CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ಖಾತೆಗೆ ಟ್ಯಾಗ್‌ ಮಾಡಿ, ನಿಮ್ಮೂರಿನ ಸಮಸ್ಯೆ ಬಗೆಹರಿಸಿಕೊಳ್ಳಿ
ಕನ್ನಡ ಸುದ್ದಿ  /  ಕರ್ನಾಟಕ  /  Cm Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ಖಾತೆಗೆ ಟ್ಯಾಗ್‌ ಮಾಡಿ, ನಿಮ್ಮೂರಿನ ಸಮಸ್ಯೆ ಬಗೆಹರಿಸಿಕೊಳ್ಳಿ

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ಖಾತೆಗೆ ಟ್ಯಾಗ್‌ ಮಾಡಿ, ನಿಮ್ಮೂರಿನ ಸಮಸ್ಯೆ ಬಗೆಹರಿಸಿಕೊಳ್ಳಿ

Social media ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಕ್ಸ್‌ ಖಾತೆಗೆ ತಮ್ಮೂರಿನ ಸಮಸ್ಯೆ, ಪ್ರತಿಭಟನೆಯ ಮಾಹಿತಿಯನ್ನು ಟ್ಯಾಗ್‌ ಮಾಡಿ ಪರಿಹಾರ ಕಂಡುಕೊಂಡಿದ್ದಾರೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರ ಜನ.

ಮುಖ್ಯಮಂತ್ರಿ ಕಚೇರಿ ಸೂಚನೆ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಸರ್ಕಾರಿ ಪ್ರೌಢಶಾಲೆ ಸಮಸ್ಯೆಗಳಿಗೆ ಮುಕ್ತಿ ಸಿಕ್ಕಿದೆ.
ಮುಖ್ಯಮಂತ್ರಿ ಕಚೇರಿ ಸೂಚನೆ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆ ಸರ್ಕಾರಿ ಪ್ರೌಢಶಾಲೆ ಸಮಸ್ಯೆಗಳಿಗೆ ಮುಕ್ತಿ ಸಿಕ್ಕಿದೆ.

ಬೆಂಗಳೂರು: ನಿಮ್ಮೂರಿನ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲವೇ. ಗ್ರಾಮ, ತಾಲ್ಲೂಕು ಇಲ್ಲವೇ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ದೂರು ನೀಡಿದರೂ ಸಮಸ್ಯೆಗೆ ಮುಕ್ತಿ ನೀಡಲು ವಿಳಂಬವಾಗುತ್ತಿದೆಯೇ, ನಿಮ್ಮೂರಿನ ಜನಪ್ರತಿನಿಧಿ ತಿಳಿಸಿದ ನಂತರವೂ ನೀವು ಕಾಯುವ ಸ್ಥಿತಿಯಿದೆಯೇ. ಹಾಗಿದ್ದರೆ ನೀವು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಕ್ಸ್‌ ಖಾತೆಗೆ ಪೋಸ್ಟ್‌ ಮಾಡಿ ಇಲ್ಲವೇ ಸ್ಥಳೀಯ ಅಧಿಕಾರಿ, ಜನಪ್ರತಿನಿಧಿಗೆ ಪೋಸ್ಟ್‌ ಮಾಡಿದ್ದನ್ನು ಸಿಎಂ ಅವರಿಗೆ ಟ್ಯಾಗ್‌ ಮಾಡಿ. ನಿಮ್ಮ ಕೆಲಸ ಖಂಡಿತಾ ಆಗುತ್ತದೆ. ಎಕೆಂದರೆ ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಯೊಂದರ ಮೂಲಸೌಕರ್ಯಗಳ ಬೇಡಿಕೆಗೆ ಮುಕ್ತಿ ಸಿಕ್ಕಿದ್ದು ಸಾಮಾಜಿಕ ಮಾಧ್ಯಮದಿಂದ.

