Praveen Nettar: ಚಿತ್ರಗಳು- ಪ್ರವೀಣ್ ನೆಟ್ಟಾರು ಅಂತಿಮ ದರ್ಶನಕ್ಕೆ ಜನಸಾಗರ, ಅಂತಿಮ ಯಾತ್ರೆಯ ದೃಶ್ಯಗಳು
- ಪ್ರವೀಣ್ ನೆಟ್ಟಾರು ಹತ್ಯೆಗೀಡಾದ ಬಳಿಕ ಬೆಳ್ಳಾರೆಯಲ್ಲಿ ಶೋಕಸಾಗರ ಮಡುಗಟ್ಟಿದ್ದು, ಇಂದು ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ಪ್ರವೀಣ್ ನೆಟ್ಟಾರು ಮೃತದೇಹದ ಅಂತಿಮ ದರ್ಶನಕ್ಕೆ ಸಾವಿರಾರು ಜನರು ಸೇರಿದ್ದಾರೆ. ಬೆಳ್ಳಾರೆಯಿಂದ ಪೆರುವಾಜೆಗೆ ಹೋಗುವ ಕ್ರಾಸ್ ಬಳಿ ಕೋಳಿ ಮಾಂಸದಂಗಡಿ ಹೊಂದಿರುವ ಪ್ರವೀಣ್ ನೆಟ್ಟಾರು ಅವರು ರಾತ್ರಿ ಅಂಗಡಿಗೆ ಬಾಗಿಲು ಹಾಕುತ್ತಿರುವಾಗ ಬೈಕೊಂದರಲ್ಲಿ ಮೂವರು ದುಷ್ಕರ್ಮಿಗಳು ಬಂದು ಮಾರಾಕಾಸ್ತ್ರಗಳಿಂದ ಏಕಾಏಕೆ ದಾಳಿ ಮಾಡಿ ಹತ್ಯೆ ಮಾಡಿದ್ದರು.

(3 / 11)
ಖಡಕ್ ಪೊಲೀಸ್ ಅಧಿಕಾರಿಯೆಂದೇ ಖ್ಯಾತಿ ಪಡೆದಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಕುಮಾರ್ ಈಗಾಗಲೇ ಬೆಳ್ಳಾರೆಯಲ್ಲಿದ್ದು, ಯಾವುದೇ ಅಹಿತ ಘಟನೆಗಳು ನಡೆಯದಂತೆ ಪೊಲೀಸರಿಗೆ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ.
(4 / 11)
ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಅಕ್ಷಯ ಚಿಕನ್ ಸೆಂಟರ್ ಮಾಲಕರಾಗಿರುವ ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆ-ಕುಂಬ್ರ ರಸ್ತೆಯ ನೆಟ್ಟಾರಿನವರು. ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ. ನಿನ್ನೆ ಇವರನ್ನು ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಅವರ ಮೃತದೇಹದ ಅಂತಿಮ ದರ್ಶನಕ್ಕೆ ಇಂದು ಬೆಳ್ಳಾರೆಯಲ್ಲಿ ಜನ ಸೇರಿದ್ದಾರೆ.
(9 / 11)
ಪುತ್ತೂರಿನಿಂದ ಪ್ರವೀಣ್ ನೆಟ್ಟಾರು ಅವರ ಮೃತದೇಹ ಹೊರಟ ಸಂದರ್ಭದಲ್ಲಿಯೇ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಸಾಕಷ್ಟು ಜನರು ನೆರೆದಿದ್ದು, ಅಂತಿಮ ದರ್ಶನಕ್ಕಾಗಿ ಕಾಯುತ್ತಿದ್ದಾರೆ.
ಇತರ ಗ್ಯಾಲರಿಗಳು