ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಹೊಸದಾಗಿ ಯಾರನ್ನೂ ಬಂಧಿಸಿಲ್ಲ; ಎನ್‌ಐಎ ಸ್ಪಷ್ಟನೆ -Rameshwaram Cafe Blast Case
ಕನ್ನಡ ಸುದ್ದಿ  /  ಕರ್ನಾಟಕ  /  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಹೊಸದಾಗಿ ಯಾರನ್ನೂ ಬಂಧಿಸಿಲ್ಲ; ಎನ್‌ಐಎ ಸ್ಪಷ್ಟನೆ -Rameshwaram Cafe Blast Case

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಹೊಸದಾಗಿ ಯಾರನ್ನೂ ಬಂಧಿಸಿಲ್ಲ; ಎನ್‌ಐಎ ಸ್ಪಷ್ಟನೆ -Rameshwaram Cafe Blast Case

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇತ್ತೀಚೆಗೆ ಯಾರನ್ನೂ ಬಂಧಿಸಿಲ್ಲ ಎಂದು ರಾಷ್ಟ್ರೀಯ ತನಿಖಾ ದಳ ಎನ್‌ಐಎ ಸ್ಪಷ್ಟಪಡಿಸಿದೆ. ಬಿಜೆಪಿ ಮುಖಂಡನನ್ನು ಬಂಧಿಸಿಲ್ಲ ಎಂದು ಹೇಳಿದೆ.

ಬೆಂಗಳೂರಿನ ಐಟಿಪಿಎಲ್‌ನಲ್ಲಿರುವ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಬೆಂಗಳೂರಿನ ಐಟಿಪಿಎಲ್‌ನಲ್ಲಿರುವ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. (HT)

ಬೆಂಗಳೂರು: ವೈಟ್‌ಫೀಲ್ಡ್‌ನ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆ ಸ್ಫೋಟಕ್ಕೆ (Rameshwaram Cafe Blast Case) ಸಂಬಂಧಿಸಿದಂತೆ ಹೊಸದಾಗಿ ಯಾರನ್ನೂ ಬಂಧಿಸಿಲ್ಲ. ಕೆಲವರನ್ನು ಪ್ರಶ್ನಿಸಲಾಗುತ್ತಿದೆ. ಆದರೆ ಇವರು ಆರೋಪಿಗಳೊಂದಿಗೆ ನೇರ ಸಂಪರ್ಕ ಹೊಂದಿಲ್ಲ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ-ಎನ್‌ಐಎ ಸ್ಪಷ್ಟಪಡಿಸಿದೆ."ಈ ಪ್ರಕರಣದಲ್ಲಿ ಪುರಾವೆಗಳು ಮತ್ತು ಮಾಹಿತಿಯನ್ನು ಸಂಗ್ರಹಿಸಲು ಎನ್ಐಎ ತಲೆಮರೆಸಿಕೊಂಡಿರುವ ಮತ್ತು ಬಂಧಿತ ಆರೋಪಿಗಳ ಕಾಲೇಜು ಮತ್ತು ಶಾಲಾ ದಿನಗಳ ಸ್ನೇಹಿತರು ಸೇರಿದಂತೆ ಎಲ್ಲಾ ಪರಿಚಿತರನ್ನು ಕರೆಸಿ ಪರಿಶೀಲಿಸುತ್ತಿದೆ. ಈ ಪ್ರಕರಣವು ಭಯೋತ್ಪಾದಕ ಘಟನೆಯಾಗಿರುವುದರಿಂದ, ಸಾಕ್ಷಿಗಳ ಗುರುತನ್ನು ಕುರಿತ ಯಾವುದೇ ಮಾಹಿತಿಯು ತನಿಖೆಗೆ ಅಡ್ಡಿಯಾಗುವುದರ ಜೊತೆಗೆ ಸಮನ್ಸ್ ನೀಡುವ ವ್ಯಕ್ತಿಗಳನ್ನು ಅಪಾಯಕ್ಕೆ ದೂಡಬಹುದು ಎಂದು ಕೆಲವು ಸ್ಥಳೀಯ ಮಾಧ್ಯಮಗಳು ಈ ಹಿಂದೆ ವರದಿ ಮಾಡಿದ್ದವು. ಆದರೆ ಈ ಪ್ರಕರಣದಲ್ಲಿ ಪ್ರಶ್ನಿಸಲಾದ ಜನರ ಯಾವುದೇ ವಿವರಗಳನ್ನು ತನಿಖಾ ಸಂಸ್ಥೆ ಬಹಿರಂಗಪಡಿಸಿಲ್ಲ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಿಜೆಪಿಯ ಕಾರ್ಯಕರ್ತನನ್ನು ಇಂದು (ಏಪ್ರಿಲ್ 5, ಶುಕ್ರವಾರ) ಬಂಧಿಸಲಾಗಿದೆ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಎಂಬುವರನ್ನು ತೀರ್ಥಹಳ್ಳಿಯಲ್ಲಿ ಎನ್‌ಐಎ ವಶಕ್ಕೆ ಪಡೆದಿದೆ ಎಂದು ಏಷ್ಯಾನೆಟ್ ನ್ಯೂಸ್ ಸಂಸ್ಥೆ ವರದಿ ಮಾಡಿದೆ.

