ಕನ್ನಡ ಸುದ್ದಿ  /  Karnataka  /  Bangalore News Rameshwaram Cafe Reopened From Today For Customers After 8 Days Of Blast Rmy

Rameshwaram cafe: ಬೆಂಗಳೂರಿನ ರಾಮೇಶ್ವರಂ ಕೆಫೆ ಪುನಾರಂಭ; ಇಂದು ಬೆಳಗ್ಗೆಯಿಂದಲೇ ಗ್ರಾಹಕರಿಗೆ ಸೇವೆ

Rameshwaram Cafe: ಬಿಗಿ ಭದ್ರತೆಯೊಂದಿಗೆ ಬೆಂಗಳೂರಿನ ರಾಮೇಶ್ವರಂ ಕೆಫೆ ಇವತ್ತು ಪುನಾರಂಭವಾಗಿದೆ. ಬೆಳಗ್ಗೆಯಿಂದಲೇ ಗ್ರಾಹಕರ ಉದ್ಧದ ಕ್ಯೂ ಕಂಡುಬಂದಿತು.

ಬೆಂಗಳೂರಿನ ಜನಪ್ರಿಯ ರೆಸ್ಟೋರೆಂಟ್ ರಾಮೇಶ್ವರಂ ಕೆೆಫೆ ಬಿಗಿ ಭದ್ರತೆಯೊಂದಿಗೆ ಇಂದಿನಿಂದ ಪುನಾರಂಭವಾಗಿದೆ. (HT)
ಬೆಂಗಳೂರಿನ ಜನಪ್ರಿಯ ರೆಸ್ಟೋರೆಂಟ್ ರಾಮೇಶ್ವರಂ ಕೆೆಫೆ ಬಿಗಿ ಭದ್ರತೆಯೊಂದಿಗೆ ಇಂದಿನಿಂದ ಪುನಾರಂಭವಾಗಿದೆ. (HT)

ಬೆೆಂಗಳೂರು: ಮಾರ್ಚ್ 1 ರಂದು ಆಗಂತುಕನ ಸ್ಫೋಟಕದ ಕೃತ್ಯದಿಂದ ಬಂದ್ ಆಗಿದ್ದ ಬೆಂಗಳೂರಿನ ಜನಪ್ರಿಯ ರೆಸ್ಟೋರೆಂಟ್ ರಾಮೇಶ್ವರಂ ಕೆಫೆ ಇಂದು (ಮಾರ್ಚ್ 9, ಶನಿವಾರ) ಪುನಾರಂಭವಾಗಿದೆ. ರಾಮೇಶ್ವರಂ ಕೆಫೆಯ ಸಹ-ಸಂಸ್ಥಾಪಕ ರಾಘವೇಂದ್ರ ರಾವ್ ಮತ್ತು ಎಲ್ಲಾ ಸಿಬ್ಬಂದಿ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಕೆಫೆಗೆ ಚಾಲನೆ ನೀಡಲಾಯಿತು. ಈ ವೇಳೆಗಾಗಲೇ ಸಾಕಷ್ಟು ಜನರು ಕೆಫೆಯ ಹೊರಗಡೆ ಉದ್ದನೆಯ ಸರತಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡುಬಂದಿತು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಶಿವರಾತ್ರಿ ಪ್ರಯುಕ್ತ ನಿನ್ನೆಯ (ಮಾರ್ಚ್ 8, ಶುಕ್ರವಾರ) ಹೋಮ ಪೂಜೆಗಳನ್ನು ನೆರವೇರಿಸಲಾಗಿತ್ತು.

ವೈಟ್‌ಫೀಲ್ಡ್‌ನ ಐಟಿಪಿಎಲ್ ಮುಖ್ಯ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸ್ಫೋಟ ಸಂಭವಿಸಿತ್ತು. ಅಂದಿನಿಂದ ಕೆಫೆಯನ್ನು ಮುಚ್ಚಲಾಗಿತ್ತು. ಇವತ್ತು ಕೆಫೆಯನ್ನು ತೆರೆಯುವ ಮುನ್ನ ತಳಿರು ತೋರಣಗಳಿಂದ ಹಲಂಕರಿಸಲಾಗಿತ್ತು. ಗ್ರಾಹಕರಿಗೆ ಸುರಕ್ಷತೆ ವಾತಾವರಣವನ್ನು ಕಲ್ಪಿಸಲು ಭದ್ರತೆಯನ್ನು ಕಲ್ಪಿಸಲಾಗಿತ್ತು.

ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನಾವು ಎಲ್ಲಾ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ನಾವು ನಮ್ಮ ಭದ್ರತಾ ತಂಡವನ್ನು ಮತ್ತಷ್ಟು ಬಲಪಡಿಸುತ್ತಿದ್ದೇವೆ. ನಮ್ಮ ಭದ್ರತಾ ಸಿಬ್ಬಂದಿಗೆ ತರಬೇತಿ ನೀಡಲು ಮಾಜಿ ಸೈನಿಕರ ಸಮಿಯನ್ನು ರಚಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ರಾಘವೇಂದ್ರ ರಾವ್ ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ನಾವು ನಮ್ಮ ಎಲ್ಲಾ ಸಿಸಿಟಿವಿ ದೃಶ್ಯಗಳು ಮತ್ತು ಮಾಹಿತಿಯನ್ನು ಅಧಿಕಾರಿಗಳಿಗೆ ನೀಡಿದ್ದೇವೆ. ಅಧಿಕಾರಿಗಳ ತನಿಖೆಗೆ ಸಹಕರಿಸುತ್ತಿದ್ದೇವೆ. ಇಷ್ಟು ಬೇಗ ಕೆಫೆಯನ್ನು ಮತ್ತೆ ತೆರೆಯಲು ನಮಗೆ ಸಹಾಯ ಮಾಡಿದ್ದಕ್ಕಾಗಿ ನಾವು ಸರ್ಕಾರಕ್ಕೆ ತುಂಬಾ ಕೃತಜ್ಞರಾಗಿರುತ್ತೇವೆ ಎಂದಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಶಂಕಿತ ಆರೋಪಿ ಉಗ್ರ ಎನ್‌ಐಎ ವಶಕ್ಕೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಶಂಕಿತ ಆರೋಪಿ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್‌ನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಶಕ್ಕೆ ಪಡೆದಿದೆ. 26 ವರ್ಷದ ಈತನ ವಿಚಾರಣೆಯನ್ನು ಎನ್‌ಐಎ ತೀವ್ರಗೊಳಿಸಿದೆ. ಬಳ್ಳಾರಿ ನಗರದ ಕೌಲ್ ಬಜಾರ್‌ ನಿವಾಸಿ ಮಿನಾಜ್‌, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತ ಎಂದು ತಿಳಿದು ಬಂದಿದ್ದು, ಇಸ್ಲಾಮಿಕ್ ಸ್ಟೇಟ್ (ಐಎಸ್‌) ಉಗ್ರರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ. ಈತ ಬೆಂಗಳೂರು ಸೇರಿದಂತೆ ದೇಶದಲ್ಲಿ ಭಯೋತ್ಪಾದನಾ ಕೃತ್ಯ ನಡೆಸಲು ಸಂಚು ರೂಪಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಹಿಂದೆ 2023ರ ಡಿಸೆಂಬರ್ 18ರಂದು ಮಿನಾಜ್‌ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಸಧ್ಯ ಈತನನ್ನು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ ಎಂದು ಎನ್‌ಐಎ ಮೂಲಗಳು ಹೇಳಿವೆ.

(This copy first appeared in Hindustan Times Kannada website. To read more like this please logon to kannada.hindustantimes.com )