IAS Transfer: ಕರ್ನಾಟಕದ ಮೂವರು ಐಎಎಸ್‌ ಅಧಿಕಾರಿಗಳ ವರ್ಗ, ಕಾಲೇಜು ಶಿಕ್ಷಣ ಆಯುಕ್ತರಾಗಿ ಡಾ.ಮಂಜುಶ್ರೀ ನಿಯೋಜನೆ
ಕನ್ನಡ ಸುದ್ದಿ  /  ಕರ್ನಾಟಕ  /  Ias Transfer: ಕರ್ನಾಟಕದ ಮೂವರು ಐಎಎಸ್‌ ಅಧಿಕಾರಿಗಳ ವರ್ಗ, ಕಾಲೇಜು ಶಿಕ್ಷಣ ಆಯುಕ್ತರಾಗಿ ಡಾ.ಮಂಜುಶ್ರೀ ನಿಯೋಜನೆ

IAS Transfer: ಕರ್ನಾಟಕದ ಮೂವರು ಐಎಎಸ್‌ ಅಧಿಕಾರಿಗಳ ವರ್ಗ, ಕಾಲೇಜು ಶಿಕ್ಷಣ ಆಯುಕ್ತರಾಗಿ ಡಾ.ಮಂಜುಶ್ರೀ ನಿಯೋಜನೆ

ಕರ್ನಾಟಕ ಸರ್ಕಾರವೂ ಮೂವರು ಹಿರಿಯ ಐಎಎಸ್‌ ಅಧಿಕಾರಿಗಳನ್ನು ವರ್ಗ ಮಾಡಿ ಆದೇಶ ಹೊರಡಿಸಿದೆ. ವೈದ್ಯಕೀಯ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಗೆ ಹೊಸ ಅಧಿಕಾರಿಗಳ ನಿಯೋಜನೆಯಾಗಿದೆ.

ಐಎಎಸ್‌ ಅಧಿಕಾರಿಗಳಾದ ಮೊಹಮ್ಮದ್‌ ಮೊಹ್ಸಿನ್‌, ಡಾ.ಎನ್‌.ವಿ.ಪ್ರಸಾದ್‌ ಹಾಗೂ ಎನ್.ಮಂಜುಶ್ರೀ ಅವರನ್ನು ವರ್ಗ ಮಾಡಲಾಗಿದೆ.
ಐಎಎಸ್‌ ಅಧಿಕಾರಿಗಳಾದ ಮೊಹಮ್ಮದ್‌ ಮೊಹ್ಸಿನ್‌, ಡಾ.ಎನ್‌.ವಿ.ಪ್ರಸಾದ್‌ ಹಾಗೂ ಎನ್.ಮಂಜುಶ್ರೀ ಅವರನ್ನು ವರ್ಗ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ಸರ್ಕಾರವು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದೆ. ಮೂವರು ಹಿರಿಯ ಐಎಎಸ್‌ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಶಿಕ್ಷಣ, ವೈದ್ಯಕೀಯ ಶಿಕ್ಷಣ ಹಾಗೂ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ವರ್ಗಾವಣೆಯಾಗಿದೆ. ಕಳೆದ ವಾರವೂ ಕೆಲವು ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ವರ್ಗ ಮಾಡಿತ್ತು.

ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ವರ್ಗಾಯಿಸಿದೆ.

ಸಾರಿಗೆ ಇಲಾಖೆ ಕಾರ್ಯದರ್ಶಿಯಾಗಿದ್ದ ಡಾ.ಎನ್‌.ವಿ.ಪ್ರಸಾದ್‌ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಅದೇ ರೀತಿ ಕರ್ನಾಟಕ ಶಾಲೆ ಶಿಕ್ಷಣ ಮೌಲ್ಯಮಾಪನ ಹಾಗೂ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿದ್ದ ಎನ್‌.ಮಂಜುಶ್ರೀ ಅವರನ್ನು ವರ್ಗ ಮಾಡಲಾಗಿದೆ. ಅವರನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಆಯುಕ್ತರಾಗಿದ್ದ ಬಿ.ಬಿ.ಕಾವೇರಿ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಲಾಗಿತ್ತು.

ಅದೇ ರೀತಿ ಮುಖ್ಯಮಂತ್ರಿಗಳ ಕಾರ್ಯದರ್ಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಯಾಗಿದ್ದ ಕೆ.ವಿ.ತ್ರಿಲೋಕ ಚಂದ್ರ ಅವರನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಆಯುಕ್ತರನ್ನು ವರ್ಗಾಯಿಸಲಾಗಿತ್ತು.

ಬೆಂಗಳೂರು ನಗರ ಡಿಸಿಯಾಗಿದ್ದ ಕೆ.ಎ.ದಯಾನಂದ ಅವರನ್ನು ನೋಂದಣಿ ಇಲಾಖೆಯ ಐಜಿಯಾಗಿ ನೇಮಕ ಮಾಡಲಾಗಿದೆ. ಇದೇ ಹುದ್ದೆಯ ಪ್ರಭಾರ ಐಜಿಯಾಗಿ ದಯಾನಂದ್‌ ಕಾರ್ಯನಿರ್ವಹಿಸುತಿದ್ದರು.

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಜಿ.ಜಗದೀಶ್‌ ಅವರನ್ನು ಬೆಂಗಳೂರು ನಗರ ಡಿಸಿಯಾಗಿ ನಿಯೋಜಿಸಲಾಗಿದೆ.

ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿಯಾಗಿ ಆಹಾರ ಸುರಕ್ಷತಾ ಆಯುಕ್ತರಾಗಿದ್ದ ಶ್ರೀನಿವಾಸ್‌ ಅವರನ್ನು ನೇಮಿಸಲಾಗಿದೆ.

ಕರ್ನಾಟಕದ ಮೂವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶ
ಕರ್ನಾಟಕದ ಮೂವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶ
Whats_app_banner