Karnataka Land Survey: 103 ವರ್ಷ ನಂತರ ಕರ್ನಾಟಕದಲ್ಲಿ ಸಂಪೂರ್ಣ ತಂತ್ರಜ್ಞಾನ ಆಧರಿತ ಭೂ ಮರು ಸರ್ವೇ
Karnataka Land Survey ಕರ್ನಾಟಕದಲ್ಲಿ ಒಂದು ಶತಮಾನದಿಂದ ಆಗದ ಭೂಮಿ ಸಮೀಕ್ಷೆ ಕಾರ್ಯ ಈಗ ಆರಂಭಗೊಂಡಿದೆ. ಅದೂ ಸಂಪೂರ್ಣ ತಂತ್ರಜ್ಞಾನ ಆಧರಿತವಾಗಿದೆ. ಇದಕ್ಕೆ ಕನಕಪುರ ತಾಲ್ಲೂಕಲ್ಲಿ ಚಾಲನೆ ದೊರಕಿದೆ.
ಬೆಂಗಳೂರು: ಕರ್ನಾಟಕದಲ್ಲಿ ಭೂ ಸಮೀಕ್ಷೆಗಳಾಗಿ 103 ವರ್ಷಗಳೇ ಕಳೆದಿವೆ. ಆನಂತರ ಅಲ್ಲಲ್ಲಿ ಪ್ರಯತ್ನ ಆಗಿದ್ದರೂ ಸಮಗ್ರ ಭೂ ಸಮೀಕ್ಷೆ ಆಗಿಲ್ಲ.
ಅದಕ್ಕೆ ಈಗ ಕಂದಾಯ ಇಲಾಖೆ ಕೈ ಹಾಕಿದೆ. ಅದೂ ಸಂಪೂರ್ಣ ತಂತ್ರಜ್ಞಾನ ಆಧರಿತ ಸಮೀಕ್ಷೆ. ಡ್ರೋಣ್ ಬಳಸಿ ಮೊದಲ ಬಾರಿ ಇಂತಹ ಸಮೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ 1920ರ ನಂತರ ಸರ್ವೇ ನಡೆದಿಲ್ಲ. ಪ್ರತಿ ಹಳ್ಳಿಯ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳಿಗೆ ಸಂಬಂಧಿಸಿದಂತೆ ಈಗ ಸರ್ಕಾರದ ಬಳಿ ಇರುವುದು ನೂರು ವರ್ಷಗಳ ಹಳೆಯ ಬ್ರಿಟೀಷರ ಕಾಲದಲ್ಲಿ ನಡೆದ ಸರ್ವೇ ದಾಖಲೆಯೇ ಆಗಿದೆ.
ಆದರೆ, ಈ ನೂರು ವರ್ಷದಲ್ಲಿ ಕೃಷಿ ಮತ್ತು ಜನವಸತಿ ಪ್ರದೇಶಗಳಲ್ಲಿ ಸಾಕಷ್ಟು ಬದಲಾವಣೆಯಾಗಿವೆ. ಪ್ರತಿಯೊಂದು ಗ್ರಾಮಠಾಣಾ ಗಡಿ ಹಾಗೂ ಸರ್ವೇ ನಂಬರ್ ಗಡಿಯಲ್ಲೂ ವ್ಯತ್ಯಾಸಗಳಾಗಿವೆ. ಈ ಬಗ್ಗೆ ಸರ್ಕಾರಿ ದಾಖಲೆಗಳಲ್ಲಿ ನಿಖರ ವಿವರಣೆ ಇರಲಿಲ್ಲ.
ಪರಿಣಾಮ ರೈತರು ತಮ್ಮದಲ್ಲದ ತಪ್ಪಿಗೆ ಸಾಕಷ್ಟು ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಸರ್ವೇ ನಂಬರ್ ಗೊಂದಲ ರೈತರ ಪಾಲಿಗೆ ಸಾಮಾನ್ಯ ಸಮಸ್ಯೆಯಾಗಿರುವ ಹತ್ತಾರು ಉದಾಹರಣೆಗಳಿವೆ. ಸರ್ಕಾರಿ ಜಮೀನನ್ನು ಗುರುತಿಸಿ ರಕ್ಷಿಸುವುದೂ ದೊಡ್ಡ ಸವಾಲಿನ ಕೆಲಸವೂ ಹೌದು.
