ಬಂಟ್ವಾಳ: ಕುರಿಯಾಳ ಗ್ರಾಮದ ಇರಾಕೋಡಿ ರಹಿಮಾನ್ ಕೊಲೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಸೆರೆ, ಪ್ರಗತಿಯಲ್ಲಿದೆ ತನಿಖೆ
ಕನ್ನಡ ಸುದ್ದಿ  /  ಕರ್ನಾಟಕ  /  ಬಂಟ್ವಾಳ: ಕುರಿಯಾಳ ಗ್ರಾಮದ ಇರಾಕೋಡಿ ರಹಿಮಾನ್ ಕೊಲೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಸೆರೆ, ಪ್ರಗತಿಯಲ್ಲಿದೆ ತನಿಖೆ

ಬಂಟ್ವಾಳ: ಕುರಿಯಾಳ ಗ್ರಾಮದ ಇರಾಕೋಡಿ ರಹಿಮಾನ್ ಕೊಲೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಸೆರೆ, ಪ್ರಗತಿಯಲ್ಲಿದೆ ತನಿಖೆ

ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ. 27ರಂದು ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ಬಂಧನವಾಗಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)

ರಹಿಮಾನ್ ಕೊಲೆ ಕೇಸ್ ಸಂಬಂಧಿಸಿ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. (ಕಡತ ಚಿತ್ರ)
ರಹಿಮಾನ್ ಕೊಲೆ ಕೇಸ್ ಸಂಬಂಧಿಸಿ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. (ಕಡತ ಚಿತ್ರ)

ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಮೇ. 27ರಂದು ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಸೆರೆಹಿಡಿದಿರುವುದಾಗಿ ಪೊಲೀಸರು ತಿಳಿಸಿದ್ಧಾರೆ.

ರಹಿಮಾನ್ ಕೊಲೆ ಪ್ರಕರಣ, ಮತ್ತಿಬ್ಬರು ಆರೋಪಿಗಳ ಸೆರೆ

ಪ್ರಕರಣದಲ್ಲಿ ಈಗಾಗಲೇ 5 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಂತೆ ಮಂಗಳವಾರ ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ(32), ಬಡಗಬೆಳ್ಳೂರು ಗ್ರಾಮದ ತೇಜಾಕ್ಷ (24) ಎಂಬಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಐದು ತನಿಖಾ ತಂಡಗಳಿಂದ ತನಿಖೆ

ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಪ್ರಥ್ವೀರಾಜ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಚಿಂತನ್ (19) ಅವರನ್ನು ತನಿಖಾ ತಂಡ ಮೇ 29ರಂದು ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ವಶಕ್ಕೆ ಪಡೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದರು. ಬಳಿಕ ತನಿಖೆ ಮುಂದುವರಿದರೆ, ಮೇ 30ರಂದು ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27), ಬಡಗಬೆಳ್ಳೂರಿನ ರವಿರಾಜ್ (23) ಅವರನ್ನು ವಶಕ್ಕೆ ಪಡೆಯಲಾಗಿತ್ತು. ಬಂಟ್ವಾಳ ಪೊಲೀಸ್ ಉಪಾಕ್ಷಕ ವಿಜಯಪ್ರಸಾದ್ ತನಿಖಾಕಾಧಿರಿಯಾಗಿ, ಐದು ತನಿಖಾ ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ.

(ವರದಿ- ಹರೀಶ್ ಮಾಂಬಾಡಿ, ಮಂಗಳೂರು)

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.