ಕನ್ನಡ ಸುದ್ದಿ  /  ಕರ್ನಾಟಕ  /  Guarantee Scheme: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ಬದಲಾಗಬಹುದೇ?: ಕಾಂಗ್ರೆಸ್‌ ಪ್ರಮುಖರು ಹೇಳಿದ್ದೇನು

Guarantee Scheme: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆ ಬದಲಾಗಬಹುದೇ?: ಕಾಂಗ್ರೆಸ್‌ ಪ್ರಮುಖರು ಹೇಳಿದ್ದೇನು

Lok Sabha Elections ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮೊದಲು ಚರ್ಚೆಯಲ್ಲಿದ್ದ ಗ್ಯಾರಂಟಿ ಯೋಜನೆಗಳ ಕುರಿತಾದ ವಿಷಯ ಈಗ ಮುನ್ನಲೆಗೆ ಬಂದಿದೆ. ಗ್ಯಾರಂಟಿ ಯೋಜನೆ( Guarantee scheme) ರದ್ದುಪಡಿಸಿ ಇಲ್ಲವೇ ಬದಲಿಸಿ ಎನ್ನುವ ಚರ್ಚೆ ಕಾಂಗ್ರೆಸ್‌ನಲ್ಲಿ( Congress) ಜೋರಾಗಿದೆ.

ಕರ್ನಾಟಕದಲ್ಲಿ ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳು
ಕರ್ನಾಟಕದಲ್ಲಿ ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳು

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ನಿರೀಕ್ಷಿತ ಸ್ಥಾನಗಳು ಬಾರದೇ ಇದ್ದರೆ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವ ಕುರಿತು ಯೋಚಿಸಬೇಕಾಗುತ್ತದೆ. ನೀವು ಯೋಚಿಸಿಯೇ ಮತ ಹಾಕಿ ಎಂದು ಕಾಂಗ್ರೆಸ್‌ನ ಕೆಲವು ಸಚಿವರು, ಶಾಸಕರು ಬಹಿರಂಗವಾಗಿಯೇ ಹೇಳಿದ್ದರು. ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆಯೇ ಅಥವಾ ಬದಲಾವಣೆ ಆಗಲಿವೆಯೇ ಎನ್ನುವ ಚರ್ಚೆಗಳು ಆಗಲೇ ನಡೆದಿದ್ದವು. ಚುನಾವಣೆಯಲ್ಲಿ ಕಾಂಗ್ರೆಸ್‌ ಗೆ ಈ ಬಾರಿ ಎರಡಂಕಿ ಸ್ಥಾನಗಳೂ ಬಂದಿಲ್ಲ. ಇದರಿಂದ ಇಲ್ಲಿ ಗ್ಯಾರಂಟಿ ಯೋಜನೆಗಳು ಏನಾಗಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಟ್ರೆಂಡಿಂಗ್​ ಸುದ್ದಿ

ಅದರಲ್ಲೂ ಲೋಕಸಭೆ ಚುನಾವಣೆಯಲ್ಲ ಸೋತ ಅಭ್ಯರ್ಥಿ, ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್‌ ಸೋಲು ಅನುಭವಿಸಿದ ಶಾಸಕ ಸಹಿತ ಕೆಲವರು ಗ್ಯಾರಂಟಿ ಯೋಜನೆಗಳಿಂದ ಉಪಯೋಗವಿಲ್ಲ. ಗ್ಯಾರಂಟಿ ಯೋಜನೆಗಳು ನಮಗೆ ಮತ ತಂದುಕೊಡಲಿಲ್ಲ ಎನ್ನುವ ಅಭಿಪ್ರಾಯಗಳು ಚುನಾವಣೆ ಬಳಿಕ ಹೇಳುತ್ತಿರುವುದು ಇಂತಹ ಚರ್ಚೆಗಳನ್ನು ಹುಟ್ಟು ಹಾಕಿದೆ.

