Breaking News: ಕರ್ನಾಟಕ ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ
ಕನ್ನಡ ಸುದ್ದಿ  /  ಕರ್ನಾಟಕ  /  Breaking News: ಕರ್ನಾಟಕ ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

Breaking News: ಕರ್ನಾಟಕ ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

PSI Exam ಕರ್ನಾಟಕದಲ್ಲಿ ಪೊಲೀಸ್‌ ಇಲಾಖೆ ಸೆಪ್ಟಂಬರ್‌ ನಲ್ಲಿ ಆಯೋಜಿಸಿರುವ ಪಿಎಸ್‌ಐ ಪರೀಕ್ಷೆ ಮುಂದೆ ಹಾಕುವ ಸಾಧ್ಯತೆಯಿದೆ.

ಪಿಎಸ್‌ಐ ಪರೀಕ್ಷೆಯನ್ನು ಕರ್ನಾಟಕ ಪೊಲೀಸ್‌ ಇಲಾಖೆ ಮುಂದೆ ಹಾಕಬಹುದು,
ಪಿಎಸ್‌ಐ ಪರೀಕ್ಷೆಯನ್ನು ಕರ್ನಾಟಕ ಪೊಲೀಸ್‌ ಇಲಾಖೆ ಮುಂದೆ ಹಾಕಬಹುದು,

ಬೆಂಗಳೂರು: ಒಂದೇ ತಿಂಗಳಲ್ಲಿ ಮಾತ್ರವಲ್ಲ. ಒಂದೇ ದಿನ ಎರಡು ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳು ಎದುರಾದರೆ ಅಭ್ಯರ್ಥಿಗಳಿಗೆ ತೊಂದರೆ. ಇದರಿಂದ ಸಹಸ್ರಾರು ಉದ್ಯೋಗ ಆಕಾಂಕ್ಷಿಗಳು ಅವಕಾಶ ವಂಚಿತರಾಗುತ್ತಾರೆ. 2024ರ ಸೆಪ್ಟಂಬರ್‌ 22ರಂದು ಕರ್ನಾಟಕ ಪೊಲೀಸ್‌ ಇಲಾಖೆ ಆಯೋಜಿಸಿದ್ದ ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಹುದ್ದೆ ಮುಂದೆ ಹೋಗುವ ಸಾಧ್ಯತೆಯಿದೆ. ಏಕೆಂದರೆ ಅದೇ ದಿನ ಕೇಂದ್ರ ಲೋಕಸೇವಾ ಆಯೋಗ( UPSC) ಆಯೋಜಿಸಿರುವ ನಾನಾ ಪರೀಕ್ಷೆಗಳು ನಿಗದಿಯಾಗಿವೆ. ಒಂದೇ ದಿನ ಎರಡೂ ಪರೀಕ್ಷೆ ಎದುರಿಸುವುದು ಅಸಾಧ್ಯ ಎನ್ನುವ ಕಾರಣದಿಂದ ಕರ್ನಾಟಕ ಪೊಲೀಸ್‌ ಇಲಾಖೆ ತನ್ನ ಪರೀಕ್ಷೆಯನ್ನು ಮುಂದೆ ಹಾಕಲು ಯೋಚಿಸುತ್ತಿದೆ.

ಪಿಎಸ್ಐ ನೇಮಕಾತಿ ಪರೀಕ್ಷೆ ನಿಗಧಿಯಾಗಿದ್ದ ದಿನವೇ (ಸೆ.22) ಯುಪಿಎಸ್‌ಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಅವರು ಖಚಿತಪಡಿಸಿದರು.

ಸದಾಶಿವನಗರದ‌ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎಸ್‌ಸಿಗಿಂತ ಮೊದಲೇ ನಾವು ಪಿಎಸ್‌ಐ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದ್ದೇವೆ. ಮುಂದೂಡುವ ಬಗ್ಗೆ ಸಾಧ್ಯತೆ ಇದ್ದರೆ, ಹೆಚ್ಚಿನ ಮನವಿಗಳು ಬಂದಿದ್ದರೆ ಪರಿಗಣಿಸಬಹುದು. ಈ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಪಿಎಸ್ಐ ನೇಮಕಾತಿ ಬಹಳ ವಿಳಂಬವಾಗಿದೆ. ಈ ಹಿಂದೆ ಗೃಹ ಸಚಿವನಾಗಿದ್ದಾಗ ಯಾವುದೇ ಅಡೆತಡೆಗಳಿಲ್ಲದೇ ಸಾವಿರಾರು ಹುದ್ದೆಗಳ ನೇಮಕಾತಿ ಸುಲಭವಾಗಿ ನಡೆದಿದೆ‌. ಪಿಎಸ್ಐ ಹಗರಣದ ಬಳಿಕ ವಿಳಂಬವಾಗುತ್ತಿದೆ. ಫಲಿತಾಂಶ ಪ್ರಕಟಿಸಲು ಸಹ ಕೋರ್ಟ್‌ಗೆ ಹೋಗುತ್ತಿದ್ದಾರೆ. ಆದರೂ ಫಲಿತಾಂಶ‌ ಪ್ರಕಟಿಸಲು ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಹೆಚ್.ಡಿ.ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ವಿರುದ್ಧ ಅಕ್ರಮದ ಕುರಿತು ಪ್ರಾಸಿಕ್ಯೂಷನ್‌ಗೆ ವರ್ಷಾನುಗಟ್ಟಲೇ ಅವಕಾಶ ಕೊಟ್ಟಿಲ್ಲ ಎಂಬುದನ್ನು ಅಭಿಷೇಕ್ ಮನು ಸಿಂಘ್ವಿ ಅವರು ನ್ಯಾಯಾಲಯದ‌ ಮುಂದೆ ಪ್ರಸ್ತಾಪಿಸಿದ್ದಾರೆ. ರಾಜ್ಯಪಾಲರು ತರಾತುರಿಯಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬ ಅಂಶವನ್ನು ಗಮನಕ್ಕೆ ತಂದಿದ್ದಾರೆ. ಈ ವಿಚಾರವನ್ನು ರಾಷ್ಟ್ರಪತಿ ಭೇಟಿಗೆ ಹೋದಾಗ ಪ್ರಸ್ತಾಪಿಸುತ್ತೇವೆ ಎಂದು ಪರಮೇಶ್ವರ್‌ ಹೇಳಿದರು.