ಕನ್ನಡ ಸುದ್ದಿ  /  ಕರ್ನಾಟಕ  /  Sslc Results2024: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೀವು ನೋಡುವುದು ಹೇಗೆ

SSLC Results2024: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ನೀವು ನೋಡುವುದು ಹೇಗೆ

Karnataka SSLC Results2024 ಕರ್ನಾಟಕದಲ್ಲಿ ಎರಡು ತಿಂಗಳಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ( SSLC Results) ಫಲಿತಾಂಶ ಮೇ 9ರ ಗುರುವಾರ ಪ್ರಕಟವಾಗಲಿದೆ.

ಕರ್ನಾಟಕದಲ್ಲಿಎಸ್‌ಎಸ್‌ ಎಲ್‌ಸಿ ಫಲಿತಾಂಶ ಗುರುವಾರ ಪ್ರಕಟವಾಗಲಿದೆ.
ಕರ್ನಾಟಕದಲ್ಲಿಎಸ್‌ಎಸ್‌ ಎಲ್‌ಸಿ ಫಲಿತಾಂಶ ಗುರುವಾರ ಪ್ರಕಟವಾಗಲಿದೆ.

ಬೆಂಗಳೂರು: ಮಾರ್ಚ್‌ ಏಪ್ರಿಲ್‌ ತಿಂಗಳಲ್ಲಿ ನಡೆದಿದ್ದ 2023-24ನೇ ಸಾಲಿನ ಎಸ್‌ಎಸ್‌ ಎಲ್‌ ಸಿ ಪರೀಕ್ಷಾ ಫಲಿತಾಂಶವು ಮೇ 9ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್‌.ಮಂಜುಶ್ರೀ ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆ 10.30 ಮಂಡಳಿ ಆವರಣದಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗಿದ್ದು ಅಲ್ಲಿ ವಿವರವನ್ನು ಪ್ರಕಟಿಸಲಾಗುತ್ತದೆ. ಇದಾಗುತ್ತಲೇ 10.30 ಕ್ಕೆ ವೆಬ್‌ಸೈಟ್‌ ಮೂಲಕವು ಫಲಿತಾಂಶವನ್ನು ವೀಕ್ಷಿಸಬಹುದು.

ಟ್ರೆಂಡಿಂಗ್​ ಸುದ್ದಿ

ಮಾರ್ಚ್‌ ಏಪ್ರಿಲ್‌ 2024ರ ಎಸ್‌ಎಸ್‌ಎಲ್‌ ಸಿ ಪರೀಕ್ಷೆ-1 ಅನ್ನು ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಈಗಾಗಲೇ ಮುಕ್ತಾಯವಾಗಿದೆ. ಎಸ್‌ಎಸ್‌ ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ 9ರ ಗುರುವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗಿದೆ ಎಂದು ಮಂಡಳಿ ಅಧ್ಯಕ್ಷೆ ಎನ್‌.ಮಂಜುಶ್ರೀ ತಿಳಿಸಿದ್ದಾರೆ.

ಇದಾದ ಬಳಿಕ ಆಯಾ ಶಾಲೆಗಳಲ್ಲೂ ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ. ಅಲ್ಲಿ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು.

ಕರ್ನಾಟಕದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಸಲಾಗಿತ್ತು. ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪರೀಕ್ಷೆ ನಡೆಸಲಾಗಿತ್ತು.

ಈ ಬಾರಿಯ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು, 4.28 ಬಾಲಕಿಯರು ಸೇರಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಇರಲಿ ಎಚ್ಚರ

ಫಲಿತಾಂಶ ಪರಿಶೀಲನೆ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ಗಳು ವಂಚಿಸುವ ಸಾಧ್ಯತೆ ಇರುತ್ತದೆ. ತಮ್ಮಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ನೋಡಬಹುದು ಎಂದು ಹೇಳಿ ನಿಮ್ಮ ಮಾಹಿತಿ ಪಡೆದು ವಂಚಿಸುವ ಸಾಧ್ಯತೆಗಳಿರುತ್ತವೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್‌ನಲ್ಲೇ ಫಲಿತಾಂಶಗಳನ್ನು ವೀಕ್ಷಿಸುವುದು ಉತ್ತಮ.

ವೀಕ್ಷಣೆ ಹೀಗೆ

  • ಫಲಿತಾಂಶವನ್ನು ಜಾಲತಾಣದಲ್ಲಿ ಗುರುವಾರ ಬೆಳಿಗ್ಗೆ 10.30 ರ ನಂತರ ವೀಕ್ಷಣೆಗೆ ಅವಕಾಶವಿದೆ.
  • ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್‌https://karresults.nic.in ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಕಾಣುವ ಎಸ್ಎಸ್ಎಲ್‌ಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಲಾಗಿನ್ ಪುಟದಲ್ಲಿ ಕೇಳಲಾದ ಪರೀಕ್ಷಾ ನೋಂದಣಿ ಸಂಖ್ಯೆ ಹಾಗೂ ಹೆಸರು ಕೇಳಲಾದ ಮಾಹಿತಿಯನ್ನು ನಮೂದಿಸಿ
  • ಹೊಸ ಪುಟದಲ್ಲಿ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ
  • ಫಲಿತಾಂಶ ಪುಟ ಡೌನ್ ಲೋಡ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ

ಈ ಸೂಚನೆ ಗಮನಿಸಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಮುಖ್ಯ ಅಂಶಗಳು

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಪ್ರಕಟವಾಗಬಹುದಾದ ಸಂಭಾವ್ಯ ದಿನಾಂಕ - ಮೇ9 ರ ನಡುವೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಪ್ರಕಟವಾಗಬಹುದಾದ ಸಮಯ- ಹಿಂದಿನ ವರ್ಷಗಳ ಸಮಯದ ಪ್ರಕಾರ ಬೆಳಗ್ಗೆ 10.30ಗಂಟೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಪ್ರಕಟವಾಗುವ ಆನ್‌ಲೈನ್ ತಾಣ - https://karresults.nic.in

ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point

ವಿಭಾಗ