ಯಾರು ಏನು ಹೇಳಿದರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸೋತಿರುವ ಎಂ.ಲಕ್ಷ್ಮಣ, ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಬಿಜೆಪಿ ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿತ್ತು. ಜನ ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ. ಗ್ಯಾರಂಟಿ ನಿಲ್ಲಿಸೋದೇ ಒಳ್ಳೆಯದು ಎನ್ನುವುದು ನನ್ನ ಸಲಹೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಶೇ. 70ರಷ್ಟು ಮೇಲ್ವರ್ಗದವರು ಈ ಯೋಜನೆ ಫಲಾನುಭವಿಗಳಗಿದ್ದಾರೆ. ಬೆಂಜ್ ಕಾರು ಹೊಂದಿರುವವನು, 25 ಸಾವಿರ ಸಂಬಳ ಪಡೆಯುವ ವ್ಯಕ್ತಿಗೆ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ. ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದಿದ್ದರು ಲಕ್ಷ್ಮಣ್.

ಚುನಾವಣೆ ಮುನ್ನವೇ ಗ್ಯಾರಂಟಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ನಮಗೆ ಮತ ನೀಡಿದರೆ ಗ್ಯಾರಂಟಿ ಇರುವುದಿಲ್ಲ ಎಂದಿದ್ದ ಮಾಗಡಿ ಕಾಂಗ್ರೆಸ್‌ ಶಾಸಕ ಎಚ್‌.ಸಿ.ಬಾಲಕೃಷ್ಣ, , ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿಲ್ಲ. ಡಿ.ಕೆ.ಸುರೇಶ್‌ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಬಂದಿರುವ ಮತಗಳನ್ನು ಗಮನಿಸಿದರೆ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿಲ್ಲ ಎಂಬ ಮನವರಿಕೆ ಆಗಿದೆ. ನಿಮ್ಮ ಗ್ಯಾರಂಟಿ ಅವಶ್ಯಕತೆ ಇಲ್ಲ ಅಂತ ಜನ ತೀರ್ಮಾನ ಮಾಡಿದ್ದಾರೆ. ಸಿಎಂ ಮತ್ತು ಡಿಸಿಎಂ, ಹಿರಿಯರು ಮಂತ್ರಿಮಂಡಲದಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ .ಇದನ್ನು ಮುಂದುವರೆಸಬೇಕೇ ಬೇಡವೇ ಎಂಬುದನ್ನು ತೀರ್ಮಾನ ಮಾಡುವಷ್ಟು ದೊಡ್ಡವನು ನಾನಲ್ಲಎಂದು ಹೇಳಿದ್ದರು.

ಗ್ಯಾರಂಟಿ ನಿಲ್ಲಿಸೋಲ್ಲ ಎಂದ ಹಿರಿಯ ಸಚಿವ

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಚುನಾವಣೆಗು ಮೊದಲು ಈ ರೀತಿಯ ಬಹಳಷ್ಟು ಪ್ರಶ್ನೆಗಳು ಕೇಳಿ ಬಂದವು. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸುತ್ತದೆ ಎಂದು ಬಿಜೆಪಿಯವರು ಸುಳ್ಳು ಸುದ್ದಿ ಹಬ್ಬಿಸಿದರು. ಇದಕ್ಕೆ ಚುನಾವಣೆ ಸಂದರ್ಭದಲ್ಲಿಯೇ ಮುಖ್ಯಮಂತ್ರಿಯವರು, ಪಕ್ಷದ ಅಧ್ಯಕ್ಷರು ಸೇರಿದಂತೆ ನಾವೆಲ್ಲ ಸ್ಪಷ್ಟಪಡಿಸಿದ್ದೇವೆ. ಬೆಂಗಳೂರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಸೂಕ್ತವಲ್ಲವೆಂದು ಈಗಾಗಲೇ ಸರ್ಕಾರ ಮಾಡಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ನಾವು ಗ್ಯಾರಂಟಿ ಯೋಜನೆಗಳನ್ನು ಕೊಡುವುದಕ್ಕು ಮೊದಲು ಬಹಳಷ್ಟು ಚರ್ಚೆ ಮಾಡಿದ್ದೇವೆ. ನಮ್ಮ ಉದ್ದೇಶ ಇರುವುದು ಬಡತನ ನಿರ್ಮೂಲನೆ. ಬಡ ಜನರಿಗೆ ಏನಾದರು ಮಾಡಬೇಕು ಎಂಬ ಉದ್ದೇಶದಿಂದ ಪ್ರಣಾಳಿಕೆಯ ಅಧ್ಯಕ್ಷನಾಗಿ ಚರ್ಚೆ ಮಾಡಿ, ಗ್ಯಾರಂಟಿ ಯೋಜನೆಗಳ ತೀರ್ಮಾನ ತೆಗೆದುಕೊಂಡಿದ್ದೇವೆ. ಯಾವುದೇ ಕಾರಣಕ್ಕು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದು ಸೂಕ್ತವಲ್ಲ ಎಂದು ತೀರ್ಮಾನ ಮಾಡಿಕೊಂಡಿದ್ದೇವೆ. ಯಾರು ಏನೆ ಹೇಳಿದರು ಸಹ ಈಗಾಗಲೇ ಮುಖ್ಯಮಂತ್ರಿಯವರು, ಪಕ್ಷದ ಅಧ್ಯಕ್ಷರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಒಂದಷ್ಟು ಹಣಕಾಸಿನ ತೊಂದರೆಯಾಗುತ್ತದೆ ಎಂಬುದು ನಿಜ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುವಾಗ ಮರು ಹೊಂದಿಕೆ ಮಾಡಬೇಕಾಗುತ್ತದೆ. ಇದನ್ನು ನಾವು ಮಾಡುತ್ತೇವೆ. ಜನ ಹಸಿವಿನಿಂದ ಖಾಲಿ ಹೊಟ್ಟೆಯಲ್ಲಿದ್ದು, ಯಾವ ಬೇರೆ ಯೋಜನೆಗಳನ್ನು ಜಾರಿಗೆ ತಂದರು ಪ್ರಯೋಜನ ಆಗುವುದಿಲ್ಲ ಎಂದು ಹೇಳಿದರು.