ಕಳೆದ ವಾರ ಎನ್‌ಐಎ ವಿಚಾರಣೆಗೊಳಪಡಿಸಿದ್ದ ಮೊಬೈಲ್ ಅಂಗಡಿಯ ಇಬ್ಬರು ಕೆಲಸಗಾರು ಬಿಜೆಪಿ ಕಾರ್ಯಕರ್ತನ ಹೆಸರನ್ನು ಹೇಳಲಾಗಿದೆ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಎಂಬುವರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬಂಧಿಸಲಾಗಿದೆ. ಬಂಧಿತ ವ್ಯಕ್ತಿ ಸಾಯಿ ಪ್ರಸಾದ್ ತೀರ್ಥಹಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಶಂಕಿತ ವ್ಯಕ್ತಿಗಳೆಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಎನ್‌ಐಎ ಈ ಹಿಂದೆ ತೀರ್ಥಹಳ್ಳಿಯಲ್ಲಿ ಇಬ್ಬರು ಯುವಕರು ಮತ್ತು ಮೊಬೈಲ್ ಅಂಗಡಿ ಮಾಲೀಕರ ನಿವಾಸಗಳ ಮೇಲೆ ದಾಳಿ ನಡೆಸಿತ್ತು. ವರದಿಗಳ ಪ್ರಕಾರ, ಸಾಯಿ ಪ್ರಸಾದ್ ಶಂಕಿತ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ವರದಿಯಾಗಿದೆ.

ಪ್ರಮುಖ ಆರೋಪಿಗಾಗಿ ತನಿಖೆಯನ್ನು ತೀವ್ರಗೊಳಿಸಿರುವ ಎನ್‌ಐಎ

ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಐಇಡಿ ಸ್ಫೋಟದ ಸಹ ಸಂಚುಕೋರ ಮುಜಮ್ಮಿಲ್ ಶರೀಫ್‌ನನ್ನು ಎನ್ಐಎ ಬಂಧಿಸಿದೆ. ಸ್ಫೋಟ ಸಂಭವಿಸಿದ ನಂತರ ಕಳೆದ ತಿಂಗಳಲ್ಲಿ ಎನ್ಐಎ ನಡೆಸಿದ ಮೊದಲ ಬಂಧನ ಇದಾಗಿದೆ. ಸ್ಫೋಟ ನಡೆಸಿದ ಪ್ರಮುಖ ಆರೋಪಿಯನ್ನು ಮುಸ್ಸಾವಿರ್ ಶಾಜಿಬ್ ಹುಸೇನ್ ಎಂದು ತನಿಖಾ ಸಂಸ್ಥೆ ಗುರುತಿಸಿದ್ದು, ರಾಮೇಶ್ವರಂ ಕೆಫೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಸ್ಫೋಟದ ಇನ್ನೋರ್ವ ಆರೋಪಿ ಅಬ್ದುಲ್ ಮತೀನ್ ಅಹ್ಮದ್ ತಾಹಾ, ಸ್ಫೋಟ ನಡೆಸಲು ಮುಸ್ಸಾವಿರ್‌ಗೆ ಸಹಾಯ ಮಾಡಿದ್ದನೆಂದು ಹೇಳಲಾಗಿದ್ದು, ಆತ ಎನ್ಐಎ ರೇಡಾರ್‌ನಲ್ಲಿದ್ದಾನೆ.

ಪ್ರಕರಣದ ಆರೋಪಿಗಳ ಬಗ್ಗೆ ಯಾವುದೇ ವಿವರಗಳನ್ನು ನೀಡುವವರಿಗೆ ಎನ್ಐಎ ಈಗಾಗಲೇ 10 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದೆ ಮತ್ತು ಶಂಕಿತರ ರೇಖಾಚಿತ್ರಗಳನ್ನು ಈ ಹಿಂದೆ ಬಿಡುಗಡೆ ಮಾಡಿದೆ. ಮಾರ್ಚ್ 1 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ ಪ್ರದೇಶದ ರಾಮೇಶ್ವರಂ ಕೆಫೆಯಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದರು. ಪ್ರಕರಣದ ಪ್ರಮುಖ ಆರೋಪಿಗಾಗಿ ಎನ್‌ಐಎ ಕೆಲವು ದಿನಗಳ ಹಿಂದೆಯೇ 10 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದೆ. ಘಟನೆ ನಡೆದ ಕೆಲವು ದಿನಗಳ ಬಳಿಕ ರಾಮೇಶ್ವರಂ ಕೆಫೆಯನ್ನು ಮತ್ತೆ ಓಪನ್ ಮಾಡಲಾಗಿದೆ.

Whats_app_banner