Breaking News: ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ ಸಾಧ್ಯತೆ-bangalore news sandalwood film star is at bangalore jail in murder case may be shifted to bellary jail shortly kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Breaking News: ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ ಸಾಧ್ಯತೆ

Breaking News: ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ ಸಾಧ್ಯತೆ

Darshan News ಕೊಲೆ ಪ್ರಕರಣದಲ್ಲಿ ಸಿಲುಕಿರುವ ಸ್ಯಾಂಡಲ್‌ ವುಡ್‌ ತಾರೆ ದರ್ಶನ್‌ ತೂಗುದೀಪ ಅವರನ್ನು( Darshan) ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತು ಕರ್ನಾಟಕ ಪೊಲೀಸ್‌ ಇಲಾಖೆ( Karnataka Police department) ಯೋಚಿಸುತ್ತಿದೆ.

ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆಗಳು ಹೆಚ್ಚಾಗಿವೆ.
ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆಗಳು ಹೆಚ್ಚಾಗಿವೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ( Renuka Swamy murder Case) ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು( Film Star Darshan) ಬಳ್ಳಾರಿ ಜೈಲಿಗೆ ( Bellary Jail) ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ( Karnataka Police Department ಸದ್ಯವೇ ತೀರ್ಮಾನ ಕೈಗೊಳ್ಳಲಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ ಹಾಗೂ ಅವರ ತಂಡದವರಿಗೆ ರಾಜಾತಿಥ್ಯ ನೀಡಿದ ಗಂಭೀರ ಆರೋಪಗಳು ಕೇಳಿ ಬಂದ ನಂತರ ಅವರನ್ನು ಬೇರೆ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತದೆ ಎನ್ನುವ ಚರ್ಚೆಗಳು ನಡೆದಿದ್ದವು. ದರ್ಶನ್‌ ಅವರನ್ನು ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಸ್ಥಳಾಂತರಿಸಬಹುದು ಎನ್ನುವ ಚರ್ಚೆಗಳಿದ್ದವು. ಆದರೆ ಅವರನ್ನು ಬಳ್ಳಾರಿಯ ಹಳೆಯ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆಗಳು ಹೆಚ್ಚಿವೆ.

ಮೂರು ದಿನದ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದ ಫೋಟೋ ವೈರಲ್‌ ಆಗಿತ್ತು. ಇದು ತೀವ್ರ ವಿವಾದಕ್ಕೂ ಕಾರಣವಾಗಿತ್ತು. ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನ ಒಂಬತ್ತು ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೇ ದರ್ಶನ್‌ ಅವರನ್ನು ಬೇರೆ ಕಾರಾಗೃಹಕ್ಕೆ ವರ್ಗಾಯಿಸುವ ಚರ್ಚೆಗಳು ಶುರುವಾಗಿದ್ದವು. ಬೆಳಗಾವಿ ಹಿಂಡಲಗಾ ಇಲ್ಲವೇ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಚರ್ಚೆಗಳು ನಡೆದಿದ್ದವು. ಈಗ ಬಹುತೇಕ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಬಹುದು ಎನ್ನಲಾಗುತ್ತಿದೆ.

ದರ್ಶನ್‌ಗೆ ಬೆಂಗಳೂರು ಕಾರಾಗೃಹದಲ್ಲಿ ಸಿಗರೇಟು ಸಹಿತ ನಾನಾ ಸೌಲಭ್ಯ ನೀಡಿರುವ ಜತೆಗೆ ರೌಡಿಗಳ ಜತೆ ಒಟ್ಟಾಗಿ ಕುಳಿತುಕೊಳ್ಳಲು ಅವಕಾಶ ಮಾಡಿರುವ ಆರೋಪ ಕೇಳಿ ಬಂದಿದೆ. ಇದಲ್ಲದೇ ಹಲವರೊಂದಿಗೆ ವಿಡಿಯೋ ಕಾಲ್‌ ಮಾಡಲು ಜೈಲಿನ ಸಿಬ್ಬಂದಿಯೇ ಮೊಬೈಲ್‌ ನೀಡಿದ ಆರೋಪವೂ ಇದೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದರ್ಶನ್‌ ಅವರನ್ನು ಬೆಂಗಳೂರಿನಿಂದ ಬೇರೆ ಕಾರಾಗೃಹಕ್ಕೆ ಸ್ಥಳಾಂತರಿಸುವ ಪ್ರಸ್ತಾವವಿದೆ. ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಕರ್ನಾಟಕ ಪೊಲೀಸ್‌ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.

ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ 9 ಜನರನ್ನು ಅಮಾನತು ಮಾಡಲಾಗಿದೆ. ಪ್ರಕರಣಕ್ಕೆಸಂಬಂಧಿಸಿದಂತೆ ತನಿಖೆ ಕೈಗೊಂಡಿದ್ದು, ವರದಿ ಆಧಾರದ ಮೇಲೆ ತಪ್ಪೆಸಗಿರುವ ಇನ್ನಷ್ಟು ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.