ಕನ್ನಡ ಸುದ್ದಿ  /  ಕರ್ನಾಟಕ  /  Bengaluru Metro Pillar Collapses: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ನಮ್ಮ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವು

Bengaluru Metro Pillar Collapses: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ನಮ್ಮ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವು

ಬೆಂಗಳೂರಿನ ನಾಗವಾರ ಪ್ರದೇಶದಲ್ಲಿ ಇಂದು ಬೆಳಗ್ಗೆ ನಿರ್ಮಾಣ ಹಂತದ ಮೆಟ್ರೋ ಕುಸಿದು ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಪುಟ್ಟ ಮಕ್ಕಳು ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಮಗು ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ಮಗ ವಿಹಾನ್‌ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ನಮ್ಮ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವು
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ನಮ್ಮ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಉರುಳಿ ತಾಯಿ ಮತ್ತು ಮಗ ಸಾವಿಗೀಡಾದ ದುರಂತ ಘಟನೆ ನಡೆದಿದೆ. ಇಂದು ಬೆಳಗ್ಗೆ ಮೆಟ್ರೋ ಪಿಲ್ಲರ್‌ ಕುಸಿದು ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಅವರ ಇಬ್ಬರು ಪುಟ್ಟ ಮಕ್ಕಳು ಗಾಯಗೊಂಡಿದ್ದರು. ತಕ್ಷಣ ಇವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಇದೀಗ ತಾಯಿ ಮತ್ತು ಒಂದು ಮೃತಪಟ್ಟಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನ ನಾಗವಾರ ಪ್ರದೇಶದಲ್ಲಿ ಇಂದು ಬೆಳಗ್ಗೆ ನಿರ್ಮಾಣ ಹಂತದ ಮೆಟ್ರೋ ಕುಸಿದು ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಮಗು ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ಮಗ ವಿಹಾನ್‌ ಮೃತಪಟ್ಟಿದ್ದಾರೆ. ಮಗುವಿನ ತಂದೆ ಗಾಯಗೊಂಡಿದ್ದಾರೆ. ಹೆಣ್ಣು ಮಗು ಮತ್ತು ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಲ್ಕ್ ಬೋರ್ಡ್‌ನಿಂದ ಏರ್​​​ಪೋರ್ಟ್ ವರೆಗಿನ ನಿರ್ಮಾಣ ಹಂತದ ಮೆಟ್ರೋ ಮಾರ್ಗದಲ್ಲಿ ಮೆಟ್ರೋ ಪಿಲ್ಲರ್‌ ನಿರ್ಮಾಣಕ್ಕೆ ಕಬ್ಬಿಣದ ರಾಡ್‌ಗಳನ್ನು ನಿಲ್ಲಿಸಲಾಗಿತ್ತು. ಈ ಪಿಲ್ಲರ್‌ ರಾಡ್‌ಗಳು ಕುಸಿದ ಸಮಯದಲ್ಲಿ ಕೆಆರ್‌ ಪುರಂನಿಂದ ಹೆಬ್ಬಾಳಕ್ಕೆ ದಂಪತಿಗಳು ತಮ್ಮ ಇಬ್ಬರು ಪುಟ್ಟ ಮಕ್ಕಳ ಜತೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ಕುಟುಂಬದ ಮೇಲೆ ಪಿಲ್ಲರ್‌ ರಾಡ್‌ಗಳು ಬಿದ್ದು ದುರ್ಘಟನೆ ಸಂಭವಿಸಿದೆ.

ಗಾಯಗೊಂಡ ಇವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಗಾಯಗೊಂಡವರಿಗೆ ಹೆಚ್ಚಿನ ಅಪಾಯವಿಲ್ಲ ಎಂದು ಆರಂಭದಲ್ಲಿ ಹೇಳಲಾಗಿತ್ತು. ಇದೀಗ ತಾಯಿ ಮಗುವಿನ ಮರಣ ವಾರ್ತೆ ಬಂದಿದೆ. ಗಾಯಗೊಂಡ ತಂದೆಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕಲ್ಯಾಣ ನಗರದಿಂದ ಎಚ್‌ಆರ್‌ಬಿಆರ್ ಬಡಾವಣೆಗೆ ಹೋಗುವ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್‌ ಕುಸಿದಿದೆ. ಲೋಹಿತ್‌ ಕುಮಾರ್‌, ಪತ್ನಿ ತೇಜಸ್ವಿನಿ, ಇಬ್ಬರು ಪುಟ್ಟ ಮಕ್ಕಳು ಬೈಕ್‌ನಲ್ಲಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಿದೆ ತಾಯಿ ಮಗು ಮೃತಪಟ್ಟಿದ್ದಾರೆ.

ಲೋಹಿತ್‌ ಕುಮಾರ್‌ ಅವರು ಬೆಂಗಳೂರಿನ ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿರುವ ಮೋಟೊರೊಲಾ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ತೇಜಸ್ವಿನಿ ನಾಗವಾರದಲ್ಲಿ ನೆಲೆಸಿದ್ದರು. ತನ್ನ ಮಕ್ಕಳನ್ನು ಬೇಬಿ ಸಿಟ್ಟಿಂಗ್‌ಗೆ ಬಿಡಲು ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.

ಈ ಘಟನೆ ಕುರಿತು ಬಸವರಾಜ ಬೊಮ್ಮಾಯಿ ಮಾಹಿತಿ ಪಡೆದುಕೊಂಡಿದ್ದು, ದುರ್ಘಟನೆ ಕುರಿತು ಹೆಚ್ಚಿನ ಮಾಹಿತಿ ಪಡೆಯುವುದಾಗಿ ಹೇಳಿದ್ದಾರೆ.

IPL_Entry_Point