Halappa Achar: 'ಬಸವರಾಜ ರಾಯರೆಡ್ಡಿಯ ಸುಳ್ಳಿನ ರಾಜಕಾರಣದಿಂದ ಯಾವುದೇ ಪ್ರಯೋಜನವಿಲ್ಲ, ಇನ್ನು ಮುಂದಾದರೂ ಸತ್ಯ ಹೇಳಲಿ'
ಕಾಂಗ್ರೆಸ್ ಮುಖಂಡ ಬಸವರಾಜ ರಾಯರೆಡ್ಡಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದು, ಇನ್ನು ಮುಂದಾದರೂ ಜನರ ಮುಂದೆ ಸತ್ಯ ಹೇಳುವ ಕೆಲಸ ಮಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ಕೊಪ್ಪಳ: ಕಾಂಗ್ರೆಸ್ ಮುಖಂಡ ಬಸವರಾಜ ರಾಯರೆಡ್ಡಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದು, ಇನ್ನು ಮುಂದಾದರೂ ಜನರ ಮುಂದೆ ಸತ್ಯ ಹೇಳುವ ಕೆಲಸ ಮಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕುಕನೂರ ಪಟ್ಟಣದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆ ಮತ್ತು ಬಿಜೆಪಿ ಪ್ರಮುಖರ ಸಮಾವೇಶದ ನಂತರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹಾಲಪ್ಪ ಆಚಾರ್, ಬಸವರಾಜ ರಾಯರೆಡ್ಡಿ ನೂರಾರು ಘೋಷಣೆ ಮಾಡಿದ್ದಾರೆ. ಆದರೆ ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಕಾಲೇಜು ನಿರ್ಮಾಣಕ್ಕೆ ಸೂಕ್ತ ಜಾಗ ಕೂಡ ಕೊಡಲು ಅವರಿಗೆ ಸಾಧ್ಯವಾಗಿಲ್ಲ ಎಂದರು.
ಕ್ಷೇತ್ರದ ಜನರನ್ನು ಯಾಮಾರಿಸಿರುವ, ವಂಚಿಸಿರುವ ಬಸವರಾಜ ರಾಯರಡ್ಡಿಗೆ ಈಗ ಮತ ಕೇಳಲು ಯಾವ ಯೋಗ್ಯತೆಯೂ ಇಲ್ಲ. ಮೂರು ದಶಕಗಳ ಕಾಲ ರಾಜಕಾರಣದಲ್ಲಿದ್ದರೂ ನೀರಾವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅವರು ಯಾವುದೇ ಕೆಲಸ ಮಾಡಿಲ್ಲ. ರಾಯರಡ್ಡಿ ಮಾಡುತ್ತಿರುವ ಸುಳ್ಳಿನ ರಾಜಕಾರಣದಿಂದ ಯಾರಿಗೂ ಪ್ರಯೋಜನವಿಲ್ಲ. ಇನ್ನು ಮುಂದಾದರೂ ಜನರ ಮುಂದೆ ಸತ್ಯ ಹೇಳುವ ಕೆಲಸ ಮಾಡಲಿ ಎಂದು ಹೇಳಿದರು.
ನಾನು ಮೊದಲ ಬಾರಿಗೆ ಶಾಸಕನಾಗಿದ್ದ ಸಂದರ್ಭದಲ್ಲಿ ಶಿಕ್ಷಣ ಮತ್ತು ನೀರಾವರಿಗೆ ಆದ್ಯತೆ ಕೊಡಬೇಕು ಎಂದು ನಿರ್ಧಾರ ಮಾಡಿದ್ದೆ. ಅದರಂತೆ ಶಿಕ್ಷಣ ವಲಯದ ಅಭ್ಯುದಯಕ್ಕಾಗಿ ಗುಣಮಟ್ಟದ ಕಾಲೇಜುಗಳನ್ನು ತಂದಿದ್ದೇನೆ. ನೀರಾವರಿ ಸೌಲಭ್ಯ ಕಲ್ಪಿಸುವ ಕೆಲಸ ಮಾಡಿದ್ದೇನೆ ಎಂದರು ಸಚಿವ ಹಾಲಪ್ಪ ಆಚಾರ್.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಡೀ ಜಗತ್ತು ಭಾರತವನ್ನು ನಿಬ್ಬೆರಗಾಗಿ ನೋಡುವಂತೆ ಮಾಡಿದ್ದಾರೆ. ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗಳನ್ನು ಮೂರು ಪಟ್ಟು ಹೆಚ್ಚಿಸಿದ್ದು, ಅನೇಕ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಚಿವ ಆನಂದ ಸಿಂಗ್, ಸಂಸದ ಸಂಗಣ್ಣ ಕರಡಿ, ಶಾಸಕ ಬಸವರಾಜ್ ದಡೇಸಗೂರು, ಪಕ್ಷದ ಮುಖಂಡರಾದ ಹೇಮಲತಾ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಗಮನಿಸಬಹುದಾದ ಇತರೆ ಸುದ್ದಿಗಳು
Quarrying Lease Rules: ಕಲ್ಲುಗಣಿಗಾರಿಕೆ ಗುತ್ತಿಗೆ ನಿಯಮಗಳ ಪರಿಷ್ಕರಣೆಗೆ ಕ್ರಮ - ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಸಚಿವ ಸಂಪುಟ ಉಪ ಸಮಿತಿಯು ಸಭೆ ನಡೆಸಿ ಎಂ. ಸ್ಯಾಂಡ್ ಮತ್ತು ಕಟ್ಟಡ ಕಲ್ಲಿನ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸಲು ಕರ್ನಾಟಕ ಉಪಖನಿಜ ರಿಯಾಯತಿ ನಿಯಮಗಳು 1994ಕ್ಕೆ ಅಗತ್ಯ ತಿದ್ದುಪಡಿ ತಂದು ನಿಯಮ ಸರಳೀಕರಣಕ್ಕೆ ಶಿಫಾರಸ್ಸು ಸಲ್ಲಿಸಿದ್ದು, ನಿಯಮ ಸರಳೀಕರಣ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದರು. ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ
Nandi hills ropeway: ನಂದಿಬೆಟ್ಟಕ್ಕೆ ರೋಪ್‌ವೇ; ಡೈನಾಮಿಕ್ಸ್ ರೋಪ್‍ವೇ ಜತೆಗೆ ಪ್ರವಾಸೋದ್ಯಮ ಇಲಾಖೆ ಒಪ್ಪಂದ
ನಂದಿ ಬೆಟ್ಟದಲ್ಲಿ ಪ್ಯಾಸೆಂಜರ್ ರೋಪ್‍ವೇ ಅಭಿವೃದ್ಧಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ಸ್ ರೋಪ್‍ವೇ ಪ್ರೈವೇಟ್ ಲಿಮಿಟೆಡ್ ಜತೆ ಒಪ್ಪಂದಕ್ಕೆ ಸಹಿ ಹಾಕಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೋಪ್‍ವೇ ಅಭಿವೃದ್ಧಿಪಡಿಸುವ ಈ ಯೋಜನೆಗೆ 93.40 ಕೋಟಿ ರೂಪಾಯಿ ವೆಚ್ಚ ಅಂದಾಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