ಕನ್ನಡ ಸುದ್ದಿ  /  ಕರ್ನಾಟಕ  /  Pg Cet2024: ಪಿಜಿ ಸಿ ಇ ಟಿ ಪರೀಕ್ಷೆ ಜುಲೈ 13, 14; ದಿನಾಂಕ ಪ್ರಕಟಿಸಿದ ಕೆಇಎ

PG CET2024: ಪಿಜಿ ಸಿ ಇ ಟಿ ಪರೀಕ್ಷೆ ಜುಲೈ 13, 14; ದಿನಾಂಕ ಪ್ರಕಟಿಸಿದ ಕೆಇಎ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(Karnataka Examination Authority) ಪಿಜಿಸಿಇಟಿ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಿಜಿ ಸಿಇಟಿ ದಿನಾಂಕ ಪ್ರಕಟಿಸಿದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಿಜಿ ಸಿಇಟಿ ದಿನಾಂಕ ಪ್ರಕಟಿಸಿದೆ

ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ., ಎಂ. ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14 ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿ-ಸಿಇಟಿ) ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ಎಂಇ, ಎಂ.ಟೆಕ್, ಎಂ.ಆರ್ಕಿಟೆಕ್ಟರ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 13 ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್ ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಪಿಜಿ-ಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 18ರೊಳಗೆ ಶುಲ್ಕ ಪಾವತಿಸಬೇಕುಎಂದು ಅವರು ತಿಳಿಸಿದ್ದಾರೆ.

ಗೇಟ್ (GATE) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿ ಸಿಇಟಿ-2024 ಗೆ ಹಾಜರಾಗುವ ಅಗತ್ಯ ಇರುವುದಿಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹತೆ ಪಡೆಯಬೇಕಾಗುತ್ತದೆ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆಯೇ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ನೀಡಲಾಗುತ್ತದೆ ಎಂದು ಕೆಇಎ ಹೇಳಿದೆ.

(ವರದಿ: ಎಚ್‌.ಮಾರುತಿ. ಬೆಂಗಳೂರು)


(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024