರಿಸಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಸಂತ್ರಸ್ತನ ವಿರುದ್ಧ ವಿಧಾನ ಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ರಿಂದ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಸೂರಜ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರ ತನಿಖೆಯ ನಂತರ ಸತ್ಯಾಂಶ ಹೊರ ಬೀಳಲಿದೆ.

ಸೂರಜ್ ರೇವಣ್ಣ ಆಪ್ತ ನೀಡಿರುವ ದೂರಿನಲ್ಲಿ ಏನಿದೆ?

ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ನನ್ನ ಬಳಿ ಬಂದು ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ ಸಂತ್ರಸ್ತ, ಕೆಲಸ ಕೇಳಿ ವಾಪಸ್ಸು ಬಂದ ಬಳಿಕ ಬ್ಲಾಕ್ ಮೇಲ್ ಮಾಡಿದ್ದಾನೆ. ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ, ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು, ನೀನು ನಿಮ್ಮ ಬಾಸ್ ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಕೊಡ್ತೇನೆ ಎಂದು ಬೆದರಿಕೆ ಹಾಕಿದ್ರು, ಈ ವಿಚಾರವನ್ನು ನಾನು ನಮ್ಮ ಬಾಸ್ ಗೆ ತಿಳಿಸಿದೆ.

ಟ್ರೆಂಡಿಂಗ್​ ಸುದ್ದಿ

ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ, ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದ್ರು ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ. ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕೊ ಲೀಗಲ್ ಕೇಸ್ ಸೀಲ್ ಇರೊ ಆಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ. ಐದು ಕೋಟಿ ಬಳಿಕ ಮೂರು ಕೋಟಿ ಅಥವಾ ಕಡೆಗೆ ಎರಡುವರೆ ಕೋಟಿಯಾದ್ರು ಹಣ ಕೊಡಿಸು ಎಂದು ಡಿಮ್ಯಾಂಡ್ ಮಾಡಿದ್ದ.

ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದಾನೆ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡೋರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡೋದಾಗಿ ಬೆದರಿಕೆ ಹಾಕಿದ್ರು ಎಂದು ಶಿವಕುಮಾರ್ ಆರೋಪಿಸಿದ್ದಾರೆ. ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ನೀಡಿರುವ ದೂರಿನ ಮೇರೆಗೆ ಹೊಳೆನರಸೀಪುರ ನಗರಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)