ಈ ಎಲ್ಲಾ ಸಮಸ್ಯೆಗೆ ಇತಿಶ್ರೀ ಹಾಡುವ ಸಲುವಾಗಿ ಬುಧವಾರ ರಾಮನಗರ ಜಿಲ್ಲೆ ಕನಕಪುರ ತಾಲೂಕು ಉಯ್ಯಂಬಳ್ಳಿ ಹೋಬಳಿಯಲ್ಲಿ ಡ್ರೋಣ್ ಚಾಲಿತ ಭೂ ಮರು ಮಾಪನ ಕ್ಕೆ (ರೀ ಸರ್ವೇ) ಚಾಲನೆ ನೀಡಲಾಗಿದೆ.
ಈಗ ಪ್ರಾಯೋಗಿಕ ಸಮೀಕ್ಷೆ ಶುರುವಾಗಿದ್ದು, ಹಂತ ಹಂತವಾಗಿ ಕರ್ನಾಟಕ ರಾಜ್ಯದ ಎಲ್ಲೆಡೆ ವಿಸ್ತರಣೆಯಾಗಲಿದೆ.
ಸಚಿವರು ಹೇಳುವುದೇನು
ರೈತರ ಈ ಪರಿಸ್ಥಿತಿಗೆ ಸರ್ವೇ ಇಲಾಖೆಯಲ್ಲಿನ ಸಮಸ್ಯೆಯೇ ಕಾರಣ. ಬ್ರಿಟೀಷರ ಕಾಲದಲ್ಲಿ 1925 ರಲ್ಲಿ ನಡೆದ ಭೂ ಸರ್ವೇ ಯನ್ನೇ ಆಧಾರವಾಗಿಟ್ಟುಕೊಂಡು ನಾವು ಈಗಲೂ ವ್ಯವಹರಿಸುತ್ತಿದ್ದೇವೆ. ಇದೇ ಕಾರಣಕ್ಕೆ ಇದೀಗ ಭೂ ರೀ ಸರ್ವೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಇದು ಯಶಸ್ವಿಯಾದರೆ ರಾಜ್ಯಾದ್ಯಂತ ಎಲ್ಲಾ ಕೃಷಿ ಮತ್ತು ಅರಣ್ಯ ಭೂಮಿಯನ್ನು ರೀ ಸರ್ವೆ ಮಾಡಲಾಗುವುದು ಎನ್ನುತ್ತಾರೆ ಸಚಿವ ಕೃಷ್ಣಬೈರೇಗೌಡ.
ಭೂ ಸರ್ವೆ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಪರಿಣಾಮ ರೈತರೂ ಸಹ ತಮ್ಮದಲ್ಲದ ತಪ್ಪಿಗೆ ಸಾಕಷ್ಟು ನೋವನ್ನು ಅನುಭವಿಸಿದ್ದಾರೆ. ಹೀಗಾಗಿ ರೈತರ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ಶತಮಾನಗಳ ನಂತರ ಭೂ ರೀ ಸರ್ವೆ ಪ್ರಾಯೋಗಿಕ ಪರೀಕ್ಷೆಗೆ ಇಂದು ಚಾಲನೆ ನೀಡಲಾಗಿದೆ. ಈ ಮೂಲಕ ರೈತರ ಸರ್ವೇ ಡಿಸ್ಪ್ಯೂಟ್ ಗಳಿಗೆ ಶಾಶ್ವತ ಪರಿಹಾರ ಹಾಗೂ ಸರ್ಕಾರಿ ಭೂಮಿ ಗುರುತಿಸಿ ಒತ್ತುವರಿ ತೆರವು ಮಾಡಲು ಸಹಕಾರಿಯಾಗುವುದು ಎಂದು ಹೇಳುತ್ತಾರೆ.
