ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ವೃದ್ಧ ದಂಪತಿಯ ಹೆದರಿಸಿ 5 ಕೋಟಿ ರೂ ದೋಚಿದ ಆರೋಪಿಗಳ ಬಂಧನ; ಮಹಿಳೆಯರನ್ನು ಚುಂಬಿಸಿದ್ದ ಆರೋಪಿಯ ಸೆರೆ
ಕನ್ನಡ ಸುದ್ದಿ  /  ಕರ್ನಾಟಕ  /  ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ವೃದ್ಧ ದಂಪತಿಯ ಹೆದರಿಸಿ 5 ಕೋಟಿ ರೂ ದೋಚಿದ ಆರೋಪಿಗಳ ಬಂಧನ; ಮಹಿಳೆಯರನ್ನು ಚುಂಬಿಸಿದ್ದ ಆರೋಪಿಯ ಸೆರೆ

ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ವೃದ್ಧ ದಂಪತಿಯ ಹೆದರಿಸಿ 5 ಕೋಟಿ ರೂ ದೋಚಿದ ಆರೋಪಿಗಳ ಬಂಧನ; ಮಹಿಳೆಯರನ್ನು ಚುಂಬಿಸಿದ್ದ ಆರೋಪಿಯ ಸೆರೆ

ಬೆಂಗಳೂರು ಅಪರಾಧ ಸುದ್ದಿ: ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ವೃದ್ಧ ದಂಪತಿಯ ಹೆದರಿಸಿ 5 ಕೋಟಿ ರೂ ದೋಚಿದ ಆರೋಪಿಗಳ ಬಂಧಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಪ್ರತ್ಯೇಕ ಪ್ರಕರಣದಲ್ಲಿ ಮಹಿಳೆಯರನ್ನು ಚುಂಬಿಸಿದ್ದ ಆರೋಪಿಯನ್ನೂ ಸೆರೆಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ವರದಿ- ಎಚ್.ಮಾರುತಿ, ಬೆಂಗಳೂರು)

ಬೆಂಗಳೂರು ಅಪರಾಧ ಸುದ್ದಿ; ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ವೃದ್ಧ ದಂಪತಿಯ ಹೆದರಿಸಿ 5 ಕೋಟಿ ರೂ ದೋಚಿದ ಆರೋಪಿಗಳ ಬಂಧನವಾಗಿದೆ. ಪ್ರತ್ಯೇಕ ಪ್ರಕರಣದಲ್ಲಿ ಮಹಿಳೆಯರನ್ನು ಚುಂಬಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. (ಸಾಂಕೇತಿಕ ಚಿತ್ರ)
ಬೆಂಗಳೂರು ಅಪರಾಧ ಸುದ್ದಿ; ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ ವೃದ್ಧ ದಂಪತಿಯ ಹೆದರಿಸಿ 5 ಕೋಟಿ ರೂ ದೋಚಿದ ಆರೋಪಿಗಳ ಬಂಧನವಾಗಿದೆ. ಪ್ರತ್ಯೇಕ ಪ್ರಕರಣದಲ್ಲಿ ಮಹಿಳೆಯರನ್ನು ಚುಂಬಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ವೃದ್ಧ ದಂಪತಿಯನ್ನು ಹೆದರಿಸಿ ಬೆದರಿಸಿ ವಂಚಿಸಿದ್ದ ಆರೋಪಿಗಳನ್ನು ಆಗ್ನೇಯ ವಿಭಾಗದ ಸೈಬರ್‌ ಪೊಲೀಸರು ಬಂಧಿಸಿದ್ದಾರೆ. ನಾರಾಯಣ ಸಿಂಗ್‌ ಚೌಧರಿ ಮತ್ತು ಈಶ್ವರ್‌ ಸಿಂಗ್‌ ಬಂಧಿತ ಆರೋಪಿಗಳು.ಇವರು ವೃದ್ಧ ದಂಪತಿಗಳಿಂದ ಸುಮಾರು 4.79 ಕೋಟಿ ರೂಪಾಯಿ ಸುಲಿಗೆ ಮಾಡಿದ್ದರು.

ಇವರ ವಿರುದ್ಧ ಮಂಜುನಾಥ್ ಎಂಬುವರು ದೂರು ನೀಡಿದ್ದರು. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು. ಈ ವಂಚಕರು ದಂಪತಿಯನ್ನು ಬೆದರಿಸಿ, ಸೈಬರ್ ವಂಚಕರು ಹಂತ ಹಂತವಾಗಿ 4.79 ಕೋಟಿ ರೂಪಾಯಿ ಸುಲಿಗೆ ಮಾಡಿ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಬಲವಂತವಾಗಿ ಪಡೆದುಕೊಂಡಿದ್ದರು. ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ವೃದ್ಧ ದಂಪತಿ ಸೈಬ‌ರ್ ಠಾಣೆಗೆ ದೂರು ನೀಡಿದ್ದರು ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ.

ವೃತ್ತಿಯಿಂದ ಎಂಜಿನಿಯರ್ ಆಗಿದ್ದ ಮಂಜುನಾಥ್ ಅವರು ನೈಜೀರಿಯಾದಲ್ಲಿ 31 ವರ್ಷ ಕೆಲಸ ಮಾಡಿದ್ದ ನಿವೃತ್ತಿ ಹೊಂದಿದ್ದರು. ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ನೆಲಸಿದ್ದರು. ವಿವಿಧ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ್ದು ಹಣವನ್ನು ಇಟ್ಟಿದ್ದರು.

