Bangalore News: ಬೆಂಗಳೂರಿನಲ್ಲಿ ಪಿಜಿ ನಡೆಸುತ್ತೀದ್ದೀರಾ, ಈ 10 ಮಾರ್ಗಸೂಚಿಗಳು ಕಡ್ಡಾಯ, ಬಿಬಿಎಂಪಿ ಆದೇಶ-bangalore news running pg in bangalore then fallow 10 guidelines issued by bbmp in the wake of crime cases ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Bangalore News: ಬೆಂಗಳೂರಿನಲ್ಲಿ ಪಿಜಿ ನಡೆಸುತ್ತೀದ್ದೀರಾ, ಈ 10 ಮಾರ್ಗಸೂಚಿಗಳು ಕಡ್ಡಾಯ, ಬಿಬಿಎಂಪಿ ಆದೇಶ

Bangalore News: ಬೆಂಗಳೂರಿನಲ್ಲಿ ಪಿಜಿ ನಡೆಸುತ್ತೀದ್ದೀರಾ, ಈ 10 ಮಾರ್ಗಸೂಚಿಗಳು ಕಡ್ಡಾಯ, ಬಿಬಿಎಂಪಿ ಆದೇಶ

Bangalore PG ಬೆಂಗಳೂರಿನ ಪಿಜಿಗಳಲ್ಲಿನ( Bangalore PG) ಚಟುವಟಿಕೆಗಳ ಮೇಲೆ ನಿಗಾ ಇಡಲು ಬಿಬಿಎಂಪಿ( BBMP Guidelines) ಹತ್ತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.ವರದಿ:ಎಚ್‌.ಮಾರುತಿ, ಬೆಂಗಳೂರು

ಬೆಂಗಳೂರಿನ ಪಿಜಿಗಳಿಗೆ ಬಿಬಿಪಿಎಂ ಹತ್ತು ಮಾರ್ಗಸೂಚಿ ಜಾರಿಗೊಳಿಸಿದೆ.
ಬೆಂಗಳೂರಿನ ಪಿಜಿಗಳಿಗೆ ಬಿಬಿಪಿಎಂ ಹತ್ತು ಮಾರ್ಗಸೂಚಿ ಜಾರಿಗೊಳಿಸಿದೆ.

ಬೆಂಗಳೂರು:ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪೇಯಿಂಗ್‌ ಗೆಸ್ಟ್‌ (ಪಿಜಿ) ಉದ್ಯಮಕ್ಕೆ ಪರವನಗಿ ನೀಡುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(BBMP) ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳನ್ವಯ ಸಿಸಿಟಿವಿ ಕಡ್ಡಾಯ, ಅಧಿಕಾರಿಗಳ ತಪಾಸಣೆ ಕಡ್ಡಾಯಗೊಳಿಸಲಾಗಿದೆ.ಇತ್ತೀಚೆಗೆ ನಗರದ ಪಿಜಿಗಳಲ್ಲಿ ಮಹಿಳೆಯರ ಮೇಲೆ ಹಲ್ಲೆಗಳು ನಡೆಯುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಒಂದು ಪಿಜಿಯಲ್ಲಿ ಪುರುಷನೊಬ್ಬ ಪ್ರವೇಶಿಸಿ ಮಹಿಳಾ ಉದ್ಯೋಗಿಯೊಬ್ಬರನ್ನು ಹತ್ಯೆ ಮಾಡಿದ್ದ ಪ್ರಕರಣ ಬೆಚ್ಚಿಬೀಳಿಸಿತ್ತು. ಮತ್ತೊಂದು ಪ್ರಕರಣದಲ್ಲಿ ನಡು ರಾತ್ರಿಯಲ್ಲಿ ಪಿಜಿಗೆ ನುಗ್ಗಿದ ಕಳ್ಳನೊಬ್ಬ ಮಹಿಳೆಯಬ್ಬರ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಮತ್ತು ಮೊಬೈಲ್‌ ಕಸಿದುಕೊಂಡು ಪರಾರಿಯಾಗಿದ್ದ. ಇನ್ನು ಪಿಜಿಗಳಲ್ಲಿ ಮೊಬೈಲ್‌, ಲ್ಯಾಪ್‌ ಟಾಪ್‌ ಕಳ್ಳತನ ನಡೆಯುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾರ್ಗಸೂಚಿಗಳನ್ನು ರೂಪಿಸಿದೆ.

