ಕನ್ನಡ ಸುದ್ದಿ  /  Karnataka  /  Bangalore News Report Any Suspicious Transactions Bank Nodal Officers Are Responsible If Not Do Mrt

ಅನುಮಾನಾಸ್ಪದ ವಹಿವಾಟು ಕಂಡುಬಂದರೆ ಮಾಹಿತಿ ಕೊಡಿ; ತಪ್ಪಿದಲ್ಲಿ ಬ್ಯಾಂಕ್‌ ನೋಡಲ್ ಅಧಿಕಾರಿಗಳೇ ಹೊಣೆ, ಇಸಿ ಎಚ್ಚರಿಕೆ

ಚುನಾವಣಾ ನೀತಿ ಸಂಹಿತೆ ವೇಳೆ ಒಂದೇ ಖಾತೆಯಿಂದ ಹಲವು ಖಾತೆಗಳಿಗೆ ಹಣ ವರ್ಗಾವಣೆಯಾದರೆ ಅದರ ಮಾಹಿತಿಯನ್ನು ಇಲಾಖೆಗೆ ಕಡ್ಡಾಯವಾಗಿ ನೀಡಬೇಕು ಎಂದು ಚುನಾವಣಾ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಅನುಮಾನಸ್ಪಾದ ಬ್ಯಾಂಕ್ ವಹಿವಾಟುಗಳು ಕಂಡುಬಂದಲ್ಲಿ ತಮಗೆ ಮಾಹಿತಿ ನೀಡಬೇಕೆಂದು ಚುನಾವಣಾ ಅಧಿಕಾರಿಗಳು ಬೆಂಗಳೂರಿನ ಎಲ್ಲಾ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದಾರೆ.
ಅನುಮಾನಸ್ಪಾದ ಬ್ಯಾಂಕ್ ವಹಿವಾಟುಗಳು ಕಂಡುಬಂದಲ್ಲಿ ತಮಗೆ ಮಾಹಿತಿ ನೀಡಬೇಕೆಂದು ಚುನಾವಣಾ ಅಧಿಕಾರಿಗಳು ಬೆಂಗಳೂರಿನ ಎಲ್ಲಾ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Elections 2024) ಪ್ರಚಾರದ ಸಂದರ್ಭದಲ್ಲಿ ಅನುಮಾನಾಸ್ಪದ ವಹಿವಾಟುಗಳು (Bank Transactions) ನಡೆಯುತ್ತಿರುವುದು ಕಂಡುಬಂದಲ್ಲಿ ಕೂಡಲೇ ಚುನಾವಣಾ ವಿಭಾಗದ ಗಮನಕ್ಕೆ ತರಬೇಕೆಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತೆ ಸೆಲ್ವಮಣಿ ಅವರು ಬ್ಯಾಂಕ್ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಅಂಗವಾಗಿ ಚುನಾವಣಾ ವಿಭಾಗವು ಬ್ಯಾಂಕ್ ನೋಡಲ್ ಅಧಿಕಾರಿಗಳ ಸಭೆ ನಡೆಸಿದೆ. ಒಂದೇ ಖಾತೆಯಿಂದ ಹಲವು ಖಾತೆಗಳಿಗೆ ಹಣ ವರ್ಗಾವಣೆಯಾದರೆ ಅದರ ಮಾಹಿತಿಯನ್ನು ಇಲಾಖೆಗೆ ಕಡ್ಡಾಯವಾಗಿ ನೀಡಬೇಕು. ಒಂದು ವೇಳೆ ಮಾಹಿತಿಯನ್ನು ಕೊಡದಿದ್ದರೆ ಮುಂದಿನ ದಿನಗಳಲ್ಲಿ ಬ್ಯಾಂಕ್ ನ ನೋಡಲ್ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಮತ್ತು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಚುನಾವಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಹಲವಾರು ವ್ಯಕ್ತಿಗಳ ಖಾತೆಗಳಿಗೆ ಒಂದೇ ಬ್ಯಾಂಕ್ ಖಾತೆಯಿಂದ ಆರ್‌ಟಿಜಿಎಸ್ ಅಥವಾ ನೆಫ್ಟ್ ಮೂಲಕ ಹೆಚ್ಚು ಹಣ ವರ್ಗಾವಣೆ ಮಾಡುವುದು, ನಗದು ಠೇವಣಿ ಅಥವಾ ರೂಪಾಯಿ 1 ಲಕ್ಷಕ್ಕಿಂತ ಹೆಚ್ಚಿನ ನಗದು ಹಿಂಪಡೆಯುವುದು ಕಂಡು ಬಂದಲ್ಲಿ ಚುನಾವಣಾ ವಿಭಾಗದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ. ಮತದಾರರಿಗೆ ಆಮಿಷವೊಡ್ಡಲು ಹಣ ನೀಡಲು ಬಳಸಬಹುದಾದ ಯಾವುದೇ ಅನುಮಾನಾಸ್ಪದ ನಗದು ವಹಿವಾಟುಗಳನ್ನು ಕುರಿತು ಅನುಮಾನ ಅಥವಾ ಮಾಹಿತಿ ಇದ್ದಲ್ಲಿ ಚುನಾವಣಾ ವಿಭಾಗಕ್ಕೆ ಕೂಡಲೇ ಹಂಚಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ನಗದು ಠೇವಣಿ ಅಥವಾ ಹಿಂಪಡೆಯುವಿಕೆ ಮೊತ್ತ 10 ಲಕ್ಷ ರೂಪಾಯಿಗಿಂತ ಹೆಚ್ಚು ಇದ್ದರೆ, ಅಂತಹ ಮಾಹಿತಿಯನ್ನು ಆದಾಯ ತೆರಿಗೆ ಕಾನೂನುಗಳ ಅಡಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಆದಾಯ ತೆರಿಗೆ ಇಲಾಖೆಯ ನೋಡಲ್ ಅಧಿಕಾರಿಗೆ ಚುನಾವಣಾ ವಿಭಾಗ ಮಾಹಿತಿ ರವಾನಿಸುತ್ತದೆ.