ಸರ್ಕಾರಿ ಪ್ರೌಢಶಾಲೆಯೊಂದರಲ್ಲಿನ ಅವ್ಯವಸ್ಥೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಎಕ್ಸ್ ಖಾತೆಗೆ ಟ್ಯಾಗ್ ಮಾಡಿ ಮುಖ್ಯಮಂತ್ರಿಗಳ ಕಚೇರಿಯ ಗಮನ ಸೆಳೆದ ಪರಿಣಾಮ ತುರ್ತು ಕಾಮಗಾರಿ ಕೈಗೊಂಡು ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ.

ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಗಂಗನಾಳ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಒಳಚರಂಡಿ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಮತ್ತು ನೀರು ಸರಬರಾಜಿಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದ್ದು ಮಾತ್ರವಲ್ಲದೇ ಶಾಲೆಯ ದುರವಸ್ಥೆಯನ್ನು ಕಂಡು ಬೇಸತ್ತಿದ್ದ ಗ್ರಾಮಸ್ಥರು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದಿದ್ದಾರೆ. ಹೆಣ್ಣುಮಕ್ಕಳಿಗೆ ಶೌಚಾಯವಿಲ್ಲದೇ ಇದ್ದರೇ ಹೇಗೆ? ಎಂದು ಪ್ರಶ್ನಿಸಿ ಮುಖ್ಯಮಂತ್ರಿಗಳಿಗೆ ಶಾಲಾ ಮುಖ್ಯಸ್ಥರು ಮುಖ್ಯಮಂತ್ರಿಗಳ ಎಕ್ಸ್ ಖಾತೆಗೆ ಟ್ಯಾಗ್ ಮಾಡಿದ್ದರು.

ಇದು ಮುಖ್ಯಮಂತ್ರಿಗಳ ಕಚೇರಿಯ ಗಮನಕ್ಕೆ ಬಂದು ತಕ್ಷಣವೇ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಶಾಲೆಯ ದುರವಸ್ಥೆಯನ್ನು ಸರಿಪಡಿಸುವಂತೆ ದೂರವಾಣಿ ಮುಖಾಂತರ ಸೂಚಿಸಿ , ಕುಡಿಯುವ ನೀರು, ಬಿಸಿಯೂಟ ಮತ್ತು ಶೌಚಾಲಯಕ್ಕಾಗಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತುರ್ತು ಕಾಮಗಾರಿಯನ್ನು ಕೈಗೊಂಡು ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗಿದೆ. ಶಾಲೆಯ ಹೊರಗೆ ಕಲಿಯುತ್ತಿದ್ದ ಶಾಲಾ ಮಕ್ಕಳು ಈಗ ಶಾಲಾ ಕೊಠಡಿಗಳಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ. ಗ್ರಾಮಸ್ಥರು ಹಾಗೂ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಆದ್ಯತೆ ಮೇರೆಗೆ ಕಲ್ಪಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜನಸ್ಪಂದನ ಕಾರ್ಯಕ್ರಮ ಕೇವಲ ಜನಜಾತ್ರೆ ಅಲ್ಲ. ಜನರ ಅಹವಾಲುಗಳಿಗೆ ಸಕಾರಾತ್ಮಕ ಪರಿಹಾರ ದೊರಕಿಸುವ ಪ್ರಯತ್ನವಾಗಿದೆ. ಇದು ನಿರಂತರ ಪ್ರಕ್ರಿಯೆಯಾಗಿದ್ದು, ವಿವಿಧ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಸಾರ್ವಜನಿಕ ಕುಂದು ಕೊರತೆಗಳನ್ನು ಕೂಡ ಪರಿಗಣಿಸಿ ಬಗೆಹರಿಸಲು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಪ್ರತ್ಯೇಕ ತಂಡವನ್ನು ನಿಯೋಜಿಸಲಾಗಿದ್ದು ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದು ಅಧಿಕಾರಿಗಳ ವಿವರಣೆ.

ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ಎಕ್ಸ್‌ ಖಾತೆ

CM of Karnataka @CMofKarnataka

Whats_app_banner