Vokkaliga Corporation: ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಸಹಿತ ನಾನಾ ಯೋಜನೆ, ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಿ-bangalore news karnataka vokkaliga development corporation to give self employment financial support kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Vokkaliga Corporation: ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಸಹಿತ ನಾನಾ ಯೋಜನೆ, ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಿ

Vokkaliga Corporation: ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಸಹಿತ ನಾನಾ ಯೋಜನೆ, ಆಗಸ್ಟ್ 30ರೊಳಗೆ ಅರ್ಜಿ ಸಲ್ಲಿಸಿ

Loan Facility ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮವು(Karnataka Vokkaliga Development corporation) ವಿವಿಧ ಯೋಜನೆಗಳ ನೆರವಿಗೆ ಅರ್ಜಿಯನ್ನು ಅರ್ಹರಿಂದ ಆಹ್ವಾನಿಸಿದೆ.

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಯೋಜನೆಗಳ ನೆರವಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಯೋಜನೆಗಳ ನೆರವಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು: ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ / ಗೌಡ), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ / ಉತ್ತಮಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳು: ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ.

ನಿಗಮವು ಅನುಷ್ಠಾನಗೊಳಿಸುವ ಯೋಜನೆಗಳಲ್ಲಿ ಮಾನ್ಯ ಶಾಸಕರು/ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ರವರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಗಳ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಸರ್ಕಾರದ ವಿವೇಚನಾ ಕೋಟಾ/ ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್‍ನಲ್ಲಿಯೇ ಅರ್ಜಿ ಸಲ್ಲಿಸಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.

2023-24 ನೇ ಸಾಲಿನಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ್ದು, ಆಯ್ಕೆ ಸಮಿತಿಗಳಲ್ಲಿ ಕಾರಣಾಂತರಗಳಿಂದ ಆಯ್ಕೆಯಾಗದೇ ಇರುವ ಅರ್ಹ ಅರ್ಜಿದಾರರು 2024-25ನೇ ಸಾಲಿನ ಪ್ರಕಟಣೆಗೆ ಅರ್ಜಿಯನ್ನು ಸಲ್ಲಿಸುವ ಅವಶ್ಯಕವಿರುವುದಿಲ್ಲ. ಕಳೆದ ಸಾಲಿನ ಅರ್ಜಿಯನ್ನೇ ಆಯ್ಕೆ ಸಮಿತಿಗಳ ಮುಂದೆ ಆಯ್ಕೆಗೆ ಮತ್ತೊಮ್ಮೆ ಮಂಡಿಸಲಾಗುವುದು.

ಈ ಎಲ್ಲಾ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್‍ನ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‍ಗಳ ಮೂಲಕ ಆನ್‍ಲೈನ್ ಮತ್ತು ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಶದ https://www.kaushalkar.com ನಲ್ಲಿ ಆಗಸ್ಟ್ 30 ರೊಳಗೆ ಸಲ್ಲಿಸುವುದು.

ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಾಲತಾಣ https://kvcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾಕಚೇರಿಗಳನ್ನು ದೂರವಾಣಿ ಮುಖಾಂತರ ಕಚೇರಿಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿವರಗಳಿಗೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವಿಳಾಸ: ನೆಲಮಹಡಿ, ನಂ. 1/14, ಸಿಲ್ವರ್ ಜ್ಯೂಬಿಲಿ ಬ್ಲಾಕ್, ಸೌತ್‌ ವಿಂಗ್‌ ಯೂನಿಟಿ ಬಿಲ್ಡಿಂಗ್, ಮಿಷನ್‌ ರಸ್ತೆ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು.

ಬಿ. ಬಸವರಾಜು, ವಿಷಯ ನಿರ್ವಾಹಕರು,

ಇಮೇಲ್ : mdkvcdc@gmail.com

ದೂರವಾಣಿ ಸಂಖ್ಯೆ: 91 9449987547.