Cabinet decisions: ಕರ್ನಾಟಕ ಸಚಿವ ಸಂಪುಟ ಸಭೆ, ಯಾವ ಊರಿಗೆ ಏನು ನೀಡುವ ತೀರ್ಮಾನ ಆಯಿತು?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಲವಾರು ತೀರ್ಮಾನಗಳು ಆಗಿವೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯು ಹಲವು ತೀರ್ಮಾನಗಳನ್ನು ಕೈಗೊಂಡಿದೆ. ಅದರಲ್ಲೂ ಕಲಬುರಗಿ, ಬೆಳಗಾವಿ, ಕೊಪ್ಪಳ, ಹಾಸನ, ಮೈಸೂರಿನ ಹಲವು ಯೋಜನೆಗಳ ಬೇಡಿಕೆಗೂ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ಮಾಹಿತಿಯನ್ನು ನೀಡಿದರು.
1.ಭಾರತ್ ಚಿನ್ನದ ಗಣಿ ಸಂಸ್ಥೆಯ, ಕೆಜಿಎಫ್ ಕೋಲಾರ ಜಿಲ್ಲೆಯಲ್ಲಿ ನಿಷ್ಕ್ರಿಯಗೊಂಡಿರುವ ಗಣಿಗುತ್ತಿಗೆ ಪ್ರದೇಶದಲ್ಲಿನ 13 ಟೈಲಿಂಗ್ ಡಂಪ್ಸ್ ಗಳ 1003.4 ಎಕರೆ ಪ್ರದೇಶದಲ್ಲಿ ಗಣಿಗುತ್ತಿಗೆ ಚಟುವಟಿಕೆಗಳನ್ನು ಮುಂದುವರೆಸಲು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಸಚಿವ ಸಂಪುಟ ಸಹಮತಿ ನೀಡಿದೆ. 5213.21 ಹೆಕ್ಟೇರ್ ಪ್ರದೇಶದಲ್ಲಿ ಈ ಚಟುವಟಿಕೆಗಳು ನಡೆಯಲಿವೆ. 75.24 ಕೋಟಿ 2022-23 ರವರೆಗೆ ಬಿಜಿಎಂಎಲ್ ರಾಜ್ಯಕ್ಕೆ ಬಾಕಿ ಮೊತ್ತವನ್ನು ಪಾವತಿಸಬೇಕಿದೆ. 2330 ಎಕರೆ ಭೂಮಿಯನ್ನು ನಮ್ಮ ಸರ್ಕಾರಕ್ಕೆ ಕೈಗಾರಿಕಾ ವಸಾಹತುವನ್ನು ಸ್ಥಾಪಿಸಲು ನೀಡಬೇಕೆನ್ನುವ ಬೇಡಿಕೆ ಸರ್ಕಾರದ್ದು. ಇದರಿಂದ ಸಾವಿರಾರು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ
2. ಉನ್ನತ ಶಿಕ್ಷಣ ಇಲಾಖೆಯ ವಿಶ್ವವಿದ್ಯಾಲಯಗಳಲ್ಲಿ ರಾಜ್ಯದಲ್ಲಿ ಪ್ರಧಾನ ಮಂತ್ರಿ ಉಚ್ಛತರ್ ಶಿಕ್ಷಾ ಅಭಿಯಾನ (PM- USHA) ಯೋಜನೆಯನ್ನು ಆಯಾಯ ವಿಶ್ವವಿದ್ಯಾಲಯಗಳ ವಿಸ್ಕೃತ ಯೋಜನಾ ವರದಿಯಲ್ಲಿ ಸೂಚಿಸಿರುವಂತೆ ಬೆಂಗಳೂರು ವಿಶ್ವವಿದ್ಯಾಲಯ (ಬೆಂಗಳೂರು), ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ (ಬೆಳಗಾವಿ), ಕರ್ನಾಟಕ ವಿಶ್ವವಿದ್ಯಾಲಯ (ಧಾರವಾಡ), ಮಂಗಳೂರು ವಿಶ್ವವಿದ್ಯಾಲಯ (ಮಂಗಳೂರು), ಕಲಬುರಗಿ ವಿಶ್ವವಿದ್ಯಾಲಯ (ಕಲಬುರಗಿ) ಹಾಗೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ (ಬೆಂಗಳೂರು) ಗಳಲ್ಲಿ ಕೇಂದ್ರದ ವಂತಿಕೆ ರೂ.167.86 ಮತ್ತು ರಾಜ್ಯದ ವಂತಿಕೆ ರೂ. 111.91 ಕೋಟಿ ಒಟ್ಟು ರೂ.279.77 ಕೋಟಿಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.
