Airports: ರಾಯಚೂರು, ವಿಜಯಪುರ, ಹಾಸನ, ಕಾರವಾರ, ಚಿಕ್ಕಮಗಳೂರು ವಿಮಾನ ನಿಲ್ದಾಣ ನಿರ್ಮಾಣ ಸ್ಥಿತಿಗತಿ ಹೇಗಿದೆ
ಕನ್ನಡ ಸುದ್ದಿ  /  ಕರ್ನಾಟಕ  /  Airports: ರಾಯಚೂರು, ವಿಜಯಪುರ, ಹಾಸನ, ಕಾರವಾರ, ಚಿಕ್ಕಮಗಳೂರು ವಿಮಾನ ನಿಲ್ದಾಣ ನಿರ್ಮಾಣ ಸ್ಥಿತಿಗತಿ ಹೇಗಿದೆ

Airports: ರಾಯಚೂರು, ವಿಜಯಪುರ, ಹಾಸನ, ಕಾರವಾರ, ಚಿಕ್ಕಮಗಳೂರು ವಿಮಾನ ನಿಲ್ದಾಣ ನಿರ್ಮಾಣ ಸ್ಥಿತಿಗತಿ ಹೇಗಿದೆ

ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಬಾಕಿ ಉಳಿದಿರುವ ವಿಮಾನ ನಿಲ್ದಾಣಗಳ ಯೋಜನೆ ತ್ವರಿತಗೊಳಿಸುವಂತೆ ಸಚಿವ ಎಂ.ಬಿ.ಪಾಟೀಲ್‌ ಸೂಚಿಸಿದ್ದಾರೆ.
ಕರ್ನಾಟಕದಲ್ಲಿ ಬಾಕಿ ಉಳಿದಿರುವ ವಿಮಾನ ನಿಲ್ದಾಣಗಳ ಯೋಜನೆ ತ್ವರಿತಗೊಳಿಸುವಂತೆ ಸಚಿವ ಎಂ.ಬಿ.ಪಾಟೀಲ್‌ ಸೂಚಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ,ಮೈಸೂರು, ಕಲಬುರಗಿ, ಶಿವಮೊಗ್ಗದ ನಂತರ ಪ್ರಮುಖ ನಗರಗಳಿಗೂ ವಿಮಾನ ಸೇವೆ ಕಲ್ಪಿಸುವ ಪ್ರಯತ್ನಗಳು ಚುರುಕಿನಿಂದ ಸಾಗಿವೆ. ಅದರಲ್ಲೂ ವಿಜಯಪುರ, ಹಾಸನ, ರಾಯಚೂರು, ಚಿಕ್ಕಮಗಳೂರು ವಿಮಾನ ನಿಲ್ದಾಣಗಳ ಜತೆಗೆ ಸ್ಥಗಿತಗೊಂಡಿರುವ ಬೀದರ್‌ ನಿಲ್ದಾನಕ್ಕೆ ಚಾಲನೆ ನೀಡುವ ಕುರಿತು ಚರ್ಚೆಗಳು ನಡೆದಿವೆ. ಕೊಡಗು, ಧರ್ಮಸ್ಥಳ ಸಹಿತ ಕೆಲವು ಭಾಗಗಳಿಗೆ ಏರ್‌ ಸ್ಟ್ರಿಪ್‌ ರಚನೆಗೆ ಜಾಗ ಗುರುತಿಸುವ ಪ್ರಕ್ರಿಯೆಗಳೂ ಚುರುಕುಗೊಂಡಿವೆ. ರಾಜ್ಯದಲ್ಲಿ ನಡೆಯುತ್ತಿರುವ ವಿಜಯಪುರ, ಹಾಸನ ಸೇರಿ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌ ಬಿ ಪಾಟೀಲ ನಡೆಸಿ ಅಧಿಕಾಗಳಿಗೆ ಸೂಚನೆ ನೀಡಿದ್ದಾರೆ.

ಹಲವು ಯೋಜನೆಗಳಿಗೆ ತಾಂತ್ರಿಕ ಅಡಚಣೆಗಳು ಎದುರಾಗಿವೆ. ಇನ್ನು ಕೆಲ ಯೋಜನೆಗಳಿಗೆ ಅಗತ್ಯ ಪ್ರಮಾಣದ ಭೂಮಿ ಸಿಕ್ಕಿಲ್ಲ. ಇವೆಲ್ಲವನ್ನೂ ತ್ವರಿತವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದರು. ಸಚಿವರು, ಸಂಸದ, ಶಾಸಕರ ಜತೆಯೂ ಪಾಟೀಲ್‌ ಸಭೆ ನಡೆಸಿದರು.

