ಕನ್ನಡ ಸುದ್ದಿ  /  ಕರ್ನಾಟಕ  /  Bangalore News: ಕರೆ ವಿವರ ಸಂಗ್ರಹ ಮಂಗಳೂರು ಪೊಲೀಸ್‌ ಮಾಜಿ ಆಯುಕ್ತರ ವಿರುದ್ದ ಐಎಎಸ್‌ ಅಧಿಕಾರಿ ಬೆಂಗಳೂರಲ್ಲಿ ದೂರು

Bangalore News: ಕರೆ ವಿವರ ಸಂಗ್ರಹ ಮಂಗಳೂರು ಪೊಲೀಸ್‌ ಮಾಜಿ ಆಯುಕ್ತರ ವಿರುದ್ದ ಐಎಎಸ್‌ ಅಧಿಕಾರಿ ಬೆಂಗಳೂರಲ್ಲಿ ದೂರು

Case Against IPS Officer ಕೌಟುಂಬಿಕ ವಿಚಾರದಲ್ಲಿ ಕರ್ನಾಟಕದ ಐಎಎಸ್‌ ಅಧಿಕಾರಿ ಡಾ.ಆಕಾಶ್‌( Akash IAS) ಅವರು ನಿವೃತ್ತ ಐಪಿಎಸ್‌ ಅಧಿಕಾರಿ ಹಾಗೂ ಮಂಗಳೂರು ನಗರ ಮಾಜಿ ಪೊಲೀಸ್‌ ಆಯುಕ್ತ ಟಿ.ಆರ್.ಸುರೇಶ್‌( TR Suresh IPS) ಹಾಗೂ ಕುಟುಂಬದವರ ವಿರುದ್ದ ಬೆಂಗಳೂರಲ್ಲಿ ಪ್ರಕರಣ ದಾಖಲಿಸಿದ್ದಾರೆ.ವರದಿ: ಎಚ್‌.ಮಾರುತಿ. ಬೆಂಗಳೂರು

ನಿವೃತ್ತ ಐಪಿಎಸ್‌ ಅಧಿಕಾರಿ ಟಿ.ಆರ್.ಸುರೇಶ್‌ ವಿರುದ್ದ ಐಎಎಸ್‌ ಅಧಿಕಾರಿ ಆಕಾಶ್‌ ದೂರು ನೀಡಿದ್ಧಾರೆ.
ನಿವೃತ್ತ ಐಪಿಎಸ್‌ ಅಧಿಕಾರಿ ಟಿ.ಆರ್.ಸುರೇಶ್‌ ವಿರುದ್ದ ಐಎಎಸ್‌ ಅಧಿಕಾರಿ ಆಕಾಶ್‌ ದೂರು ನೀಡಿದ್ಧಾರೆ.

