ಕನ್ನಡ ಸುದ್ದಿ  /  ಕರ್ನಾಟಕ  /  Mysuru Muda Scam: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ,ಸಿಬಿಐಗೆ ವಹಿಸಲು ಬಿಜೆಪಿ ಒತ್ತಾಯ

Mysuru Muda Scam: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ,ಸಿಬಿಐಗೆ ವಹಿಸಲು ಬಿಜೆಪಿ ಒತ್ತಾಯ

Muda Scam ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಹಗರಣದ ತನಿಖೆಗೆ ಸಿಬಿಐಗೆ( CBI Enquiry) ವಹಿಸುವ ಒತ್ತಾಯವನ್ನು ಬಿಜೆಪಿ ಮಾಡಿದೆ.

ಮುಡಾ ಹಗರಣದ ಸಿಬಿಐ ತನಿಖೆಗೆ ಒತ್ತಾಯವನ್ನು ಬಿಜೆಪಿ ಮಾಡಿದೆ.
ಮುಡಾ ಹಗರಣದ ಸಿಬಿಐ ತನಿಖೆಗೆ ಒತ್ತಾಯವನ್ನು ಬಿಜೆಪಿ ಮಾಡಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಗಿನಡಿಯಲ್ಲಿಯೇ ನಿವೇಶನ ಹಗರಣ ನಡೆದಿದೆ. ನಾನು ಕೂಡ ಈ ಕುರಿತು ದಾಖಲೆಗಳನ್ನು ಕೇಳಿದ್ದರೂ ಏನೂ ಸಿಕ್ಕಿಲ್ಲ. ಈ ವಹಿವಾಟುಗಳಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ. ಹಗರಣದ ತನಿಖೆಯನ್ನು ಸರ್ಕಾರದಡಿಯ ಸಂಸ್ಥೆಗೆ ನೀಡಿದರೆ ಮುಖ್ಯಮಂತ್ರಿಯವರನ್ನು ಆರೋಪಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಿಬಿಐಗೆ ತನಿಖೆಗೆ ವಹಿಸಲಿ ಎಂಬುದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹ.

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮುಡಾ ಭೂ ಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ ನಂತರವೂ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅರ್ಜಿ ಸಲ್ಲಿಸಿದ ನಂತರ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದಾರೆ. ಇದರಿಂದ ಮುಡಾಗೆ ನಷ್ಟವಾಗಿದೆ. 50:50 ಮಾಡುವುದಾದರೆ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಸಿಕ್ಕಿ ಆದೇಶವಾಗಬೇಕು. ಅಕ್ರಮವಾಗಿ ಅವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಉದಾಹರಣೆಗೆ ದಾಸರಹಳ್ಳಿಯಲ್ಲಿ ಭೂಸ್ವಾಧೀನವಾದರೆ ಎಂ.ಜಿ.ರಸ್ತೆಯ ಜಮೀನು ಕೊಟ್ಟಂತಾಗಿದೆ. ಈ ಎಂದು ಒತ್ತಾಯಿಸಿದರು.

ಟ್ರೆಂಡಿಂಗ್​ ಸುದ್ದಿ

ಡಿನೋಟಿಫೈ ಆದ ಭೂಮಿಯ ಬದಲಿಗೆ ಪ್ರತಿಷ್ಠಿತ ಸ್ಥಳದ ಕಡೆ ಜಾಗ ನೀಡಲಾಗಿದೆ. ಡಿನೋಟಿಫೈ ಆದ ಜಮೀನನ್ನು ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಭೂ ಮಾಲೀಕರು ಅದನ್ನು ನೋಡಿಕೊಂಡು ಏಕೆ ಸುಮ್ಮನಿದ್ದರು ಎಂದು ಅನುಮಾನವಾಗುತ್ತದೆ. ಮೈಸೂರು ಜಿಲ್ಲಾಧಿಕಾರಿ ಹಲವಾರು ಬಾರಿ ಮುಡಾಗೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದಾರೆ. ಆದರೆ ಇದಕ್ಕೆ ಮುಡಾದಿಂದ ಉತ್ತರ ದೊರೆತಿಲ್ಲ. ಅಲ್ಲೇ ಎಲ್ಲರೂ ಸೇರಿಕೊಂಡು ಗ್ಯಾಂಗ್‌ ಮಾಡಿಕೊಂಡಿದ್ದಾರೆ. ಇದರ ಹಿಂದೆ ದೊಡ್ಡ ಜಾಲವಿದೆ ಎಂದರು.

ಇದು ಬಿಜೆಪಿ ಕಾಲದಲ್ಲೇ ನಡೆದಿದ್ದು ಎಂದು ಸಿಎಂ ಹೇಳಿದ್ದಾರೆ. ಅದು ಯಾರೇ ಆಗಿದ್ದರೂ ಅವರನ್ನು ಮೊದಲು ಬಂಧನ ಮಾಡಿಸಬೇಕು. ಇದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಇದರಲ್ಲಿ ಬಿಜೆಪಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ನಿವೇಶನ ಮಂಜೂರನ್ನು ಮೊದಲು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. 50:50 ಅನುಪಾತದಲ್ಲಿ ನಿವೇಶನಗಳನ್ನು ಹಂಚಿ 3-4 ಸಾವಿರ ಕೋಟಿ ರೂ. ಲೂಟಿ ಮಾಡಲಾಗಿದೆ. 86 ಸಾವಿರ ಅರ್ಜಿಗಳನ್ನು ಸಲ್ಲಿಸಿದ ಬಡವರಿಗೆ ನಿವೇಶನ ನೀಡಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನಿವೇಶನ ನೀಡಿದ್ದಾರೆ. 15 ನಿವೇಶನ ನೀಡಬೇಕಾದಲ್ಲಿ 60 ನಿವೇಶನ ನೀಡಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ನಿವೇಶನ ದೋಚಿದ್ದಾರೆ. ಕಾಂಗ್ರೆಸ್‌ನದ್ದು ಲೂಟಿ ಮಾಡಲ್‌ ಎಂಬುದು ಅಶೋಕ ಆರೋಪ.