ಕನ್ನಡ ಸುದ್ದಿ  /  ಕರ್ನಾಟಕ  /  Puc Exam-2: ದ್ವಿತೀಯ ಪಿಯುಸಿ ಪರೀಕ್ಷೆ-2, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಪರೀಕ್ಷಾ ಮಂಡಳಿ

PUC Exam-2: ದ್ವಿತೀಯ ಪಿಯುಸಿ ಪರೀಕ್ಷೆ-2, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಪರೀಕ್ಷಾ ಮಂಡಳಿ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದೆ.

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯು(Karnataka examination and assessment board) 2024ನೇ ಸಾಲಿನ ದ್ವಿತೀಯ ಪರೀಕ್ಷೆ-2ಗೆ(2nd Puc exam-2) ಅರ್ಜಿ ಸಲ್ಲಿಸಲು ನೀಡಿದ್ದ ದಿನಾಂಕವನ್ನು ವಿಸ್ತರಣೆ ಮಾಡಿದೆ. ಈ ಪರೀಕ್ಷೆಗೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಏಪ್ರಿಲ್‌ 18ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಮಂಡಳಿಯ ಅಧ್ಯಕ್ಷರಾಗಿರುವ ಐಎಎಸ್‌ ಅಧಿಕಾರಿ ಎನ್‌.ಮಂಜುಶ್ರೀ ತಿಳಿಸಿದ್ದಾರೆ. ಈ ಹಿಂದೆ ಏಪ್ರಿಲ್‌ 16ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿತ್ತು. ಈಗ ಅದನ್ನು ಎರಡು ದಿನ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಈ ಹಿಂದೆ ಮಂಗಳವಾರದವರೆಗೂ ಅವಕಾಶವಿತ್ತು. ಇನ್ನೂ ಎರಡು ದಿನ ಅವಕಾಶ ನೀಡಲಾಗಿದೆ. ಏಪ್ರಿಲ್‌ 18ರ ಗುರುವಾರ ಸಂಜೆ 5ರ ಒಳಗಾಗಿ ಅರ್ಜಿಯನ್ನು ಅಭ್ಯರ್ಥಿಗಳು ಸಲ್ಲಿಸಲು ಅವಕಾಶ ನೀಡಲಾಗಿದೆ. ತಮ್ಮ ಕಾಲೇಜುಗಳ ಮೂಲಕ ಅಥವಾ ಕೆಎಸ್‌ಇಎಬಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಸುಧಾರಣೆ ಬಯಸುವ ವಿದ್ಯಾರ್ಥಿಗಳು ಪರೀಕ್ಷೆ -2 ಬರೆಯಬಹುದು ಎಂದು ತಿಳಿಸಲಾಗಿದೆ.

2023ರ ನಂತರ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು 2024 ರ ದ್ವಿತೀಯ ಪಿಯುಸಿ ಪರೀಕ್ಷೆ- 2ರ ಪರೀಕ್ಷೆಯನ್ನು ತೆಗೆದುಕೊಳ್ಳಲು, ಮಂಡಲಿಯು ಒದಗಿಸಿದ ಫಲಿತಾಂಶದ ಪಟ್ಟಿಯ ಆಧಾರದ ಮೇಲೆ ಶುಲ್ಕವನ್ನು ಭರಿಸಿಕೊಳ್ಳಬಹುದು.

ಅದೇ ರೀತಿ, ಪ್ರಾಂಶುಪಾಲರು 2022ನೇ ಸಾಲಿನ ಅಥವಾ ಹಿಂದಿನ ವರ್ಷದ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿಯನ್ನು 'ಎಂಸಿಎ' ಆಧಾರದ ಮೇಲೆ ಮಾತ್ರ ಸ್ವೀಕರಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ತಿಳಿಸಿದೆ.

ಇದಲ್ಲದೇ 2024ನೇ ಸಾಲಿನ ದ್ವಿತೀಯ ಪರೀಕ್ಷೆ-1 ಹಾಜರಾತಿ ಕೊರತೆಯಿಂದ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದೇ ಇರುವವರು ಹಾಗೂ 2024ರ ಮಾರ್ಚ್‌ 31ಕ್ಕೆ 17 ವರ್ಷ ತುಂಬಿದ ಕಲಾ ಹಾಗೂ ವಾಣಿಜ್ಯ ವಿಭಾಗದ ಅರ್ಹ ವಿದ್ಯಾರ್ಥಿಗಳು 2024ನೇ ಸಾಲಿನ ದ್ವಿತೀಯ ಪರೀಕ್ಷೆ-2ಗೆ ಖಾಸಗಿ ಅಭ್ಯರ್ಥಿಯಾಗಿ ಕಾಲೇಜಿನಲ್ಲಿ ನೊಂದಾಯಿಸಿಕೊಳ್ಳಲು ಏಪ್ರಿಲ್‌ 18 ಕಡಯ ದಿನಾಂಕವಾಗಿದೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

IPL_Entry_Point