Siddaramaiah: ಡಿಸಿಗಳೆಂದರೆ ಮಹಾರಾಜರೇನ್ರಿ, ಭ್ರಷ್ಟಾಚಾರ ಬಿಡಿ, ಜನರ ಕೆಲಸ ಮಾಡಿ, ಸಿಎಂ ಸಿದ್ದರಾಮಯ್ಯ ತಾಕೀತು
ಕನ್ನಡ ಸುದ್ದಿ  /  ಕರ್ನಾಟಕ  /  Siddaramaiah: ಡಿಸಿಗಳೆಂದರೆ ಮಹಾರಾಜರೇನ್ರಿ, ಭ್ರಷ್ಟಾಚಾರ ಬಿಡಿ, ಜನರ ಕೆಲಸ ಮಾಡಿ, ಸಿಎಂ ಸಿದ್ದರಾಮಯ್ಯ ತಾಕೀತು

Siddaramaiah: ಡಿಸಿಗಳೆಂದರೆ ಮಹಾರಾಜರೇನ್ರಿ, ಭ್ರಷ್ಟಾಚಾರ ಬಿಡಿ, ಜನರ ಕೆಲಸ ಮಾಡಿ, ಸಿಎಂ ಸಿದ್ದರಾಮಯ್ಯ ತಾಕೀತು

CM Warns Officials ಕರ್ನಾಟಕದ ಸಿಎಂ ಸಿದ್ದರಾಮಯ್ಯ( CM Siddaramaiah) ಸೋಮವಾರ ನಡೆದ ಡಿಸಿಗಳು ಹಾಗೂ ಜಿಪಂ ಸಿಇಒಗಳ ಸಭೆಯಲ್ಲಿ ಅಧಿಕಾರಿಗಳಿಗೆ ಚಾಟಿ ಬೀಸಿದರು.

ಬೆಂಗಳೂರಿನಲ್ಲಿ ಸೋಮವಾರ ಆರಂಭವಾದ ಡಿಸಿಗಳು ಹಾಗೂ ಜಿಪಂ ಸಿಇಒಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಬೆಂಗಳೂರಿನಲ್ಲಿ ಸೋಮವಾರ ಆರಂಭವಾದ ಡಿಸಿಗಳು ಹಾಗೂ ಜಿಪಂ ಸಿಇಒಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬೆಂಗಳೂರು: ಜಿಲ್ಲಾಧಿಕಾರಿಗಳು ಎಂದರೆ ಮಹಾರಾಜರೇನ್ರಿ, ನೀವು ಜನರ ಕೆಲಸ ಮಾಡಲು ಇರುವ ಅಧಿಕಾರಿಗಳು. ಅದನ್ನು ಸರಿಯಾಗಿ ಮಾಡಬೇಕು. ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ. ಅವತ್ತು ಭ್ರಷ್ಟಾಚಾರ ಹೇಗಿತ್ತು, ಇವತ್ತು ಹೇಗಿದೆ ಎಂದು ನೋಡಿದಾಗ, ಕಾರ್ಯಾಂಗ ಮತ್ತು ಶಾಸಕಾಂಗ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದು ಕಂಡುಬರುತ್ತದೆ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಪರಿಣಾಮಕಾರಿಯಾಗಿ ಕೆಲಸಮಾಡಬೇಕು. ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು.‌ 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಡಿಸಿ ಮತ್ತು ಸಿಇಒ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಉದಾಸೀನ, ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಡಿಸಿ, ಸಿಇಒಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದರು.

ಸಿದ್ದರಾಮಯ್ಯ ಸೂಚನೆ

  • ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು.
  • ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ ಡಿಸಿ, ಡಿಎಚ್‌ಒ ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ

    ಇದನ್ನೂ ಓದಿರಿ: Personality Test: ಪ್ರೀತಿ ಬಿದ್ದಾಗ ನಿಮ್ಮ ವರ್ತನೆ ಹೇಗಿರುತ್ತೆ? ಮನಸ್ಸಿನ ರಹಸ್ಯ ತಿಳಿಸುವ ಚಿತ್ರವಿದು
  • ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ
  • ಕರ್ನಾಟಕ ಗುಡ್ ಗೌರ್ನೆನ್ಸ್ ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮಗಳ ಮೇಲಿದೆ
  • ಎಸ್ಎಸ್‌ಎಲ್‌ಸಿ ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿದೆ, ಈ ಬಾರಿ ಕಾಪಿಯನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ ಇದು ಡಿಸಿ, ಸಿಇಒ ಜತೆಗೆ ಇಲಾಖಾ ಕಾರ್ಯದರ್ಶಿಗಳ ಜವಾಬ್ದಾರಿ ಇಲ್ಲವಾ ? ಆತ್ಮಾವಲೋಕನ ಮಾಡಿಕೊಂಡು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಲೇಬೇಕು. ಡಿಡಿಪಿಐ, ಸಿಇಒ, ಡಿಸಿಗಳು ಒಟ್ಟಿಗೇ ಕುಳಿತು ಚರ್ಚಿಸಿ ಪರಿಸ್ಥಿತಿ ಸುಧಾರಿಸಬೇಕು

