ಕನ್ನಡ ಸುದ್ದಿ  /  ಕರ್ನಾಟಕ  /  ಬೆಳಗಾವಿಯ ಹೂಲಿಕಟ್ಟೆ ಕರಿಯಮ್ಮನ ದೇವಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಳಗಾವಿಯ ಹೂಲಿಕಟ್ಟೆ ಕರಿಯಮ್ಮನ ದೇವಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬೆಳಗಾವಿ ಜಿಲ್ಲೆಯ ಹೂಲಿಕಟ್ಟಿ ಗ್ರಾಮದಲ್ಲಿ ನಡೆದ ಭೀರೇಶ್ವರ ಮತ್ತು ಕರೆಮ್ಮ ದೇವಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿಯ ಹೂಲಿಕಟ್ಟೆ ಕರಿಯಮ್ಮನ ದೇವಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯ ಹೂಲಿಕಟ್ಟೆ ಕರಿಯಮ್ಮನ ದೇವಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಬುಧವಾರ (ಮೇ 22) ನಡೆದ ಭೀರೇಶ್ವರ ಮತ್ತು ಕರಿಯಮ್ಮನ ದೇವಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರಾದವರನ್ನು ತಕ್ಷಣ ಸವದತ್ತಿ ಸಾರ್ವಜನಿಕ ಆಸ್ಪತ್ರೆ ಮತ್ತು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಐವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಈ ಐವರು ವಯೋವೃದ್ಧರು ಎಂದು ವರದಿಯಾಗಿದೆ.

ಟ್ರೆಂಡಿಂಗ್​ ಸುದ್ದಿ

ಪ್ರಸಾದ ಸೇವಿಸಿದ ನಂತರ ಜನರು ವಾಂತಿ ಮಾಡಲು ಪ್ರಾರಂಭಿಸಿದ್ದಾರೆ. ನಂತರ ಭೇದಿಯ ಅನುಭವವು ಆಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಹೂಲಿಕಟ್ಟಿ ಗ್ರಾಮದಲ್ಲಿ ಬೀಡುಬಿಟ್ಟಿದ್ದು, ಗ್ರಾಮಸ್ಥರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಗ್ರಾಮದಲ್ಲಿ ಶಿಬಿರವನ್ನು ತೆರೆಯಲಾಗಿದ್ದು, ತಾಲ್ಲೂಕು ವೈದ್ಯರು ಎಲ್ಲರ ಆರೋಗ್ಯವನ್ನು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಕಾರಣ ತಿಳಿಯಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಪರಿಶೀಲಿಸಿ ಮಾಹಿತಿ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಕೂಡ ಇಂತಹ ಘಟನೆಗಳು ನಡೆದಿದ್ದು, ಇದೀಗ ಮತ್ತೆ ಮರುಕಳಿಸಿದೆ.

ಮೈಸೂರಿನ ಕೆ ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವು, ಹಲವರು ಅಸ್ವಸ್ಥ

ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಹಲವರು ಅಸ್ವಸ್ಥಗೊಂಡಿದ್ದರು. ಈ ಪೈಕಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದರು. ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024