2nd Puc Results2024: ಇಂದು ಬೆಳಿಗ್ಗೆ11 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ನೋಡುವುದು ಹೇಗೆ, ಎಲ್ಲಿ
ಕನ್ನಡ ಸುದ್ದಿ  /  ಕರ್ನಾಟಕ  /  2nd Puc Results2024: ಇಂದು ಬೆಳಿಗ್ಗೆ11 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ನೋಡುವುದು ಹೇಗೆ, ಎಲ್ಲಿ

2nd Puc Results2024: ಇಂದು ಬೆಳಿಗ್ಗೆ11 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ನೋಡುವುದು ಹೇಗೆ, ಎಲ್ಲಿ

ಕರ್ನಾಟಕದಲ್ಲಿ ಕಳೆದ ತಿಂಗಳು ನಡೆಸಲಾಗಿದ್ದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್‌ 10ರಂದು ಪ್ರಕಟಿಸಲಾಗುತ್ತಿದೆ.

ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟಗೊಳ್ಳಲಿದೆ.
ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟಗೊಳ್ಳಲಿದೆ.

ಬೆಂಗಳೂರು: ಕರ್ನಾಟಕದಲ್ಲಿಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿ ( KSEAB) ನಡೆಸಿದ್ದ ಮಾರ್ಚ್‌ 2024ರಲ್ಲಿ ನಡೆದಿದ್ದ 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏ. 10ರ ಬುಧವಾರ ಪ್ರಕಟಿಸಲಾಗುತ್ತಿದೆ. ಬೆಳಿಗ್ಗೆ11 ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿ ( KSEAB)ಯು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದೆ. ಇದನ್ನು ಮಂಡಳಿ ಅಧ್ಯಕ್ಷೆ ಎನ್‌.ಮಂಜುಶ್ರೀ ಖಚಿತಪಡಿಸಿದ್ದಾರೆ. ಇದಕ್ಕಾಗಿ ಮಂಡಳಿ ಈಗಾಗಲೇ ಸಿದ್ದತೆಗಳನ್ನು ಮಾಡಿಕೊಂಡಿದ್ದು ಆನ್‌ಲೈನ್‌ ಮೂಲಕವೇ ಫಲಿತಾಂಶವನ್ನು ವೀಕ್ಷಿಸಲು ಅವಕಾಶವಿದೆ. https://karresults.nic.in ಮೂಲಕ ನಿಮ್ಮ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶಗಳನ್ನು ಖಚಿತಪಡಿಸಿಕೊಳ್ಳಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿ ತಿಳಿಸಿದೆ.

ಕೋವಿಡ್‌ ಕಾರಣದಿಂದ ಮೂರು ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಸಮರ್ಪಕವಾಗಿ ನಡೆದಿರಲಿಲ್ಲ. ಈ ಬಾರಿ ದ್ವಿತೀಯ ಪಿಯುಸಿಗೆ ಸಂಬಂಧಿಸಿದ ತರಗತಿಗಳು, ಪರೀಕ್ಷೆಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ವ್ಯವಸ್ಥಿತವಾಗಿಯೇ ನಡೆಸಿಕೊಂಡು ಬಂದಿತ್ತು. ನಿಗದಿತ ಅವಧಿಯೊಳಗೆ ತರಗತಿಗಳನ್ನು ಮುಗಿಸಿ ಪರೀಕ್ಷೆಗಳ ದಿನಾಂಕಗಳನೂ ಪ್ರಕಟಿಸಲಾಗಿತ್ತು. ಅದರಂತೆ ಮಾರ್ಚ್‌ 01 ರಿಂದ 23ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು 1,124 ಕೇಂದ್ರಗಳಲ್ಲಿ ನಡೆದಿದ್ದವು. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಷಯದ ಪರೀಕ್ಷೆಗಳಿಗೆ ರಾಜದಾದ್ಯಂತ ವ್ಯವಸ್ಥಿತವಾಗಿ ನಡೆದಿದ್ದವು. ಅಂದಾಜು 7 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಎದುರಿಸಿದ್ದರು. ಈ ಬಾರಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು ಒಟ್ಟು 7 ಲಕ್ಷ ಮಂದಿ ಪರೀಕ್ಷೆ ತೆಗೆದುಕೊಂಡಿದ್ದರು ಎಂದು ಮಂಡಳಿ ತಿಳಿಸಿತ್ತು. ಮಾರ್ಚ್‌ 25ರಿಂದ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಮೌಲ್ಯಮಾಪನವನ್ನೂ ಆರಂಭಿಸಿತ್ತು. ಹತ್ತು ದಿನದಲ್ಲಿಯೇ ಉತ್ತರ ಪತ್ರಿಕೆಗಳ ಮೌಲ್ಯಮಾಪನವೂ ಮುಗಿದು ಅತಿ ಬೇಗವಾಗಿಯೇ ಈ ಬಾರಿ ಫಲಿತಾಂಶವನ್ನು ಮಂಡಳಿ ಪ್ರಕಟಿಸುತ್ತಿದೆ.