ಬೆಂಗಳೂರು: ಕಲಬುರಗಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಅಪರ ನಿರ್ದೇಶಕರಾಗಿರುವ ಐಎಎಸ್ ಅಧಿಕಾರಿ ಡಾ. ಎಸ್. ಆಕಾಶ್ ಅವರ ವೈಯಕ್ತಿಕ ಮೊಬೈಲ್ ಫೋನ್ ಕರೆಗಳ ವಿವರಗಳನ್ನು (ಸಿಡಿಆರ್) ಅಕ್ರಮವಾಗಿ ಸಂಗ್ರಹಿಸಿದ ಆರೋಪದಡಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ, ಶಿವಮೊಗ್ಗ ಮೂಲದ ಟಿ.ಆರ್. ಸುರೇಶ್ ಮತ್ತು ಹೆಬ್ಬಗೋಡಿ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ದೂರು ದಾಖಲಾಗಿದೆ.ಆಕಾಶ್ ಅವರು ತಮ್ಮ ಮಾವ ನಿವೃತ್ತ ಐಪಿಎಸ್ ಅಧಿಕಾರಿ ಟಿ.ಆರ್. ಸುರೇಶ್, ಪತ್ನಿ ವಂದನಾ, ಗಾಯತ್ರಿ, ಜಗದೀಶ್ ಹಾಗೂ ಸಿಡಿಆರ್ ಸಂಗ್ರಹಕ್ಕೆ ಸಹಕಾರ ನೀಡಿದ್ದ ಹೆಬ್ಬಗೋಡಿ ಠಾಣೆಯ ಇನ್‌ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ದೂರು ನೀಡಿದ್ದಾರೆ.ಇವರ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಡಾ. ಆಕಾಶ್ ಹಾಗೂ ಪತ್ನಿ ಡಾ.ವಂದನಾ ಅವರು ಎರಡು ವರ್ಷದ ಹಿಂದೆ ವಿವಾಹವಾಗಿದ್ದರು. ಮೈಸೂರು ಮೂಲದವರಾದ ಆಕಾಶ್‌ ಅವರು ಕೊಡಗು ಜಿಲ್ಲಾಪಂಚಾಯಿತಿ ಸಿಇಒ ಆಗಿದ್ದಾಗ ಪತ್ನಿ ವಂದನಾ ನಡುವೆ ಕೌಟುಂಬಿಕ ಜಗಳ ಶುರುವಾಗಿತ್ತು. ಆಗ ಮಡಿಕೇರಿಯಲ್ಲಿ ಪ್ರಕರಣಗಳು ದಾಖಲಾಗಿತ್ತು. ಇದಾದ ಬಳಿಕ ಇದೇ ಸಂಬಂಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ. ಜೊತೆಗೆ ನ್ಯಾಯಾಲಯದಲ್ಲೂ ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಆರೋಪಿಗಳು ಡಾ. ಆಕಾಶ್ ಅವರ ಮೊಬೈಲ್ ಕರೆಗಳ ವಿವರಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದರು ಎಂಬ ಆರೋಪವಿದೆ. ಅಕ್ರಮವಾಗಿ ಸಂಗ್ರಹಿಸಿದ ಮೊಬೈಲ್ ಕರೆಗಳ ವಿವರಗಳ ಆಧಾರದ ಮೇಲೆ ಆರೋಪಿಗಳು ಆಕಾಶ್ ಅವರಿಗೆ ಕಿರುಕುಳ ನೀಡುತ್ತಿದ್ದರು ಮತ್ತು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕೌಟುಂಬಿಕ ಕಲಹದಲ್ಲಿ ಅಕ್ರಮವಾಗಿ ಮೊಬೈಲ್ ಕರೆಗಳ ವಿವರವನ್ನು ಸಂಗ್ರಹಿಸಿರುವ ಆರೋಪಿಗಳ ವಿರುದ್ಧ ದೂರು ನೀಡಲು ಆಕಾಶ್ ಅವರು ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಸರ್ಕಾರ ಸಮ್ಮತಿ ನೀಡುತ್ತಿದ್ದಂತೆ ಆಕಾಶ್ ಅವರು ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಐಎಎಸ್‌ ಅಧಿಕಾರಿ ಡಾ.ಆಕಾಶ್‌ ಅವರು ನೀಡಿರುವ ದೂರಿನ ಆಧಾರದ ಮೇಲೆ ನಿವೃತ್ತ ಐಪಿಎಸ್‌ ಅಧಿಕಾರಿ ಹಾಗೂ ಕುಟುಂಬದವರ ಮೇಲೆ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ಕುರಿತು ವಿಚಾರಣೆ ನಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಮದ್ಯ ಕುಡಿದು ವಾಹನ ಚಾಲನೆ: 386 ಚಾಲಕರ ವಿರುದ್ಧ ಪ್ರಕರಣ

ಮದ್ಯ ಕುಡಿದು ವಾಹನ ಚಲಾಯಿಸುವವರ ಪತ್ತೆಗೆ ಬೆಂಗಳೂರು ನಗರದ ಸಂಚಾರ ಪೊಲೀಸರು ಶನಿವಾರ ರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ 386 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶನಿವಾರ ರಾತ್ರಿ 17,361 ವಾಹನಗಳನ್ನು ಪರಿಶೀಲಿಸಲಾಗಿದೆ.ಮದ್ಯ ಕುಡಿದು ವಾಹನ ಚಲಾಯಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಈ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದರು.

ಶನಿವಾರ ರಾತ್ರಿ ಮದ್ಯ ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದಿರುವ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ ವಾಹನಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

(ವರದಿ: ಎಚ್‌.ಮಾರುತಿ. ಬೆಂಗಳೂರು)

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024

ವಿಭಾಗ