ಯಾವುದೇ ಬ್ಯಾಂಕ್‌ಗಳಿಂದ ನಗದು ಅಥವಾ ಎಟಿಎಂಗಳಿಂದ ತೆಗೆಯುವ ನಗದನ್ನು ಭದ್ರತಾ ಸಿಬ್ಬಂದಿಯೊಂದಿಗೆ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು‌ ಚುನಾವಣಾ ಆಯೋಗದ ನಿಯಮಾನುಸಾರ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ರವಾನೆ ಮಾಡಬೇಕು. ಸರಿಯಾದ ದಾಖಲೆಗಳನ್ನು ಇಟ್ಟುಕೊಳ್ಳದೆ ನಗದು ರವಾನೆ ಮಾಡಿ ಸಿಕ್ಕಿ ಹಾಕಿ ಕೊಳ್ಳಬೇಡಿ ಎಂದಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿ ಬಳಿಕ ಕುಕ್ಕರ್, ತವಾ ಗಿಫ್ಟ್ ಬಾಕ್ಸ್ ವಶ

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಮರಳವಾಡಿ ಗ್ರಾಮದ ಸಮೀಪ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಕುಕ್ಕರ್, ತವಾಗಳಿದ್ದ ವಾಹನವನ್ನು ಜೆಡಿಎಸ್ ಕಾರ್ಯಕರ್ತರು ಹಿಡಿದಿದ್ದಾರೆ. ಮರಳವಾಡಿ ಗ್ರಾಮದಲ್ಲಿ ಮನೆ, ಮನೆಗೆ ಕುಕ್ಕರ್, ತವಾ ಹಂಚಿಕೆ‌ ಮಾಡಲಾಗುತ್ತಿದೆ ಎಂದು ಜೆಡಿಎಸ್‌ ಕಾರ್ಯಕರ್ತರು ಆರೋಪ ಮಾಡಿದ್ದಾರೆ.

ತವಾ ಮತ್ತು ಕುಕ್ಕರ್ ಗಿಫ್ಟ್ ಬಾಕ್ಸ್ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂಸದ‌ ಡಿ‌ಕೆ ಸುರೇಶ್,‌‌ ಶಾಸಕ ಇಕ್ಬಾಲ್ ಹುಸೇನ್ ಅವರ ಭಾವಚಿತ್ರಗಳಿವೆ. ಮರಳವಾಡಿ ಗ್ರಾಮದಲ್ಲಿ ಕುಕ್ಕರ್, ತವಾ ಹಂಚಲಾಗುತ್ತಿದೆ ಎಂದು ಜೆಡಿಎಸ್ ಕಾರ್ಯಕರ್ತರು ಹಾರೋಹಳ್ಳಿ ತಹಸಿಲ್ದಾರ್‌ಗೆ ದೂರು ನೀಡಿದ್ದಾರೆ.

18ನೇ ಲೋಕಸಭೆ ಚುನಾವಣೆಗೆ 7 ಹಂತಗಳಲ್ಲಿ ಮತದಾನದ ದಿನಾಂಕ ಘೋಷಣೆಯಾದ ಮಾರ್ಚ್ 16ರ ಶನಿವಾರ ಮಧ್ಯಾಹ್ನದಿಂದಲೇ ನೀತಿ ಸಂಹಿತೆ ಜಾರಿಯಲ್ಲಿದ್ದು, ಎಲ್ಲಾ ಕಡೆ ಚೆಕ್ ಪೋಸ್ಟ್‌ಗಳನ್ನು ಹಾಕಿ ಪೊಲೀಸರ ನೆರವಿನೊಂದಿಗೆ ಚುನಾವಣಾ ಅಧಿಕಾರಿಗಳು ತೀವ್ರ ತಪಾಸಣೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿರುವ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ.

IPL_Entry_Point