ಏ. 10 ರ ಬುಧವಾರವಾರ ಬೆಳಿಗ್ಗೆ 10ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದೆ. ಮಂಡಳಿ ಅಧ್ಯಕ್ಷರಾಗಿರುವ ಐಎಎಸ್‌ ಅಧಿಕಾರಿ ಎನ್‌.ಮಂಜುಶ್ರೀ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಈ ವೇಳೆ ಮೂರು ವಿಷಯಗಳಲ್ಲಿ ಟಾಪರ್‌ಗಳು, ಜಿಲ್ಲಾವಾರು ಫಲಿತಾಂಶದ ವಿವರ ಲಭ್ಯವಾಗಲಿದೆ.

ಇದಾದ ನಂತರ ಬೆಳಿಗ್ಗೆ 11ಕ್ಕೆ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಆಯಾ ಜಿಲ್ಲೆಗಳ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಿಂದ ಕಾಲೇಜುಗಳಿಗೆ ಫಲಿತಾಂಶದ ವಿವರ ಸಿಗಲಿದ್ದು, ಮಧ್ಯಾಹ್ನದ ನಂತರ ಕಾಲೇಜುಗಳಲ್ಲಿಯೂ ಫಲಿತಾಂಶಗಳನ್ನು ಪ್ರಕಟಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಕಾಲೇಜುಗಳಲ್ಲಿಯೂ ವಿದ್ಯಾರ್ಥಿಗಳು, ಪೋಷಕರು ಫಲಿತಾಂಶವನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಫಲಿತಾಂಶ ಹೀಗೆ ನೋಡಿ

https://karresults.nic.in ವೆಬ್‌ಸೈಟ್‌ ಕ್ಲಿಕ್‌ ಮಾಡಿ

ದ್ವಿತೀಯ ಪಿಯುಸಿ ಫಲಿತಾಂಶ ಎನ್ನುವ ಲಿಂಕ್‌ ಕ್ಲಿಕ್‌ ಮಾಡಿ

ನಿಮ್ಮ ರೋಲ್‌ ನಂಬರ್‌ ಅನ್ನು ನಮೂದಿಸಿ

ನಿಮ್ಮ ವಿಷಯ ಯಾವುದು ಎನ್ನುವುದನ್ನು ತಿಳಿಸಿ

ಅಲ್ಲಿ ಕಲಾ, ವಿಜ್ಞಾನ, ವಾಣಿಜ್ಯ ಎನ್ನುವ ವಿಷಯ ಬರಲಿದೆ

ಅದರ ಮೇಲೆ ನಿಮ್ಮ ವಿಷಯ ಕ್ಲಿಕ್‌ ಮಾಡಿ

ನಿಮ್ಮ ಫಲಿತಾಂಶ ಸಿಗಲಿದೆ

Whats_app_banner