ಕೃಷಿ ಭೂಮಿಗೂ ವಿಸ್ತರಣೆ
ಸರ್ವೇ ನಂಬರ್ ಡಿಸ್ಪ್ಯೂಟ್ ಎಂಬುದು ಇತ್ತೀಚೆಗೆ ರೈತರ ಪಾಲಿನ ಸಾಮಾನ್ಯ ಸಮಸ್ಯೆಯಾಗಿದೆ. ತಮ್ಮದಲ್ಲದ ತಪ್ಪಿಗೆ ದಿನಂಪ್ರತಿ ಸರ್ಕಾರಿ ಕಚೇರಿಯನ್ನು ಅಲೆಯುವಂತಾಗಿದೆ. ಈ ಪ್ರಾಯೋಗಿಕ ರೀ ಸರ್ವೇ ಯಶಸ್ವಿಯಾದರೆ ರಾಜ್ಯಾದ್ಯಂತ ಎಲ್ಲಾ ಕೃಷಿ ಜಮೀನುಗಳನ್ನೂ ಡ್ರೋನ್ ಮೂಲಕ ರೀ ಸರ್ವೇ ಮಾಡುವ ಚಿಂತನೆ ಇದೆ ಎನ್ನುತ್ತಾರೆ ಕಂದಾಯ ಸಚಿವ ಕೃಷ್ಣ ಬೈರೇಗೌಡ.
ರೀ ಸರ್ವೇ ಲಾಭವೇನು?
ಹೊಸ ತಂತ್ರಜ್ಞಾನದಲ್ಲಿ ಡ್ರೋನ್ ಪ್ರತಿ ಚ.ಕಿಲೊಮೀಟರ್ ಗೆ 4000 ಕ್ಕೂ ಅಧಿಕ ಫೋಟೊ ತೆಗೆಯುತ್ತದೆ. ಈ ಫೋಟೊಗಳ ಆಧಾರದಲ್ಲಿ ವೈಜ್ಞಾನಿಕವಾಗಿ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳನ್ನು ಗುರುತಿಸಲಾಗುವುದು.
ಪ್ರತಿ ಹಳ್ಳಿಯ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳಿಗೆ ಸಂಬಂಧಿಸಿದಂತೆ ಈಗ ಸರ್ಕಾರದ ಬಳಿ ಇರುವುದು ನೂರು ವರ್ಷಗಳ ಹಳೆಯ ದಾಖಲೆ ಮಾತ್ರ.
ಆದರೆ ಈ ನೂರು ವರ್ಷದಲ್ಲಿ ಕೃಷಿ ಮತ್ತು ಜನವಸತಿ ಪ್ರದೇಶಗಳಲ್ಲಿ ಸಾಕಷ್ಟು ಬದಲಾವಣೆಯಾಗಿವೆ. ಪ್ರತಿಯೊಂದು ಗ್ರಾಮಠಾಣಾ ಹಾಗೂ ಸರ್ವೇ ನಂ ಗಡಿಯಲ್ಲೂ ವ್ಯತ್ಯಾಸಗಳಿವೆ. ಈ ಬಗ್ಗೆ ಸರ್ಕಾರಿ ದಾಖಲೆಗಳಲ್ಲಿ ನಿಖರ ವಿವರಣೆ ಇಲ್ಲ.
ಇದಲ್ಲದೆ, ಸರ್ಕಾರಿ ಭೂ ಒತ್ತುವರಿ ಜಮೀನು ಯಾವುದು? ಹಾಗೂ ಅರಣ್ಯ ಪ್ರದೇಶದ ಗಡಿಯ ಬಗ್ಗೆಯೂ ಸಾಕಷ್ಟು ಗೊಂದಲ ಇದೆ. ಈ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯುವ ಕೆಲಸ ಹಂತ ಹಂತವಾಗಿ ಆಗಲಿದೆ.
ಇದನ್ನೂ ಓದಿರಿ