ಇದನ್ನೂ ಓದಿರಿ: Tumkur News:ರೈಲುಗಳಲ್ಲಿ ತುಂಬಿ ತುಳುಕುವ ಪ್ರಯಾಣಿಕರು, ಹೆಚ್ಚುವರಿ ಟ್ರೈನ್‌ಗೆ ಸಚಿವ ಸೋಮಣ್ಣಗೆ ತುಮಕೂರು ಜನರ ಬೇಡಿಕೆ

  • ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸರಿಯಾಗಿ ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ. ಡಿಸಿ, ಸಿಇಒಗಳು ಇರೋದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು ಸಂಬಂಧಿಸಿದವರಿಗೆ ಕಳುಹಿಸಿ ಮುಚ್ಚಳಿಕೆ ಕೊಟ್ಟು ಕೈತೊಳೆದುಕೊಳ್ಳೋಕಾ ? ಪರಿಹಾರ ಕೊಡಿಸುವವರು ಯಾರು? ಇದಕ್ಕೇನಾ ನೀವು ಇರೋದು ಎಂದು ಖಾರವಾಗಿ ಪ್ರಶ್ನಿಸಿದರು. ನೀವು ಪರಿಹಾರ ಕೊಡಲಿಲ್ಲ ಅಂತ ನನ್ನ ತನಕ ಬಂದಿದ್ದಾರೆ. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿ ಆಗಿಲ್ಲ, ಗುಣಾತ್ಮಕವಾಗಿ ವಿಲೇವಾರಿ ಆಗಿಲ್ಲ ಅಂದರೆ ನಿಮ್ಮ ವಿರುದ್ಧ ಕ್ರಮ ಖಚಿತ
  • ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ , ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. ಪಿಡಿಒ ಗಳು, ವಿಎ ಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆಡಿಸಿ, ಸಿಇಒಗಳು ಗಮನ ಹರಿಸಬೇಕು
  • ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ.
  • ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು. ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಮಾಡಬೇಕು

ಇದನ್ನೂ ಓದಿರಿ: ವಿಶ್ವದ ಟಾಪ್ 10 ಅತಿಶ್ರೀಮಂತ ಮಹಿಳೆಯರು; ಪಟ್ಟಿಯಲ್ಲಿ ಭಾರತದ ಸಾವಿತ್ರಿ ಜಿಂದಾಲ್, ಫೋರ್ಬ್ಸ್‌ ರಿಯಲ್ ಟೈಮ್‌ ಬಿಲಿಯನೇರ್ಸ್ ರ‍್ಯಾಂಕಿಂಗ್‌

  • ಸಿಂಧುತ್ವ ಪ್ರಮಾಣ ಪತ್ರ ಸಕಾಲದಲ್ಲಿ ನೀಡಬೇಕು. ಇವುಗಳನ್ನು ಬಾಕಿ ಉಳಿಸಿಕೊಳ್ಳದೆ ಸೂಕ್ತ ಆದೇಶ ಹೊರಡಿಸಬೇಕು. ಅಭ್ಯರ್ಥಿಗಳಿಗೆ ಸಕಾಲದಲ್ಲಿ ಸಿಂಧುತ್ವ ಪ್ರಮಾಣ ಪತ್ರ ನೀಡದೆ ಇದ್ದರೆ ಅವರ ಭವಿಷ್ಯ ಹಾಳಾಗುವುದಿಲ್ಲವೇ
  • ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿ ಉಳಿದಿರುವ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸಬೇಕು
  • ಬುಡಕಟ್ಟು ಜನರಿಗೆ ಅರಣ್ಯ ಜಮೀನು ಮಂಜೂರು ಮಾಡಲು 26,126 ಅರ್ಜಿಗಳು ಬಾಕಿ ಇವೆ. ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಅವರ ಹಾಡಿಗಳಿಗೆ ಹೋಗಲು ರಸ್ತೆ ಸಂಪರ್ಕ ಇರುವುದಿಲ್ಲ. ಈ ಬಗ್ಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಸೂಕ್ತ ಸುತ್ತೋಲೆ ಹೊರಡಿಸಬೇಕು.