ಬದಲಾವಣೆ ಏನಾಗಬಹುದು

  • ಗ್ಯಾರಂಟಿ ಯೋಜನೆಗಳನ್ನು ಯಥಾರೀತಿ ಮುಂದುವರೆಸುವ ಬದಲು ಕೆಲವು ಬದಲಾವಣೆ ಮಾಡುವ ತೀರ್ಮಾನವನ್ನು ಕಾಂಗ್ರೆಸ್‌ ಸರ್ಕಾರ ಕೈಗೊಳ್ಳಬಹುದು.
  • ಬಹುತೇಕ ಐದೂ ಗ್ಯಾರಂಟಿ ಯೋಜನೆಗಳಿಗೆ ಕೆಲವು ಮಿತಿಗಳನ್ನು ಹೇರಬಹುದು.
  • ಗೃಹಜ್ಯೋತಿ, ಶಕ್ತಿ, ಯುವನಿಧಿ, ಗೃಹಲಕ್ಷ್ಮಿ ಯೋಜನೆಗಳನ್ನು ಉಳ್ಳವರಿಗೂ ನೀಡುತ್ತಿರುವ ಬಗ್ಗೆ ಆಕ್ಷೇಪಗಳಿದ್ದು, ಇದಕ್ಕೆ ಮಾನದಂಡಗಳನ್ನು ರೂಪಿಸಬಹುದು.
  • ಆ ಮೂಲಕ ಫಲಾನುಭವಿಗಳ ಸಂಖ್ಯೆಯನ್ನುಕಡಿಮೆ ಮಾಡಬಹುದು.
  • ಫಲಾನುಭವಿಗಳ ಸಂಖ್ಯೆ ಕಡಿಮೆಯಾದಷ್ಟು ಗ್ಯಾರಂಟಿ ಯೋಜನೆಗಳ ಮೇಲೆ ಆಗುತ್ತಿರುವ ಹೊರೆ ತಗ್ಗಿಸಬಹುದು.
  • ಉಳಿಯುವ ಹಣವನ್ನು ಅಭಿವೃದ್ದಿ ಕಾರ್ಯಗಳಿಗೆ ವಿನಿಯೋಗಿಸಬಹುದು.
  • ಇದಕ್ಕಾಗಿ ಸಚಿವರು, ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಬಹುದು.
  • ಸಮಿತಿ ವರದಿ ಆಧರಿಸಿ ಗ್ಯಾರಂಟಿ ಯೋಜನೆಗಳಿಗೆ ಹೊಸ ರೂಪ ನೀಡಬಹುದು.

ಟಿ20 ವರ್ಲ್ಡ್‌ಕಪ್ 2024