  • 219 ಕೋಟಿ ರೂ. ವೆಚ್ಚದಲ್ಲಿ, 322 ಎಕರೆ‌ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಯಚೂರು ಗ್ರೀನ್ ಫೀಲ್ಡ್ ವಿಮಾನ‌ ನಿಲ್ದಾಣದ ಕಾಮಗಾರಿ ಆರಂಭಕ್ಕೆ ತಾಂತ್ರಿಕಅಡಚಣೆಗಳಿದ್ದು ತಕ್ಷಣ ಅವುಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಅಗತ್ಯ ಬಿದ್ದರೆ ದೆಹಲಿಗೂ ಹೋಗಿ ಬರಬೇಕು. ರಾಯಚೂರು ವಿಮಾನ‌ ನಿಲ್ದಾಣ ಯೋಜನೆಗೆ ಈಗಾಗಲೇ ಡಿಪಿಆರ್ ಸಿದ್ಧವಾಗಿದೆ. ಯೋಜನೆಗೆ ಬೇಕಾಗಿರುವ ಪರಿಸರ ಇಲಾಖೆಯ ಅನುಮತಿಯನ್ನು ಕೂಡ ಬೇಗನೆ ಪಡೆಯಬೇಕು
  • ಹಾಸನ ವಿಮಾನ ನಿಲ್ದಾಣದ ಕಾಮಗಾರಿ ಚುರುಕಾಗಿ ಮುಗಿಸಬೇಕು. ಭೂಸ್ವಾಧೀನದ ಸಮಸ್ಯೆ ಇದ್ದು ತಕ್ಷಣ ಬಗೆಹರಿಸಬೇಕು.
  • ಉಡಾನ್ ಯೋಜನೆ ಸ್ಥಗಿತವಾಗಿರುವ ಕಾರಣ ಬೀದರ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಿಲ್ಲಿಸಲಾಗಿದೆ. ಈ ಸಂಬಂಧ ವಿಮಾನಯಾನ ಸಂಸ್ಥೆಗಳ ಜತೆ ಮಾತುಕತೆ ನಡೆಸಿ, ಪರ್ಯಾಯ ಕ್ರಮಗಳ ಬಗ್ಗೆ ತೀರ್ಮಾನಿಸಬೇಕು. ಪುನಃ ಉಡಾನ್ ಯೋಜನೆ ಚಾಲನೆಗೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುವುದು ಸೂಕ್ತ.

ಇದನ್ನೂ ಓದಿರಿ: Bhairathi Ranagal: ಶಿವರಾಜ್‌ ಕುಮಾರ್‌ ಅಭಿಮಾನಿಗಳಿಗೆ ಸಿಹಿಸುದ್ದಿ; ಭೈರತಿ ರಣಗಲ್‌ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟ

  • ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣವಾಗಿದ್ದು ಅಗತ್ಯ ಇರುವ ಅಗ್ನಿಶಾಮಕ ವಾಹನಗಳನ್ನು ಖರೀದಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕು. ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನಕ್ಕೂ ಸೂಕ್ತ ಕ್ರಮ ತೆಗೆದುಕೊಳ್ಳುವ ಕೆಲಸವಾಗಲಿ.
  • ಪ್ರವಾಸೋದ್ಯಮವನ್ನು ಪರಿಗಣಿಸಿ ಚಿಕ್ಕಮಗಳೂರು, ಕೊಡಗು, ಧರ್ಮಸ್ಥಳ ಮತ್ತು ಹಂಪೆಯಲ್ಲಿ ಏರ್-ಸ್ಟ್ರಿಪ್ ನಿರ್ಮಿಸುವುದಾಗಿ ಘೋಷಿಸಲಾಗಿದೆ. ಈ ಪೈಕಿ ಕೊಡಗು ಮತ್ತು ಧರ್ಮಸ್ಥಳದಲ್ಲಿ 140 ಎಕರೆ ಭೂಮಿ ಅಗತ್ಯವಿದೆ. ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಜತೆ ವ್ಯವಹರಿಸಿ, ಈ ಪ್ರಕ್ರಿಯೆ ಮುಗಿಸಬೇಕು.
  • ಚಿಕ್ಕಮಗಳೂರಿನಲ್ಲಿ ಈ ಯೋಜನೆಗೆ ಈಗಾಗಲೇ 12೦ ಎಕರೆ ಜಾಗ ಗುರ್ತಿಸಲಾಗಿದೆ. ಆದರೆ ಇದಕ್ಕೆ ಇನ್ನೂ 17.5 ಎಕರೆ ಅಗತ್ಯವಿದ್ದು, ಇದನ್ನು ಗುರುತಿಸಲು ನಿರ್ದೇಶಿಸಲಾಗಿದೆ. ಜತೆಗೆ ಈ ಸಂಬಂಧ ಡಿಪಿಆರ್ ಸಿದ್ಧ ಪಡಿಸಲು ಪವನ್ ಹನ್ಸ್ ಕಂಪನಿಗೆ ಹೇಳಲಾಗಿದೆ.

ಇದನ್ನೂ ಓದಿರಿ: Mann ki Baat; ವಿಕಸಿತ ಭಾರತಕ್ಕಾಗಿ ಬೆಂಗಳೂರಲ್ಲಿ ಚಿಗುರಿದೆ ಹೊಸ ಕನಸು, ನವೋದ್ಯಮಿಗಳ ಜೊತೆಗೆ ಪ್ರಧಾನಿ ಮೋದಿ ಮನ್‌ ಕೀ ಬಾತ್‌

  • ಕಾರವಾರದಲ್ಲಿ ಸಿವಿಲ್ ಎನ್ಕ್ಲೇವ್ ಅಭಿವೃದ್ಧಿಗೆ ಇನ್ನೂ 97 ಎಕರೆ ಭೂಮಿ ಬೇಕಾಗಿದೆ. ಇದಕ್ಕಾಗಿ ಈಗಾಗಲೇ 27.34 ಕೋಟಿ ರೂಪಾಯಿಗೂ ಹೆಚ್ಚು ಹಣ ಕೊಡಲಾಗಿದೆ.

Whats_app_banner