3. ಹಾಸನ ಜಿಲ್ಲೆ ಮೊಸಳೆಹೊಸಹಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪರಿಷ್ಕೃತ ಅಂದಾಜಿನಲ್ಲಿ ಅಳವಡಿಸಿಕೊಂಡಿರುವ ಮಾರ್ಪಟಿತ ಕಾಮಗಾರಿಗಳಿಗೆ ಮತ್ತು ಪರಿಷ್ಕøತ ಮೊತ್ತ ರೂ.59.57 ಕೋಟಿಗಳ ಅಂದಾಜಿಗೆ ಅನುಮೋದನೆ ನೀಡಲು; ಸದರಿ ಕಾಮಗಾರಿಯ ಬಾಕಿ ಮೊತ್ತವನ್ನು 2024-25ನೇ ಸಾಲಿನ ಆಯವ್ಯಯ ಲೆಕ್ಕಶೀರ್ಷಿಕೆ: 4202-02-104-1-03-386 ರಡಿ ಹಂಚಿಕೆಯಾಗಿರುವ ಅನುದಾನದಲ್ಲಿ ಬಿಡುಗಡೆಗೊಳಿಸಲು ತೀರ್ಮಾನ
4.ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಸಂಸ್ಥೆಯಡಿ ಬರುವ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ನೂತನ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ರೂ.75.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
5.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಡಿ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1234 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಯೋಜನೆಯನ್ನು ರೂ.29.19 ಕೋಟಿ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು (ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರೂ.25.85 ಕೋಟಿ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರೂ.3.34 ಕೋಟಿ) ಸಚಿವ ಸಂಪುಟ ನಿರ್ಧರಿಸಿದೆ.
6.ರಾಜ್ಯದ 8 ಜಿಲ್ಲೆಗಳಲ್ಲಿನ 201 ಕ್ರೈಸ್ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೋಟರಿ ಇಂಟರ್‍ನ್ಯಾಷನಲ್ ಬೆಂಗಳೂರು ಸಹಭಾಗಿತ್ವದೊಂದಿಗೆ ಒಟ್ಟು ವೆಚ್ಚ ರೂ.2.37 ಕೋಟಿಗಳ ಆಡಳಿತಾತ್ಮಕ ಅನುಮೋದನೆ.
7.ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕುಸನೂರ ವಸತಿ ಯೋಜನೆಯಲ್ಲಿ ಕುಸನೂರ ಗ್ರಾಮದ ವಿವಿಧ ಸರ್ವೆ ನಂಬರ್‍ಗಳಲ್ಲಿ ವಸತಿ ಅಭಿವೃದ್ಧಿ ಯೋಜನೆಗೆ 2016-17 ನೇ ಸಾಲಿನ ದರಪಟ್ಟಿಯಂತೆ ಅನುಮೋದನೆಯಾಗಿರುವ ರೂ.94.80 ಕೋಟಿಗಳ ಅಂದಾಜು ಮೊತ್ತವನ್ನು ಪ್ರಾಧಿಕಾರವು 2021-22ನೇ ಸಾಲಿನ ಏಕರೂಪ ದರಪಟ್ಟಿ ಮತ್ತು ಶೇ.18 ರಷ್ಟು ಜಿಎಸ್‍ಟಿ ತೆರಿಗೆಯನ್ನು ಅಳವಡಿಸಿಕೊಂಡು ಸಲ್ಲಿಸಿರುವ ಪರಿಷ್ಕೃತ ಮೊತ್ತ ರೂ.122.40 ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
8.ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಕಣಬರ್ಗಿ ಗ್ರಾಮದಲ್ಲಿ ವಸತಿ ಯೋಜನೆ ಸಂಖ್ಯೆ: 61 ರಲ್ಲಿ ಒಟ್ಟು 157 ಎಕರೆ 1 ಗುಂಟೆ 8 ಆಣೆ ಒಟ್ಟಾರೆ ಜಮೀನಿನಲ್ಲಿ ವಸತಿ ಬಡಾವಣೆಯನ್ನು ಅಭಿವೃದ್ಧಿ ಸಲುವಾಗಿ ಅನುಮೋದನೆಯಾದ ಒಟ್ಟು 127.71 ಕೋಟಿಗಳ ಮೊತ್ತದ ಅಂದಾಜು ಪತ್ರಿಕೆಯನ್ನು 2023-24 ನೇ ಸಾಲಿನ ಚಾಲ್ತಿಯಲ್ಲಿರುವ ಪ್ರಕಟಿತ ಏಕರೂಪ ಅನುಸೂಚಿ ದರಗಳ ಅನ್ವಯ ಅಂದಾಜು ಪತ್ರಿಕೆಗಳನ್ನು ಪರಿಷ್ಕರಿಸಿರುವುದರಿಂದ ಪರಿಷ್ಕೃತ ಮೊತ್ತ ರೂ.137.70 ಕೋಟಿಗಳ ಅಂದಾಜು ಪತ್ರಿಕೆಗೆ ಷರತ್ತಿಗೊಳಪಟ್ಟು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿದೆ.
9. ಕೊಪ್ಪಳ ತಾಲ್ಲೂಕಿನ ಮುನಿರಾಬಾದ್ ಗ್ರಾಮದಲ್ಲಿ ವೀರಶೈವ ವಿದ್ಯಾವರ್ಧಕ ಸಂಘ ಇವರು ನಡೆಸುತ್ತಿರುವ ವಿಜಯನಗರ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಲೀಸ್ ನೀಡಲಾಗಿರುವ ಕರ್ನಾಟಕ ನೀರಾವರಿ ನಿಗಮದ 2.70 ಎಕರೆ ಜಾಗದ ಲೀಸ್ ಅವಧಿ ವಿಸ್ತರಣೆ.