Salary Hike: ಕರ್ನಾಟಕ ಸರ್ಕಾರಿ ನೌಕರರಿಗೂ ಶೇ. 3.75 ತುಟ್ಟಿಭತ್ಯೆ ಹೆಚ್ಚಳ, ಚುನಾವಣೆ ಮುನ್ನಾ ಬಂಪರ್‌-bangalore news karnataka hiked da to state government employees 3 75 percentage effect from 2024 january 1st kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Salary Hike: ಕರ್ನಾಟಕ ಸರ್ಕಾರಿ ನೌಕರರಿಗೂ ಶೇ. 3.75 ತುಟ್ಟಿಭತ್ಯೆ ಹೆಚ್ಚಳ, ಚುನಾವಣೆ ಮುನ್ನಾ ಬಂಪರ್‌

Salary Hike: ಕರ್ನಾಟಕ ಸರ್ಕಾರಿ ನೌಕರರಿಗೂ ಶೇ. 3.75 ತುಟ್ಟಿಭತ್ಯೆ ಹೆಚ್ಚಳ, ಚುನಾವಣೆ ಮುನ್ನಾ ಬಂಪರ್‌

ಕರ್ನಾಟಕ ಸರ್ಕಾರವೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಿಸಲಾಗಿದೆ.

umಬೆಂಗಳೂರು: ಕೇಂದ್ರ ಸರ್ಕಾರ ತುಟ್ಟಿಭತ್ಯೆಯನ್ನು ಶೇ. 4ರಷ್ಟು ಏರಿಕೆ ಮಾಡಿದ ಬೆನ್ನಲ್ಲೇ, ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರು ಹಾಗೂ ಪಿಂಚಣಿದಾರರಿಗೆ ಶೇ. 3.75 ರಷ್ಟು ತುಟ್ಟಿಭತ್ಯೆಯನ್ನು(DA) ಹೆಚ್ಚಿಸಿ ಆದೇಶ ಹೊರಡಿಸಿದೆ. ಮಂಗಳವಾರ ಈ ಕುರಿತು ಆದೇಶ ಹೊರ ಬಿದ್ದಿದೆ. ರಾಜ್ಯ ಸಕಾ೯ರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ 2024ರ ಜನವರಿ 1ರಿಂದ ಅನ್ವಯವಾಗುವಂತೆ ಜಾರಿಯಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 1792.71 ಕೋಟಿ ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5ಗೆ ಪರಿಷ್ಕರಿಸಿ ಮಂಜೂರು ಮಾಡಲಾಗಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್‌ ಅವರ ನೇತೃತ್ವದಲ್ಲಿ ಏಳನೇ ವೇತನ ಆಯೋಗದ ಪರಿಷ್ಕರಣೆಗೆ ಸಮಿತಿ ರಚಿಸಲಾಗಿದೆ. ಸಮಿತಿ ಇನ್ನೂ ವರದಿ ನೀಡಿಲ್ಲ. ಇದಕ್ಕೂ ಮುನ್ನವೇ ತುಟ್ಟಿಭತ್ಯೆ ಹೆಚ್ಚಳ ನೀಡುವುದಾಗಿ ಸರ್ಕಾರ ಹೇಳಿದೆ. ವರದಿ ಆಧರಿಸಿ ಆನಂತರ ವೇತನದಲ್ಲಾಗುವ ವ್ಯತ್ಯಾಸವನ್ನು ರಾಜ್ಯ ಸರ್ಕಾರ ಮುಂದೆ ಸರಿಪಡಿಸುವ ನಿರೀಕ್ಷೆಯಿದೆ.

ಇನ್ನೇನು ಲೋಕಸಭೆ ಚುನಾವಣೆ ಬಂದರೆ ಎರಡು ತಿಂಗಳು ಯಾವುದೇ ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ಈ ಕಾರಣದಿಂದಲೇ ಕೇಂದ್ರ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ನಿರ್ಧಾರ ಮಾಡಿತ್ತು. ಇದೇ ರೀತಿ ಕರ್ನಾಟಕ ಸರ್ಕಾರವೂ ನಿರ್ಧರಿಸಿದೆ.

ಆದೇಶದಲ್ಲಿ ಏನಿದೆ

  • ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ, 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ, ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ ಎಂದು ತಿಳಿಸಲಾಗಿದೆ.
  • ತಿದ್ದುಪಡಿ ಆದೇಶ ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 38.75 ರಿಂದ ಶೇಕಡ 42.5ಕ್ಕೆ ಹೆಚ್ಚಿಸಿ ಮಂಜೂರು ಮಾಡಲಾಗಿದೆ.

    ಇದನ್ನೂ ಓದಿರಿ: ಚಿನ್ನಸ್ವಾಮಿ ಮೈದಾನಕ್ಕೆ ನೀರಿನ ಸಮಸ್ಯೆ ಇಲ್ಲ; ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯ ನಡೆಸಲು ಸಮಸ್ಯೆ ಇಲ್ಲ ಎಂದ ಕೆಎಸ್‌ಸಿಎ
  • ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.
  • ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸಲಿದೆ.
  • ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.
  • ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
  • ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2024ರ ಮಾರ್ಚ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ಆದೇಶ ಹೇಳಿದೆ.