ಬ್ಯಾಂಕ್ ಪ್ರತಿನಿಧಿಗಳ ಸೋಗಿನಲ್ಲಿ ಮಾರ್ಚ್ ಮೊದಲ ವಾರದಲ್ಲಿ ಮಂಜುನಾಥ್ ಅವರಿಗೆ ಸೈಬರ್ ವಂಚಕರು ಕರೆ ಮಾಡಿ ತಮ್ಮ ಬ್ಯಾಂಕ್ ಖಾತೆಗಳ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗುತ್ತಿದ್ದು, ಅದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದರು., ನಕಲಿ ಬಂಧನದ ವಾರಂಟ್ ಪ್ರತಿಯನ್ನು ಮಂಜುನಾಥ್ ಅವರ ವಾಟ್ಸಾಪ್‌ ಗೆ ಕಳುಹಿಸಿ, ತಮ್ಮನ್ನು ಬಂಧಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಒಂದು ವೇಳೆ ಬಂಧಿಸಬಾರದು ಎಂದಾದರೆ ಹಣ ನೀಡುವಂತೆ ಕೇಳಿದ್ದರು.

ಇವರ ಬೆದರಿಕೆಯಿಂದ ಆತಂಕಗೊಂಡಿದ್ದ ದಂಪತಿ, ಹಂತ ಹಂತವಾಗಿ ಸೈಬರ್ ವಂಚಕರಿಗೆ 4.79 ಕೋಟಿ ರೂಪಾಯಿ ಹಣ ನೀಡಿದ್ದರು. ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನೂ ಸೈಬ‌ರ್ ವಂಚಕರು ಪಡೆದುಕೊಂಡಿದ್ದರು. ಮತ್ತಷ್ಟು ಹಣ ನೀಡುವಂತೆ ಪೀಡಿಸಿದಾಗ ವೃದ್ಧ ದಂಪತಿ ಆಗ್ನೆಯ ವಿಭಾಗದ ಸೈಬರ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ.

ಈ ಹಣದಿಂದ ಆರೋಪಿಗಳು ಶ್ರೀಲಂಕಾಗೆ ತೆರಳಿ ಮೋಜಿನ ಜೀವನ ನಡೆಸಿ ಬಂದಿದ್ದರು. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದ್ದು, ಹಣವನ್ನು ಜಪ್ತಿ ಮಾಡಿಕೊಳ್ಳುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.

ಮಹಿಳೆಯರನ್ನು ಚುಂಬಿಸಿದ್ದ ಆರೋಪಿ ಬಂಧನ

ಇಬ್ಬರು ಮಹಿಳೆಯರನ್ನು ತಬ್ಬಿಕೊಂಡು ಬಲವಂತವಾಗಿ ಚುಂಬಿಸಿ ಪರಾರಿಯಾಗಿದ್ದ ಆರೋಪಿಯನ್ನು ಪುಲಿಕೇಶಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಣಸವಾಡಿ ನಿವಾಸಿ ಮದನ್ (37) ಬಂಧಿತ ಆರೋಪಿ. ಸ್ನಾತಕೋತ್ತರ ಪದವೀಧರನಾದ ಈತ ಜೂನ್ 6ರಂದು ಕೃತ್ಯ ಎಸಗಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಠಾಣಾ ವ್ಯಾಪ್ತಿಯ ಉದ್ಯಾನವೊಂದರಲ್ಲಿ ಮಹಿಳೆಯೊಬ್ಬರು ವಾಯುವಿಹಾರ ನಡೆಸುತ್ತಿದ್ದಾಗ ಆರೋಪಿ ಮಹಿಳೆಯನ್ನು ಆರೋಪಿ ಬಲವಂತವಾಗಿ ತಬ್ಬಿಕೊಂಡು ಚುಂಬಿಸಿದ್ದ. ಅದೇ ದಿನ ಸಂಜೆ ಅಂಗಡಿಯೊಂದರಲ್ಲಿ ವ್ಯಾಪಾರ ಮಾಡುತ್ತಾ ನಿಂತಿದ್ದ ಮಹಿಳೆಯೊಂದಿಗೂ ಇದೇ ರೀತಿ ವರ್ತಿಸಿದ್ದ. ಪ್ರಕರಣದಿಂದ ಹೆದರಿಕೊಂಡಿದ್ದ ಇಬ್ಬರೂ ಮಹಿಳೆಯರು ಜೋರಾಗಿ ಕೂಗಿಕೊಂಡಿದ್ದರು. ಆದರೆ ಆರೋಪಿ ಸ್ತಳೀಯರಿಂದ ತಪ್ಪಿಸಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಸ್ಥಳೀಯರು ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲಿಸಿ ಆರೋಪಿ ಪರಾರಿಯಾಗುತ್ತಿರುವ ದೃಶ್ಯವು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆ ಆಗಿತ್ತು. ಈ ದೃಶ್ಯಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಯು ಪೋಷಕರ ಜತೆಗೆ ಬಾಣಸವಾಡಿಯಲ್ಲಿ ವಾಸಿಸುತ್ತಿದ್ದ. ಈ ಹಿಂದೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗಲೂ ವಿಚಿತ್ರವಾಗಿ ವರ್ತಿಸುತ್ತಿದ್ದ ಎಂದು ತಿಳಿದು ಬಂದಿದೆ. ಆರೋಪಿಯನ್ನು ಪರೀಕ್ಷಿಸಿದ್ದ ವೈದ್ಯರು, ಮದನ್ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾನೆ ಎಂದು ಹೇಳಿದ್ದರು ಎಂದು ಪೋಷಕರು ತಿಳಿಸಿದ್ದಾರೆ.

(ವರದಿ- ಎಚ್ ಮಾರುತಿ, ಬೆಂಗಳೂರು)

ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.