ಬಿಬಿಎಂಪಿ ಕಾಯಿದೆ-2020 ಪ್ರಕಾರ ಪಿಜಿಗಳಿಗೆ ಉದ್ದಿಮೆ ಪರವಾನಗಿ ನೀಡುವಾಗ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳನ್ನು ಬಿಬಿಎಂಪಿ ಆಯುಕ್ತರು ಹೊರಡಿಸಿದ್ದಾರೆ. ಈಗಾಗಲೇ ಉದ್ದಿಮೆ ಪರವಾನಗಿ ಪಡೆದಿರುವ ಪಿಜಿಗಳೂ ನವೀಕರಣಸಂದರ್ಭದಲ್ಲಿ ಈ ಮಾರ್ಗಸೂಚಿಗಳನ್ನು ಪಾಲಿಸಿರಬೇಕು ಎಂದು ಸೂಚನೆ ನೀಡಲಾಗಿದೆ.

ಒಂದು ವೇಳೆ ಮಾರ್ಗಸೂಚಿಗಳು ಉಲ್ಲಂಘನೆಯಾಗಿದ್ದಲ್ಲಿ ವಲಯ ಆಯುಕ್ತರು, ಪಿಜಿ ಉದ್ದಿಮೆದಾರರ ವಿರುದ್ಧ ಬಿಬಿಎಂಪಿ-2020 ಕಾಯಿದೆ ಪ್ರಕಾರ ಅಗತ್ಯ ಕ್ರಮ ಜರುಗಿಸಬೇಕು ಎಂದು ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ.

ಮಾರ್ಗಸೂಚಿಗಳು ಹೀಗಿವೆ

1.ವಲಯ ಆರೋಗ್ಯಾಧಿಕಾರಿ, ಆರೋಗ್ಯ ವೈದ್ಯಾಧಿಕಾರಿ ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಪಿಜಿಗಳಿಗೆ ಪ್ರತಿ 6 ತಿಂಗಳಿಗೊಮ್ಮೆ ಭೇಟಿ ನೀಡಿ ಮಾರ್ಗಸೂಚಿಗಳು ಪಾಲನೆಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು.

2, ಪಿಜಿಗಳ ಎಲ್ಲ ಪ್ರವೇಶ ಮತ್ತು ನಿರ್ಗಮನ ದ್ವಾರ ಹಾಗೂ ಆವರಣದ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. 90 ದಿನಗಳ ಬ್ಯಾಕ್‌ ಅಪ್‌ ಹೊಂದಿರಬೇಕು.

3. ವಸತಿ ಕಟ್ಟಡಗಳ ನಿಯಮಗಳ ಪ್ರಕಾರ ಪಿಜಿಗಳಲ್ಲಿ ಪ್ರತಿಯೊಬ್ಬ ನಿವಾಸಿಗೂ ಕಡ್ಡಾಯವಾಗಿ 70 ಚದರ ಅಡಿ ಕನಿಷ್ಠ ಸ್ಥಳಾವಕಾಶ ಇರಬೇಕು. ಕಟ್ಟಡದಲ್ಲಿ ಲಭ್ಯವಿರುವಸೌಕರ್ಯ ಗಳಿಗೆ ಅನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿ ನೀಡಬೇಕು.

