Employment Bill: ಕರ್ನಾಟಕದ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ, ಸಿಎಂ ಸಿದ್ದರಾಮಯ್ಯ, ಎಂಬಿ ಪಾಟೀಲ ಸ್ಪಷ್ಟನೆ ಏನು
ಕನ್ನಡ ಸುದ್ದಿ  /  ಕರ್ನಾಟಕ  /  Employment Bill: ಕರ್ನಾಟಕದ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ, ಸಿಎಂ ಸಿದ್ದರಾಮಯ್ಯ, ಎಂಬಿ ಪಾಟೀಲ ಸ್ಪಷ್ಟನೆ ಏನು

Employment Bill: ಕರ್ನಾಟಕದ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ, ಸಿಎಂ ಸಿದ್ದರಾಮಯ್ಯ, ಎಂಬಿ ಪಾಟೀಲ ಸ್ಪಷ್ಟನೆ ಏನು

CM Siddaramaiah Clarifies ಕರ್ನಾಟಲದ ಖಾಸಗಿ ವಲಯದಲ್ಲಿ ಕನ್ನಡಗಿರಿಗೆ ಉದ್ಯೋಗ ನೀಡುವ ವಿಚಾರದಲ್ಲಿ ಮಂಡಿಸುತ್ತಿರುವ ಮಸೂದೆ ಜಾರಿ ಬಗ್ಗೆಉಂಟಾಗಿದ್ದ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ( CM Siddaramaiah) ಹಾಗೂ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ( MB Patil) ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಗಿರಿಗೆ ಉದ್ಯೋಗ ನೀಡುವ ಮಸೂದೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಸಚಿವ ಎಂ,ಬಿ.ಪಾಟೀಲ ಸ್ಪಷ್ಟನೆ ನೀಡಿದರು,
ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಗಿರಿಗೆ ಉದ್ಯೋಗ ನೀಡುವ ಮಸೂದೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಸಚಿವ ಎಂ,ಬಿ.ಪಾಟೀಲ ಸ್ಪಷ್ಟನೆ ನೀಡಿದರು,

ಬೆಂಗಳೂರು: ಕರ್ನಾಟಕದ ಖಾಸಗಿ ಉದ್ಯಮಗಳಲ್ಲಿ ಕನ್ನಡಗರಿಗೆ ಹೆಚ್ಚಿನ ಉದ್ಯೋಗ ನೀಡುವ ಮಸೂದೆ ವಿಚಾರವಾಗಿ ಉಂಟಾಗಿದ್ದ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಎಷ್ಟು ಪ್ರಮಾಣದಲ್ಲಿ ಮೀಸಲು ನೀಡಬೇಕು ಎನ್ನುವ ವಿಚಾರದಲ್ಲಿ ಗೊಂದಲವಾಗಿತ್ತು. ಸಚಿವ ಸಂತೋಷ್‌ ಲಾಡ್‌ ಅವರು ಶೇ.75 ರವರೆಗೆ ಮೀಸಲು ಎಂದು ಹೇಳಿದ್ದರೆ, ಸಿಎಂ ಸಿದ್ದರಾಮಯ್ಯ ಶೇ. 100 ರಷ್ಟು ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡಲಾಗುವುದು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಗೊಂದಲ ಕೂಡ ಉಂಟಾಗಿತ್ತು. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎನ್ನುವುದು ಸಿದ್ದರಾಮಯ್ಯ ಅವರು ಎಕ್ಸ್‌ ಮೂಲಕ ಮಾಡಿರುವ ಪೋಸ್ಟ್‌ ನ ವಿವರಣೆ.

ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ: ಎಂ ಬಿ ಪಾಟೀಲ

ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಬುಧವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಈ ಸಂಬಂಧ ಸರಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಕೌಶಲಗಳಿಲ್ಲದ ಕನ್ನಡಿಗರಿಗೆ ಕೌಶಲ್ಯ ನೀಡಿ ಸಜ್ಜುಗೊಳಿಸುವ ಕೆಲಸವನ್ನೂ ಸರಕಾರವೇ ಮಾಡಲಿದೆ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.

ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. 'ಗ್ಲೋಬಲ್ ಚೈನಾ ಒನ್' ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಪಾಟೀಲ ಬಣ್ಣಿಸಿದ್ದಾರೆ.

Whats_app_banner