Village Administrator Recruitment: ಗ್ರಾಮ ಆಡಳಿತಾಧಿಕಾರಿ 1 ಸಾವಿರ ಹುದ್ದೆ ನೇರ ನೇಮಕಾತಿ 2024, ಅರ್ಜಿ ಸಲ್ಲಿಕೆಗೆ ಏಪ್ರಿಲ್ 3 ಕಡೆ
Employment ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಡಿ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆ ಆರಂಭ,ಕಡೆಯ ದಿನದ ವಿವರವ ನ್ನು ನೀಡಲಾಗಿದೆ.
ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಗ್ರಾಮ ಆಡಳಿತಾಧಿಕಾರಿಗಳ ಒಂದು ಸಾವಿರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಿದೆ. ಮಾರ್ಚ್ 4ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದೆ. ಒಂದು ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 3ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್‌ಲೈನ್ ಮುಖಾಂತರವೇ ಏಪ್ರಿಲ್ 6ರ ಒಳಗೆ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ರಮ್ಯಾ ತಿಳಿಸಿದ್ದಾರೆ.
ಪ್ರಾಧಿಕಾರ ಅಭ್ಯರ್ಥಿಗಳಿಗೆ ನೀಡಿರುವ ಸೂಚನೆಗಳು ಏನೇನು?
- ಪಿಯುಸಿ ಪಾಸಾದವರು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಅರ್ಜಿ ಸಲ್ಲಿಸಲು ಅವಕಾಶ
- ಐಟಿಐ, ಡಿಪ್ಲೊಮಾ ಪಾಸ್ ಮಾಡಿದವರು ಅರ್ಜಿ ಸಲ್ಲಿಸಬಹುದು.
* ಕನಿಷ್ಠ 18 ವರ್ಷ ತುಂಬಿರಬೇಕು, ಗರಿಷ್ಠ ವಯಸ್ಸನ್ನು ವರ್ಗ ಆಧರಿಸಿ ನಿಗದಿಪಡಿಸಲಾಗಿದೆ.
- ಯಾವುದಾದರು ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚು ಕಡೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
ಇದನ್ನೂ ಓದಿರಿ: ಲಂಡನ್ನಲ್ಲಿ ಜನಿಸಿದ ವಿರಾಟ್ ಕೊಹ್ಲಿ ಪುತ್ರ ಅಕಾಯ್ ಬ್ರಿಟನ್ ಪೌರತ್ವ ಹೊಂದುತ್ತಾರಾ, ನಿಯಮ ಹೇಳುವುದೇನು? ಇಲ್ಲಿದೆ ವಿವರ
- ಶುಲ್ಕ ಸಾಮಾನ್ಯ, ಹಿಂದುಳಿದ ವರ್ಗದವರಿಗೆ 750 ರೂ. ಎಸ್ಸಿ ಎಸ್ಟಿ, ವಿಕಲಚೇತನರಿಗೆ 500 ರೂ. ನಿಗದಿಪಡಿಸಲಾಗಿದೆ.
- ಸ್ಪರ್ಧಾತ್ಮಕ ಪರೀಕ್ಷೆಯನ್ನು ಪರೀಕ್ಷಾ ಪ್ರಾಧಿಕಾರ ನಡೆಸಲಿದ್ದು. ಪರೀಕ್ಷೆಯಲ್ಲಿ ಆಯ್ಕೆಯಾಗಬೇಕು
- ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪಡೆದ ಅಂಕ ಆಧರಿಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.
- ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವೇತನ ಶ್ರೇಣಿ 21400 ರಿಂದ 42000 ರೂ. ನಿಗದಿಪಡಿಸಲಾಗಿದೆ.
ಇದನ್ನೂ ಓದಿರಿ: ‘ನಿರ್ಮಾಪಕರು ಅನ್ನ ಕೊಡೋ ಧಣಿಗಳು’; ಡಾ. ರಾಜ್‌ಕುಮಾರ್ ಹಳೇ ವಿಡಿಯೋ ಮೂಲಕ ದರ್ಶನ್‌ಗೆ ಟಕ್ಕರ್ ಕೊಟ್ಟ ಉಮಾಪತಿ!
ಅರ್ಜಿ ಹೀಗೆ ಸಲ್ಲಿಸಿ
- kea.kar.nic ವೆಬ್‌ಸೈಟ್ ಕ್ಲಿಕ್ ಮಾಡಿ
- ಅಲ್ಲಿ ಗ್ರಾಮ ಅಡಳಿತಾಧಿಕಾರಿ ಹುದ್ದೆಗೆ ನೇಮಕಾತಿ ಎನ್ನುವ ಸಾಲು ಕಾಣಲಿದೆ.
- ಅದರ ಮೇಲೆ ಕ್ಲಿಕ್ ಮಾಡಿದರೆ ಸಂಪೂರ್ಣ ವಿವರಗಳು ಸಿಗಲಿದೆ.
- ಜಿಲ್ಲಾವಾರು, ಹುದ್ದೆಗಳ ಲಭ್ಯತೆ, ಮೀಸಲಾತಿವಾರು ಸೀಟುಗಳ ಹಂಚಿಕೆಯನ್ನು ಮಾಡಲಾಗಿದ್ದು ಅದರ ಸಂಪೂರ್ಣ ವಿವರ ಕಾಣಲಿದೆ.
- ಇದರಲ್ಲಿ ಅರ್ಜಿ ಸಲ್ಲಿಸುವ ಮಾರ್ಗದ ವಿವರ ಇದೆ.
- ಅಲ್ಲಿಗೆ ತೆರಳಿ ನಿಮ್ಮ ಹೆಸರು, ವಿಳಾಸ, ವಿದ್ಯಾರ್ಹತೆ, ಯಾವ ಜಿಲ್ಲೆ ಎನ್ನುವ ಅಂಶವನ್ನು ನಮೂದಿಸಬೇಕು.
- ಆನಂತರ ಶುಲ್ಕವನ್ನು ಭರ್ತಿ ಮಾಡಿದ ಮಾಹಿತಿಯನ್ನೂ ಅದರಲ್ಲಿ ಉಲ್ಲೇಖಿಸಬೇಕು.
- ಇದಾದ ನಂತರ ಮುಂದಿನ ದಿನಗಳಲ್ಲಿ ನಿಮ್ಮ ಅರ್ಜಿ ಸ್ವೀಕೃತಗೊಂಡು ಪರೀಕ್ಷೆ ಪ್ರವೇಶ ಪತ್ರವೂ ಬರಲಿದೆ.
- ಅದನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಿ.
- ಪರೀಕ್ಷಾ ದಿನಾಂಕ, ಕೇಂದ್ರಗಳ ವಿವರವನ್ನು ಆನಂತರ ಪ್ರಕಟಿಸಲಾಗುತ್ತದೆ.
- ಮಾಹಿತಿಗೆ 080 23460460 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ವಿಭಾಗ