Karnataka Budget Session: ಕರ್ನಾಟಕ ಬಜೆಟ್ 2024, ಗ್ಯಾರಂಟಿ ಯೋಜನೆಗಳನ್ನು ಹೊಗಳಿದ ರಾಜ್ಯಪಾಲರು, ಕೇಸರಿ ಶಾಲಿನಲ್ಲಿ ಬಿಜೆಪಿ ಸದಸ್ಯರು
ಕನ್ನಡ ಸುದ್ದಿ  /  ಕರ್ನಾಟಕ  /  Karnataka Budget Session: ಕರ್ನಾಟಕ ಬಜೆಟ್ 2024, ಗ್ಯಾರಂಟಿ ಯೋಜನೆಗಳನ್ನು ಹೊಗಳಿದ ರಾಜ್ಯಪಾಲರು, ಕೇಸರಿ ಶಾಲಿನಲ್ಲಿ ಬಿಜೆಪಿ ಸದಸ್ಯರು

Karnataka Budget Session: ಕರ್ನಾಟಕ ಬಜೆಟ್ 2024, ಗ್ಯಾರಂಟಿ ಯೋಜನೆಗಳನ್ನು ಹೊಗಳಿದ ರಾಜ್ಯಪಾಲರು, ಕೇಸರಿ ಶಾಲಿನಲ್ಲಿ ಬಿಜೆಪಿ ಸದಸ್ಯರು

ಕರ್ನಾಟಕ ಬಜೆಟ್ 2024: ಕರ್ನಾಟಕದ ಬಜೆಟ್‌ ಅಧಿವೇಶನ ಸೋಮವಾರದಿಂದ ಆರಂಭಗೊಂಡಿದೆ. ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಮುಂದಿನ ಸಾಲಿನ ಬಜೆಟ್‌ ಅನ್ನು ಶುಕ್ರವಾರ ಮಂಡಿಸುವರು.

ಕರ್ನಾಟಕ ಬಜೆಟ್ 2024: ವಿಧಾನಮಂಡಳ ಅಧಿವೇಶನಕೆಕ ಆಗಮಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಎಚ್‌.ಕೆ.ಪಾಟೀಲ್‌ ಸ್ವಾಗತಿಸಿದರು.
ಕರ್ನಾಟಕ ಬಜೆಟ್ 2024: ವಿಧಾನಮಂಡಳ ಅಧಿವೇಶನಕೆಕ ಆಗಮಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಎಚ್‌.ಕೆ.ಪಾಟೀಲ್‌ ಸ್ವಾಗತಿಸಿದರು.

ಬೆಂಗಳೂರು: ಕರ್ನಾಟಕದ ವಿಧಾನಸಭೆಯ ಬಜೆಟ್‌ (ಕರ್ನಾಟಕ ಬಜೆಟ್ 2024) ಅಧಿವೇಶನ ಸೋಮವಾರ ಆರಂಭಗೊಂಡಿದೆ. ವಿಧಾನಸಭೆಯಲ್ಲಿ ಉಭಯ ಸದನಗಳ ಸದಸ್ಯರು ಸೇರಿದ್ದರು. ಈ ವೇಳೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಕರ್ನಾಟಕದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಭಾಷಣ ಮಾಡಿದರು. ಬಹುತೇಕ ಸರ್ಕಾರ ಕಳೆದ ಅವಧಿಯಲ್ಲಿ ಕೈಗೊಂಡ ಯೋಜನೆಗಳ ಕುರಿತು ರಾಜ್ಯಪಾಲರು ಪ್ರಸ್ತಾಪಿಸಿದರು. ವಿಶೇಷವಾಗಿ ಕರ್ನಾಟಕದಲ್ಲಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ರಾಜ್ಯಪಾಲರು ಮೆಚ್ಚುಗೆ ಸೂಚಿಸಿದರು. ಸದನಕ್ಕೆ ಬಿಜೆಪಿಯ ಸದಸ್ಯರು ಕೇಸರಿ ಶಾಲು ಹೊದ್ದು ಬಂದು ಗಮನ ಸೆಳೆದರು.

ಇದನ್ನೂ ಓದಿರಿ: HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಅವಧಿ ಮತ್ತಷ್ಟು ವಿಸ್ತರಣೆ, ಇಂದು ಸಾರಿಗೆ ಸಚಿವರ ಸಭೆಯಲ್ಲಿ ತೀರ್ಮಾನ

ಕರ್ನಾಟಕ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ ಯಾಗಿವೆ. ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಪರವಾಗಿವೆ. ಇವುಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವುದು ಗಮನಿಸಬೇಕಾದ ಅಂಶ ಎಂದು ರಾಜ್ಯಪಾಲರು ಹೇಳಿದರು.

ಸರ್ಕಾರದಿಂದ 5 ಕೆಜಿ ಅಕ್ಕಿ ಮತ್ತು 5 ಕೆಜಿ ಅಕ್ಕಿಯ ಹಣವನ್ನ ನೀಡಲಾಗುತ್ತಿದ್ದು, ಅನ್ನಭಾಗ್ಯ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದೆ . ಜಾತಿ ಬೇಧವಿಲ್ಲದೆ ಜನರಿಗೆ ಅಕ್ಕಿಕೊಡುತ್ತಿರುವುದು ಶ್ಲಾಘನೀಯ. ಗೃಹಜ್ಯೋತಿ ಯೋಜನೆ ಮೂಲಕ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿದೆ. ಯುವನಿಧಿ ಗ್ಯಾರಂಟಿ ಯೋಜನೆಯ ಉಪಯೋಗವನ್ನು ಯುವಕರು ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬೆಳಿಗ್ಗೆ 11ಕ್ಕೆ ಸರಿಯಾಗಿ ವಿಧಾನಸಭೆ ಆಗಮಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸ್ವಾಗತಿಸಿದರು. ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಆರಂಭಿಸಿದರು.

ಸದನಕ್ಕೆ ಬಿಜೆಪಿಯ ಹಲವು ಸದಸ್ಯರು ಕೇಸರಿ ಶಾಲು ಧರಿಸಿ ಸದನಕ್ಕೆ ಆಗಮಿಸಿದ್ದು ವಿಶೇಷ. ಉಳಿದವರಿಗೆ ಸದನ ಪ್ರವೇಶಿಸುವಾಗ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿ ಸಿಬ್ಬಂದಿ ಕೇಸರಿ ಶಾಲುಗಳನ್ನು ನೀಡಿದರು.

Whats_app_banner