ಇದನ್ನೂ ಓದಿರಿ: ಪ್ರಕಾಶ್‌ ರಾಜ್‌ ಒಳ್ಳೆಯ ನಟ ಆದರೆ, ಕೆಟ್ಟ ಹೋರಾಟಗಾರ; ವಿನೇಶ್‌ ಫೋಗಟ್‌ ಅನರ್ಹತೆ ಬೆನ್ನಲ್ಲೇ ಚೇತನ್‌ ಅಹಿಂಸಾ ‘ಸಣ್ಣತನ’ದ ಪೋಸ್ಟ್‌

4. ಪಿಜಿಗಳಲ್ಲಿ ವಾಸಿಸುವ ನಿವಾಸಿಗಳಿಗೆ ಶುದ್ದ ಕುಡಿಯುವ ನೀರು ಒದಗಿಸಬೇಕು.ಪ್ರತಿಯೊಬ್ಬರಿಗೂ ಪ್ರತಿದಿನ 135 ಲೀಟರ್‌ ನೀರಿನ ಲಭ್ಯತೆ ಇರುವುದನ್ನು ಕಟ್ಟಡಗಳಮಾಲೀಕರು ಖಾತರಿಪಡಿಸಿಕೊಳ್ಳತಕ್ಕದ್ದು.

5. ಪಿಜಿಗಳಲ್ಲಿ ಮಾಲೀಕರು ತಮ್ಮದೇ ಆದ ಅಡುಗೆ ಮನೆ ಹೊಂದಿದ್ದಲ್ಲಿ ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ ಮೂರು ತಿಂಗಳೊಳಗೆ ಕಡ್ಡಾಯವಾಗಿ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರದಿಂದ ಪರವಾನಗಿ ಪಡೆದುಕೊಂಡಿರಬೇಕು.

6. ಪಿಜಿಗಳಲ್ಲಿ ವಾಸಿಸುವ ಪ್ರತಿಯಬ್ಬರ ಸುರಕ್ಷತೆಗೆ ಕನಿಷ್ಠ ಒಬ್ಬ ಸಿಬ್ಬಂದಿ ದಿನದ 24 ಗಂಟೆಗಳ ಕಾಲ ನಿಯೋಜಿಸಿರಬೇಕು.

7. ಪಿಜಿಗಳು ವಾಣಿಜ್ಯ ಪರವಾನಗಿ ಪತ್ರ ಒಡೆಯುವಾಗ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿರುವ ಕುರಿತು ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರ ಸಲ್ಲಿಸಿರಬೇಕು.

ಇದನ್ನೂ ಓದಿರಿ: Tourism News: ಹೋಂಸ್ಟೇ, ರೆಸಾರ್ಟ್, ಹೋಟೆಲ್‍ಗಳ ನೋಂದಣಿ ಮಾಡಿಸಿಕೊಂಡಿಲ್ಲವೇ; ಮಾಲೀಕರ ವಿರುದ್ದ ಪ್ರವಾಸೋದ್ಯಮ ಇಲಾಖೆ ಕ್ರಮದ ಎಚ್ಚರಿಕೆ

8. ಪಿಜಿ ಕಟ್ಟಡದಲ್ಲಿ ಬಿಬಿಎಂಪಿ ಸಹಾಯವಾಣಿ -1533, ಪೊಲೀಸ್‌ ಇಲಾಖೆಯ ಸಹಾಯವಾಣಿ-101 ಫಲಕವನ್ನು ಪ್ರದರ್ಶಿಸಬೇಕು.

9. ಪಿಜಿಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳ ಅಳವಡಿಕೆ ಕಡ್ಡಾಯ

10. ಪಿಜಿಗಳ ಮಾಲೀಕರು ಘನತ್ಯಾಜ್ಯ ವಿಂಗಡಿಸಿ ವಿಲೇವಾರಿ ಮಾಡಲು ಕ್ರಮಗಳನ್ನು ಅನುಸರಿಸಬೇಕು.

(ವರದಿ: ಎಚ್.ಮಾರುತಿ, ಬೆಂಗಳೂರು)